ಜ್ಞಾನ ಪಡೆಯುವುದು ನಿಜವಾದ ಶಿಕ್ಷಣ: ಸುಮಾ

KannadaprabhaNewsNetwork |  
Published : Mar 04, 2026, 02:30 AM IST
ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಚಾರಗೋಷ್ಠಿ ಕಾರ್ಯಾಗಾರ ನಡೆಯಿತು. | Kannada Prabha

ಸಾರಾಂಶ

ಶಿಕ್ಷಣ ಮತ್ತು ಕಾನೂನಿನ ಅರಿವು ಪಡೆದುಕೊಳ್ಳುವ ಮೂಲಕ ಆಂತರಿಕವಾಗಿ ಬಲಗೊಂಡರೆ ದೌರ್ಜನ್ಯವೆಂಬುವುದು ಹುಟ್ಟುವುದಕ್ಕೆ ಸಾಧ್ಯವಿಲ್ಲ.

ಕನ್ನಡಪ್ರಭ ವಾರ್ತೆ ಮುಂಡಗೋಡ

ಶಿಕ್ಷಣ ಮತ್ತು ಕಾನೂನಿನ ಅರಿವು ಪಡೆದುಕೊಳ್ಳುವ ಮೂಲಕ ಆಂತರಿಕವಾಗಿ ಬಲಗೊಂಡರೆ ದೌರ್ಜನ್ಯವೆಂಬುವುದು ಹುಟ್ಟುವುದಕ್ಕೆ ಸಾಧ್ಯವಿಲ್ಲ. ಹಾಗಾಗಿ ಪ್ರತಿಯೊಬ್ಬರು ಉತ್ತಮ ಶಿಕ್ಷಣ ಪಡೆದುಕೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ ಹೇಳಿದರು.

ಮಂಗಳವಾರ ಇಲ್ಲಿಯ ನಗರಸಭಾ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ವಿಚಾರಗೋಷ್ಠಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಕೇವಲ ಶಾಲೆಗೆ ಬಂದು ಹೋಗುವ ಮೂಲಕ ಪ್ರಮಾಣ ಪತ್ರ ಪಡೆಯುವುದು ಶಿಕ್ಷಣವಲ್ಲ. ಬದಲಾಗಿ ಜ್ಞಾನ ಪಡೆಯುವುದು ನಿಜವಾದ ಶಿಕ್ಷಣ. ರಾಜ್ಯದಲ್ಲಿ ತ್ರಿಭಾಷಾ ಸೂತ್ರವಿದ್ದು, ಮೊದಲು ಕನ್ನಡದ ಸ್ಪಷ್ಟತೆ ಇರಬೇಕು ಇನ್ನುಳಿದ ಆಂಗ್ಲ ಮತ್ತು ಹಿಂದಿ ಭಾಷೆಯನ್ನು ಅರ್ಥ ಮಾಡಿಕೊಂಡು ಸಂವಹನ ಕೌಶಲ್ಯ ಕಲಿತುಕೊಂಡು ಗಣಿತ ಮತ್ತು ವಿಜ್ಞಾನದಿಂದ ಪರಿಸರ ಮತ್ತು ವ್ಯವಹಾರಿಕ ಜ್ಞಾನ ಪಡೆದುಕೊಳ್ಳಬೇಕು. ಸಾಮಾಜಿಕವಾಗಿ ಬಲಿಷ್ಟ ಹಾಗೂ ಜ್ಞಾನವಂತರಾದರೆ ದೌರ್ಜನ್ಯ ಪ್ರಮಾಣ ಕಡಿಮೆಯಾಗುತ್ತದೆ ಎಂದ ಅವರು, ಮಕ್ಕಳ ರಕ್ಷಣೆ ಹಾಗೂ ಮಹಿಳಾ ದೌರ್ಜನ್ಯ ಕಾಯ್ದೆ ಕುರಿತಂತೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳುವಂತೆ ಮಕ್ಕಳಿಗೆ ಕರೆ ನೀಡಿದರು.

ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ ಪವಾರ, ಗ್ರೇಡ್-೨ ತಹಸೀಲ್ದಾರ ಜಿ.ಬಿ. ಭಟ್, ಪಪಂ ಸದಸ್ಯ ಅಶೋಕ ಚಲವಾದಿ, ಹಿರಿಯರಾದ ಎನ್.ಡಿ. ಕಿತ್ತೂರ, ಹನ್ಮಂತಪ್ಪ ಬಜಂತ್ರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಸಂಜೀವ, ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರಸನ್ನಸಿಂಗ್ ಹಜೇರಿ, ಸಹಾಯಕ ಕೃಷಿ ನಿರ್ದೇಶಕ ಕೆ.ಎನ್. ರೆಡ್ಡಿ, ಸಹಾಯಕ ತೋಟಗಾರಿಕೆ ನಿರ್ದೇಶಕ ಕೃಷ್ಣ ಕುಳ್ಳುರ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಶೈಲ ಪಟ್ಟಣಶೆಟ್ಟಿ, ಸೋಮಣ್ಣ ಛಬ್ಬಿ, ಶಾರದಾ ರಾಠೋಡ, ರಾಘವೇಂದ್ರ ಟಪಾಲದವರ ಮುಂತಾದವರು ಮಾತನಾಡಿದರು. ಅಶೋಕ ಪವಾರ ಸ್ವಾಗತಿಸಿದರು. ರಮೇಶ ಪವಾರ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೋಣ ತಾಲೂಕಿನಲ್ಲಿ 36 ಶುದ್ಧ ನೀರಿನ ಘಟಕಗಳೇ ಬಂದ್!
ಮಕ್ಕಳಲ್ಲಿ ಮೌಲ್ಯಯುತ ಶಿಕ್ಷಣ ಬೆಳೆಸುವುದು ಅವಶ್ಯಕ