ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯವರಾದ ಗಜಾನನ ಬಾಲೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ವಿಭಾಗದಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದು, 2022ರ ಬ್ಯಾಚ್‌ನ ಐ.ಎ.ಎಸ್ ಅಧಿಕಾರಿಯಾಗಿದ್ದಾರೆ. ಈ ಮೊದಲು ರಾಯಚೂರು ಉಪವಿಭಾಗಾಧಿಕಾರಿ, ನಂತರ ಬಾಗಲಕೋಟೆ ಯುಕೆಪಿಯ ಮಹಾ ವ್ಯವಸ್ಥಾಪಕರಾಗಿ ಕೆಲಸ ನಿರ್ವಹಿಸಿದ್ದಾರೆ. ಇದೀಗ ಜಿಪಂ ಸಿಇಒ ಆಗಿ ಅಧಿಕಾರ ವಹಿಸಿಕೊಂಡು, ಜೊತೆಗೆ ಹೆಚ್ಚುವರಿಯಾಗಿ ಯುಕೆಪಿಯ ಮಹಾ ವ್ಯವಸ್ಥಾಪಕರ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿದ್ದಾರೆ.
ಈ ವೇಳೆ ಮಾತನಾಡಿದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಸರ್ಕಾರದ ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದೊಂದಿಗೆ ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ, ಸ್ವಚ್ಛತೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕೆ ವಿಶೇಷ ಒತ್ತು ನೀಡಲಾಗುವುದೆಂದು ತಿಳಿಸಿದರು.ಈ ವೇಳೆ ಜಿಪಂ ಉಪಕಾರ್ಯದರ್ಶಿ ಎನ್.ವೈ.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಯುಕೆಪಿಯ ಉಪ ಮಹಾ ವ್ಯವಸ್ಥಾಪಕ ಮಹಾದೇವ ಮುರಗಿ, ಕೃಷಿ ಇಲಾಖೆಯ ಉಪನಿರ್ದೇಶಕ ಕೆ.ಎಸ್.ಅಗಸನಾಳ, ಜಿಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿ ಇತರರು ಉಪಸ್ಥಿತರಿದ್ದರು.