ಜಿಲ್ಲೆಯಾದ್ಯಂತ ಗಣಪತಿ ಹಬ್ಬದ ಸಡಗರ

KannadaprabhaNewsNetwork | Published : Sep 9, 2024 1:31 AM

ಸಾರಾಂಶ

ಚಿಕ್ಕಮಗಳೂರು, ವಿಘ್ನ ನಿವಾರಕ ಗಣಪತಿ ಹಬ್ಬ ಕಾಫಿನಾಡಿನಲ್ಲಿ ಶನಿವಾರ ಸಡಗರ, ಸಂಭ್ರಮದಿಂದ ನಡೆಯಿತು.ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಾರಾಟಕ್ಕೆ ಗಣಪತಿ ಮೂರ್ತಿಗಳನ್ನು ಇಡಲಾಗಿತ್ತು. ಭಕ್ತರು ಬೆಳಿಗ್ಗೆಯಿಂದಲೇ ಖರೀದಿಯಲ್ಲಿ ತೊಡಗಿದ್ದರು. ಅದರಲ್ಲೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೂರ್ತಿಗಳನ್ನು ಖರೀದಿ ಮಾಡಿ ವಿದ್ಯಾ ಗಣಪತಿ ಘೋಷಣೆಯೊಂದಿಗೆ ರಸ್ತೆಗಳಲ್ಲಿ ಸಾಗುತ್ತಿರುವ ದೃಶ್ಯ ನಗರದಲ್ಲೆಡೆ ಕಂಡು ಬರುತ್ತಿತ್ತು. ತಮ್ಮ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಪೆಂಡಲ್‌ಗಳಲ್ಲಿ ಗಣೇಶ ಪ್ರತಿಷ್ಠಾಪಿಸಿ ಪೂಜಿಸಿದರು.

ಕೋಟೆ ಕೆರೆಯಲ್ಲಿ ಒಂದೇ ದಿನ 300 ಗಣಪತಿ ವಿಸರ್ಜನೆ । ದೀಪಾಲಂಕಾರದಿಂದ ಜಗಮಗಿಸುತ್ತಿರುವ ನಗರ ಪ್ರದೇಶಗಳು

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ವಿಘ್ನ ನಿವಾರಕ ಗಣಪತಿ ಹಬ್ಬ ಕಾಫಿನಾಡಿನಲ್ಲಿ ಶನಿವಾರ ಸಡಗರ, ಸಂಭ್ರಮದಿಂದ ನಡೆಯಿತು.

ನಗರದ ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಮಾರಾಟಕ್ಕೆ ಗಣಪತಿ ಮೂರ್ತಿಗಳನ್ನು ಇಡಲಾಗಿತ್ತು. ಭಕ್ತರು ಬೆಳಿಗ್ಗೆಯಿಂದಲೇ ಖರೀದಿಯಲ್ಲಿ ತೊಡಗಿದ್ದರು. ಅದರಲ್ಲೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮೂರ್ತಿಗಳನ್ನು ಖರೀದಿ ಮಾಡಿ ವಿದ್ಯಾ ಗಣಪತಿ ಘೋಷಣೆಯೊಂದಿಗೆ ರಸ್ತೆಗಳಲ್ಲಿ ಸಾಗುತ್ತಿರುವ ದೃಶ್ಯ ನಗರದಲ್ಲೆಡೆ ಕಂಡು ಬರುತ್ತಿತ್ತು. ತಮ್ಮ ಬಡಾವಣೆಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಪೆಂಡಲ್‌ಗಳಲ್ಲಿ ಗಣೇಶ ಪ್ರತಿಷ್ಠಾಪಿಸಿ ಪೂಜಿಸಿದರು.ನಗರದ ಹಲವೆಡೆ ಗಣೇಶಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಆಯಾಯ ಬಡಾವಣೆಗಳಲ್ಲಿ ವಿದ್ಯುತ್‌ ದೀಪಾಲಂಕಾ ರವನ್ನು ಮಾಡಲಾಗಿದೆ. ಪ್ರಮುಖ ರಸ್ತೆಗಳು ದೀಪಗಳಿಂದ ಜಗಮಗಿಸುತ್ತಿವೆ.

ವಿಸರ್ಜನೆ: ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ವರ್ಷದಲ್ಲಿ 1778 ಸಾರ್ವಜನಿಕ ಗಣಪತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮನೆಗಳಲ್ಲೂ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ವಿನಾಯಕನನ್ನು ಪ್ರತಿಷ್ಠಾಪನೆ ಮಾಡಲಾಗಿದ್ದು, ಚಿಕ್ಕಮಗಳೂರು ನಗರದಲ್ಲಿ ಚಿಕ್ಕ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ನಗರಸಭೆಯಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ.

ನಗರದ ಕೋಟೆ ಕೆರೆಯಲ್ಲಿ ಕಲ್ಯಾಣಿ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಆಜಾದ್‌ ಪಾರ್ಕ್‌, ಹನುಮಂತಪ್ಪ ವೃತ್ತ, ಎಐಟಿ ವೃತ್ತ ಹಾಗೂ ಟೌನ್‌ ಕ್ಯಾಂಟಿನ್‌ ಸರ್ಕಲ್‌ನಲ್ಲಿ ನಗರಸಭೆ ಟ್ರ್ಯಾಕ್ಟರ್‌ನಲ್ಲಿ ನೀರಿನ ವ್ಯವಸ್ಥೆ ಮಾಡಿದ್ದು, ಆಸುಪಾಸಿನ ಬಡಾವಣೆ ಯವರು ಇಲ್ಲಿಯೇ ಗಣೇಶಮೂರ್ತಿ ವಿಸರ್ಜನೆ ಮಾಡಿದರು.

ಕೋಟೆ ಕೆರೆಯಲ್ಲಿ ಶನಿವಾರ ಸಂಜೆ 5.30 ರಿಂದ ರಾತ್ರಿ 11.30ರವರೆಗೆ ಸುಮಾರು 300 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಯಿತು. ಇವುಗಳು ಮನೆಗಳಲ್ಲಿ ಪ್ರತಿಷ್ಠಾಪನೆ ಮಾಡಿರುವ ಗಣೇಶಮೂರ್ತಿಗಳು. ಹೂವು ಹಾಗೂ ಇತರೆ ಪೂಜಾ ಸಾಮಾಗ್ರಿಗಳನ್ನು ಬೇರ್ಪಡಿಸಿ ಮೂರ್ತಿಗಳನ್ನು ವಿಸರ್ಜಿಸಲು ವ್ಯವಸ್ಥಿತವಾಗಿ ನಗರಸಭೆ ಸಿದ್ಧತೆ ಮಾಡಿಕೊಂಡಿದೆ. ಬೇಲೂರು ರಸ್ತೆಯಲ್ಲಿ ರಾತ್ರಿ ವೇಳೆಯಲ್ಲಿ ಗಣಪತಿ ಹಬ್ಬದ ಸಂಭ್ರಮ ಕಂಡು ಬಂದಿತು.

ಸಾರ್ವಜನಿಕ ಪ್ರದೇಶದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಗಣಪತಿ ಪೆಂಡಾಲ್‌ಗಳಲ್ಲಿ ಪ್ರತಿ ದಿನ ರಸಮಂಜರಿ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಜಿಲ್ಲಾಡಳಿತ 23 ಮಂದಿ ವಿಶೇಷ ಕಾರ್ಯನಿರ್ವಹಕ ಅಧಿಕಾರಿಗಳನ್ನು ನೇಮಕ ಮಾಡಿ ಭದ್ರತೆ ಒದಗಿಸಿದೆ. 8 ಕೆಸಿಕೆಎಂ 1ಚಿಕ್ಕಮಗಳೂರಿನ ಕೋಟೆ ಕೆರೆಯ ಕಲ್ಯಾಣಿಯಲ್ಲಿ ಗಣಪತಿ ಮೂರ್ತಿ ವಿಸರ್ಜನೆ ಮಾಡುತ್ತಿರುವುದು.

--8 ಕೆಸಿಕೆಎಂ 2ಚಿಕ್ಕಮಗಳೂರಿನ ಬಸವನಹಳ್ಳಿ ಶ್ರೀ ಓಂಕಾರೇಶ್ವರ ದೇವಾಲಯ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ.

Share this article