ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಟಬಂಧ ಬ್ರಹ್ಮ ಕಲಶೋತ್ಸವದ 5 ನೇ ದಿನದ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು.
ದೇವಸ್ಥಾನಗಳಲ್ಲಿ 12 ವರ್ಷಕೊಮ್ಮೆ ನಡೆಯುವ ಬ್ರಹ್ಮಕಲಶೋತ್ಸವದಿಂದ ಶಕ್ತಿ ವೃದ್ಧಿಯಾಗುತ್ತದೆ. ಇಲ್ಲಿಯ ಭಕ್ತರು ಶ್ರದ್ಧಾ ಭಕ್ತಿಯಿಂದ ಉತ್ತಮ ಕೆಲಸ ಮಾಡಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆ ಪ್ರಾರಂಭ ಮಾಡುವಾಗ ಪ್ರಾಯೋಗಿಕವಾಗಿ ಈ ಗ್ರಾಮವನ್ನು ಆಯ್ಕೆಮಾಡಲಾಗಿತ್ತು. ಯೋಜನೆಯ ಕೆಲಸ ಕಾರ್ಯ ಯಶಸ್ವಿಯಾಗಿದೆ ಎಂದರು.ಬಳಿಕ ಬ್ರಹ್ಮಕಲಶೋತ್ಸವದ ಯಶಸ್ವಿಗೆ ಸಹಕರಿಸಿದ ದಾನಿಗಳನ್ನು ಮತ್ತು ಸಮಿತಿಯ ಪದಾಧಿಕಾರಿಗಳನ್ನು ಗೌರವಿಸಿದರು.ಅಧ್ಯಕ್ಷತೆ ವಹಿಸಿದ್ದ ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ ಮಾತನಾಡಿ, ಸನಾತನ ಭಾರತದ ಸಂಸ್ಕೃತಿ ಆಚಾರ ವಿಚಾರಗಳು ಉಳಿಸಲು ಇಂತಹ ಬ್ರಹ್ಮಕಲಶ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಸಾಧ್ಯ, ಎಲ್ಲರನ್ನು ಸಮಾನತೆಯಿಂದ ನೋಡಿ ಸಮಾಜದಲ್ಲಿ ಶೋಷಿತ ವರ್ಗದವರ ಸೇವೆ ಮಾಡಬೇಕು. ಡಾ. ಹೆಗ್ಗಡೆ ಮಾಡುತ್ತಿರುವ ಸೇವಾ ಕಾರ್ಯ ಮಾದರಿ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮಾತನಾಡಿ, ಜೀವನದಲ್ಲಿ ಪರಿವರ್ತನೆಯದಂತೆ ಬದಲಾವಣೆಯಾಗುತ್ತದೆ. ಬ್ರಹ್ಮಕಲಶದಿಂದ ಸಾಮಾಜಿಕವಾಗಿ ಬಹಳಷ್ಟು ಬದಲಾವಣೆಯಾಗುತ್ತದೆ ಎಂದರು.
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಕಣಿಯೂರು ರೈತ ಬಂಧು ಮಾಲಕ ಶಿವ ಶಂಕರ್ ನಾಯಕ್, ಪದ್ಮುಂಜ ಸಹಕಾರ ಸಂಘದ ಅಧ್ಯಕ್ಷ ರಕ್ಷಿತ್ ಪಣೆಕರ ಭಾಗವಹಿಸಿದ್ದರು.
ವಿಶೇಷವಾಗಿ ಸಹಕಾರ ನೀಡಿದ ಮಮತಾ ಬಾಲಕೃಷ್ಣ ಪೂಜಾರಿ ಅವರನ್ನು ಗೌರವಿಸಲಾಯಿತು. ಉಪನ್ಯಾಸಕ ಮೋಹನ ಗೌಡ ನಿರೂಪಿಸಿದರು. ಇನ್ನೊರ್ವ ಉಪನ್ಯಾಸಕ ದಿವಾ ಕೊಕ್ಕಡ ವಂದಿಸಿದರು. ಬಳಿಕ ಪೆರ್ಲ ಬೈಪಾಡಿ ಅಂಗನವಾಡಿ, ಸರ್ಕಾರಿ ಪ್ರೌಢ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ವಾಣಿ ಕಲಾ ವೈಭವ ನಡೆಯಿತು.