ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಮಲ್ಲಿಕ್ಯಾತನಹಳ್ಳಿ ಬಳಿ ವಾಹನ ನಿಲುಗಡೆ ಹಾಗೂ ವೇದಿಕೆ ಕಾರ್ಯಕ್ರಮ ನಡೆಯುವ ಜಾಗವನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಜಲಪಾತೋತ್ಸವ ಯಶಸ್ಸಿಗೆ ಬೇಕಾದ ಸಿದ್ಧತೆಗಳ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು.
ದಸರಾ ಜೊತೆಗೆ ನಿರಂತರ ಕಾರ್ಯಕ್ರಮಗಳು ಇರುವುದರಿಂದ ಸೆ.13 ಮತ್ತು 14ರಂದು ಜಲಪಾತೋತ್ಸವ ಆಯೋಜಿಸಲಾಗಿದೆ. ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಜಲಪಾತೋತ್ಸವಕ್ಕೆ ವಿನೂತನ ಲೈಟಿಂಗ್ಸ್ ಮತ್ತು ಲೇಸರ್ ಶೋ ಇರಲಿದೆ. ಅಲ್ಲದೇ ಜಲಪಾತೋತ್ಸವದ ಬಳಿಯಿಂದ ವೇದಿಕೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ನೇರಪ್ರಸಾರದ ವ್ಯವಸ್ಥೆ ಇರುತ್ತದೆ ಎಂದರು.ಎರಡು ದಿನಗಳ ಕಾರ್ಯಕ್ರಮಕ್ಕೆ ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ವೇದಿಕೆ ಕಾರ್ಯಕ್ರಮದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ನೃತ್ಯಗಳಿಗೆ ಅವಕಾಶ ನೀಡುವ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ತಾಲೂಕಿನಿಂದ ಬರುವ ಜನರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಜಿಲ್ಲಾ ಕೇಂದ್ರದಿಂದ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತದೆ. ಊಟ, ಕುಡಿಯುವ ನೀರು ಹಾಗೂ ಪ್ರತ್ಯೇಕ ಶೌಚಾಯಲದ ವ್ಯವಸ್ಥೆ ಮಾಡಲಾಗಿದೆ. ಎರಡು ದಿನಗಳು ವಿವಿಧ ಮಳಿಗೆಗಳನ್ನು ತೆರೆಯುವ ಸಂಬಂಧ ಅಧಿಕಾರಿಗಳು ನಿರ್ಧರಿಸಲಿದ್ದಾರೆ. ಇಲ್ಲಿನ ವ್ಯಾಪಾರಿಗಳಿಗೆ ಮಲ್ಲಿಕ್ಯಾತನಹಳ್ಳಿ ಬಳಿಯೇ ಸ್ಥಳಾವಕಾಶ ನೀಡಲಾಗುತ್ತದೆ ಎಂದು ಹೇಳಿದರು.
ಮಲ್ಲಿಕ್ಯಾತನಹಳ್ಳಿ ಸಮೀಪವೇ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ, ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ತಹಸೀಲ್ದಾರ್ ಎಸ್.ವಿ.ಲೋಕೇಶ್, ಡಿವೈಎಸ್ಪಿ ವಿ.ಕೃಷ್ಣಪ್ಪ, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ವಿವಿಧ ಇಲಾಖೆಗಳ ಅಧಿಕಾರಿಗಳಾದ ಎ.ಎಂ.ಸೋಮಶೇಖರ್, ಅಪ್ಪಣ್ಣ ಬೋಯಿ, ಎಚ್.ಎಸ್.ಪ್ರೇಮ್ ಕುಮಾರ್, ಭರತೇಶ್ ಕುಮಾರ್, ರಂಗಸ್ವಾಮಿ, ಮನ್ಮುಲ್ ನಿರ್ದೇಶಕರಾದ ಆರ್.ಎನ್.ವಿಶ್ವಾಸ್, ಡಿ.ಕೃಷ್ಣೇಗೌಡ, ಸಿಪಿಐ ಬಿ.ಎಸ್.ಶ್ರೀಧರ್, ಎಂ.ಪಿ.ರವಿಶಂಕರ್, ಎಚ್.ಎಸ್.ಲಂಕೇಶ್, ಪಿಡಿಒ ಕುಮಾರ್, ಗ್ರಾಪಂ ಉಪಾಧ್ಯಕ್ಷ ಬಿ.ರಘು, ಮುಖಂಡರಾದ ಕೆ.ಜೆ.ದೇವರಾಜು, ಮಹದೇವು, ಶ್ರೀಕಾಂತ್, ಶ್ರೀನಿವಾಸ್, ಸಿ.ಎಂ.ವೇದಮೂರ್ತಿ, ಅಶ್ವತ್ಥ್ ಕುಮಾರ್ ಪಾಲ್ಗೊಂಡಿದ್ದರು.