ಗಣಪತಿ ದೇವಾಲಯ ರಥೋತ್ಸವ ಸಂಪನ್ನ

KannadaprabhaNewsNetwork |  
Published : Nov 09, 2025, 03:30 AM IST
ಕುಶಾಲನಗರದಲ್ಲಿ ನಡೆದ ಗಣಪತಿ ರಥೋತ್ಸವ ಸಂದರ್ಭದ ಚಿತ್ರ | Kannada Prabha

ಸಾರಾಂಶ

ಶ್ರೀ ಗಣಪತಿ ದೇವಾಲಯ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ,ಕುಶಾಲನಗರ ಐತಿಹಾಸಿಕ ಶ್ರೀ ಗಣಪತಿ ದೇವಾಲಯ ರಥೋತ್ಸವ ವಿಶೇಷ ಪೂಜಾ ವಿಧಿ ವಿಧಾನಗಳೊಂದಿಗೆ ಸಾವಿರಾರು ಸಂಖ್ಯೆಯ ಭಕ್ತಾದಿಗಳ ಉಪಸ್ಥಿತಿಯಲ್ಲಿ ಭಕ್ತಿ ಭಾವದಿಂದ ಜರುಗಿತು.ಕಾರ್ತಿಕ ಮಾಸ ಕೃಷ್ಣ ಪಕ್ಷದಲ್ಲಿ ನಡೆಯುವ ದೇವಾಲಯದ ರಥೋತ್ಸವ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ಬೆಳಗಿನಿಂದಲೇ ದೇವರಿಗೆ ಪಂಚಾಮೃತ ಅಭಿಷೇಕ, ಏಕವಾರ, ರುದ್ರಾಭಿಷೇಕ ಪುಷ್ಪಾಲಂಕಾರ ರಥ ಪೂಜೆ ರಥ ಬಲಿ ನಂತರ ಗಣಪತಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಿ ಭಕ್ತಾದಿಗಳು ರಥ ಬೀದಿಯ ಮೂಲಕ ಆಂಜನೇಯ ದೇವಾಲಯ ತನಕ ಘೋಷಣೆಗಳೊಂದಿಗೆ ಭಕ್ತಿಭಾವದಿಂದ ಎಳೆದರು.ದೇವಾಲಯದ ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ನೇತೃತ್ವದಲ್ಲಿ ರಾಘವೇಂದ್ರ ಭಟ್ ಮತ್ತು ಅರ್ಚಕರ ತಂಡದಿಂದ ಸಾಂಪ್ರದಾಯಿಕ ಪೂಜಾ ವಿಧಿ ವಿಧಾನಗಳು ಜರುಗಿದವು. ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲ ವ್ಯಾಪ್ತಿಯ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡಿದ್ದರು. ಜಾತ್ರೋತ್ಸವ ಅಂಗವಾಗಿ ದೇವಾಲಯದ ಒಳ ಆವರಣವನ್ನು ವಿಶೇಷವಾಗಿ ಹೂಗಳಿಂದ ಸಿಂಗರಿಸಲಾಗಿತ್ತು.ಕುಣಿತ ಭಜನಾ ಕಾರ್ಯಕ್ರಮ:

ರಥ ತೆರಳುವ ರಸ್ತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ನೂರಾರು ಸಂಖ್ಯೆಯ ಮಕ್ಕಳು ಮಹಿಳೆಯರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.ಅಯ್ಯಪ್ಪ ಸ್ವಾಮಿ ದೇವರ ಮಾಲಾಧಾರಿಗಳು ರಥದ ಮುಂದೆ ಕರ್ಪೂರ ಆರತಿ ಬೆಳಗಿ ಅಯ್ಯಪ್ಪ ಸ್ವಾಮಿ ಘೋಷಣೆ ಕೂಗಿದರು.ಕೆಲವು ಭಕ್ತರು ಹರಕೆಯ ಹೆಸರಿನಲ್ಲಿ ತಮಗಿಷ್ಟ ಬಂದಷ್ಟು ಈಡುಗಾಯಿಯನ್ನು ರಥದ ಮುಂದೆ ಒಡೆಯುತ್ತಿದ್ದ ದೃಶ್ಯ ಕಂಡು ಬಂತು.ಕೊಡ್ಲಿಪೇಟೆ ಕಿರಿ ಕೊಡ್ಲಿ ಮಠಾಧೀಶರಾದ ಶ್ರೀ ಸದಾಶಿವ ಸ್ವಾಮೀಜಿ ಅವರು ದೇವಾಲಯಕ್ಕೆ ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡು ರಥೋತ್ಸವ ಮತ್ತು ಉತ್ಸವವಾದಿಗಳಿಗೆ ಶುಭ ಹಾರೈಸಿದರು.ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಮಾಜಿ ಸಚಿವರಾದ ಎಂ ಪಿ ಅಪ್ಪಚ್ಚು ರಂಜನ್ ಅವರು ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದರು.ಈ ಸಂದರ್ಭ ಕ್ಷೇತ್ರ ಶಾಸಕ ಡಾ ಮಂತರ್ ಗೌಡ ಗೌಡ ಅವರು ರಥೋತ್ಸವಕ್ಕೆ ಶುಭ ಕೋರಿದರು. ಶ್ರೀ ಗಣಪತಿ ದೇವಾಲಯ ಸಮಿತಿ ಅಧ್ಯಕ್ಷರಾದ ಎಂ ಕೆ ದಿನೇಶ್ ಮಾತನಾಡಿ, ರಥೋತ್ಸವ ಅದ್ದೂರಿಯಾಗಿ ನಡೆದಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು. ರಥೋತ್ಸವದ ಅಂಗವಾಗಿ ಅನ್ನದಾನ ಸಮಿತಿ ಮೂಲಕ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ನಡೆಸಲಾಗಿದೆ ಎಂದು ಹೇಳಿದರು. ಡಿಸೆಂಬರ್ 12ರಿಂದ ಗೋ ಜಾತ್ರೆ

ಗೋ ಜಾತ್ರೆ ಡಿಸೆಂಬರ್ 12ರಿಂದ 2 ದಿನಗಳ ಕಾಲ ನಡೆಯುತ್ತದೆ ಎಂದು ಹೇಳಿದರು.ಪ್ರಧಾನ ಅರ್ಚಕರಾದ ಆರ್ ಕೆ ನಾಗೇಂದ್ರ ಬಾಬು ಅವರು ಮಾತನಾಡಿ, ಈ ತಿಂಗಳ 14 ರ ತನಕ ದೇವಾಲಯದಲ್ಲಿ ಪ್ರತಿದಿನ ಉತ್ಸವವಾದಿಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಗುಂಡೂರಾವ್ ಜಾತ್ರಾ ಮೈದಾನದಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ, ನ. 19ರ ತನಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜಾತ್ರಾ ಮೈದಾನದಲ್ಲಿ ನಡೆಯಲಿದೆ ಎಂದು ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ವಿ ಪಿ ಶಶಿಧರ್ ತಿಳಿಸಿದರು. ಕುಶಾಲನಗರ ಡಿ ವೈ ಎಸ್ ಪಿ ಚಂದ್ರಶೇಖರ್ ಮತ್ತು ಕುಶಾಲನಗರ ಪೊಲೀಸ್ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಅವರ ನೇತೃತ್ವದಲ್ಲಿ ನೂರಕ್ಕೂ ಅಧಿಕ ಪೊಲೀಸರು ಸೂಕ್ತ ಬಂದೋಬಸ್ತ್ ಕಲ್ಪಿಸಿದ್ದರು. ರಥೋತ್ಸವ ವೇಳೆ ಜೇಬು ಕಳ್ಳತನ ಮತ್ತಿತರ ಅಪರಾಧ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಅಪರಾಧ ವಿಭಾಗದ ಪೊಲೀಸರು ಅಪರಿಚಿತ ಮತ್ತು ಸಂಶಯಾಸ್ಪದ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.ದೇವಾಲಯ ಸೇವಾ ಸಮಿತಿಯ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಎಂ ಕೆ ದಿನೇಶ್, ಉಪಾಧ್ಯಕ್ಷರಾದ ಆರ್ ಬಾಬು, ಗೌರವಾಧ್ಯಕ್ಷ ವಿ ಎನ್ ವಸಂತಕುಮಾರ್, ಕಾರ್ಯದರ್ಶಿ ಬಿ ಕೆ ಮುತ್ತಣ್ಣ, ಖಜಾಂಚಿ ಎಸ್ ಕೆ ಸತೀಶ್, ಸಹ ಕಾರ್ಯದರ್ಶಿ ಕೆ ಎನ್ ದೇವರಾಜ್, ನಿರ್ದೇಶಕರಾದ ವಿ ಡಿ ಪುಂಡರಿಕಾಕ್ಷ, ಹೆಚ್ ಎಂ ಚಂದ್ರು, ಟಿ ಆರ್ ಶರವಣಕುಮಾರ್ ಮತ್ತು ವಿಶೇಷ ಆಹ್ವಾನಿತರಾದ ಹೆಚ್ ಎನ್ ರಾಮಚಂದ್ರ, ಡಿ ಅಪ್ಪಣ್ಣ, ಡಿ ಸಿ ಜಗದೀಶ್, ಕೆ ಎನ್ ಸುರೇಶ್, ಕೆ ಸಿ ನಂಜುಂಡಸ್ವಾಮಿ, ಎಂ ಮುನಿಸ್ವಾಮಿ, ವ್ಯವಸ್ಥಾಪಕರಾದ ಎಸ್ ಕೆ ಶ್ರೀನಿವಾಸ್ ರಾವ್ ಇದ್ದರು.

ರಥೋತ್ಸವ ಹಿನ್ನೆಲೆಯಲ್ಲಿ ಸ್ಥಳೀಯ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು.ದೇವಾಲಯ ರಥೋತ್ಸವ ಅಂಗವಾಗಿ ಕುಶಾಲನಗರ ಗುಂಡೂರಾವ್ ಬಡಾವಣೆಯ ಜಾತ್ರಾ ಮೈದಾನದಲ್ಲಿ ಮನರಂಜನೆ ಪಾರ್ಕ್ ಗೆ ಕ್ಷೇತ್ರ ಶಾಸಕರಾದ ಡಾ ಮಂತರ್ ಗೌಡ ಅವರು ಚಾಲನೆ ನೀಡಿದರು.

PREV

Recommended Stories

ವಂದೇ ಮಾತರಂ ಭಾರತ ಮಾತೆಯ ಪ್ರೇರಣಾ ಶಕ್ತಿ: ಸಂಸದ ಗದ್ದಿಗೌಡರ
10, 11, ರಂದು ರಾಜ್ಯ ಟ್ರ್ಯಾಕ್‌ ಸೈಕ್ಲಿಂಗ್‌ ತಂಡಗಳ ಆಯ್ಕೆ