ಅಸ್ಪೃಶ್ಯತೆ, ಅಸಮಾತೆ ವಿರದ್ಧವೂ ಹೋರಾಡಿದ ಗಾಂಧಿ

KannadaprabhaNewsNetwork |  
Published : Oct 03, 2023, 05:50 PM IST
ಸಿಕೆಬಿ-8  ಕಸಾಪ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ತಾಲ್ಲೂಕು  ಕಸಾಪ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಅಸ್ಪೃಶ್ಯತೆ, ಅಸಮಾತೆ ವಿರದ್ಧವೂ ಹೋರಾಡಿದ ಗಾಂಧಿ

ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಸಾಪ ಅಧ್ಯಕ್ಷ ಪ್ರೊ.ಕೋಡಿರಂಗಪ್ಪ ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ ಮಹಾತ್ಮ ಗಾಂಧೀಜಿ ಮತ್ತು ಲಾಲ್‌ ಬಹದ್ದೂರ್‌ ಶಾಸ್ತ್ರಿಯವರಂತಹ ಆದರ್ಶ, ದೇಶ ಪ್ರೇಮವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಆಳವಡಿಸಿಕೊಂಡಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ನಿವೃತ್ತ ಪ್ರಾಂಶುಪಾಲರಾದ ಪ್ರೋ.ಡಾ.ಕೋಡಿರಂಗಪ್ಪ ಹೇಳಿದರು. ನಗರದ ಬಿಬಿ ರಸ್ತೆಯ ಸರ್ಕಾರಿ ಜ್ಯೂನಿಯರ್‌ ಕಾಲೇಜು ಆವರಣದಲ್ಲಿನ ನಂದಿ ರಂಗಮಂದಿರದ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯಲ್ಲಿ ಹತ್ತನೇ ತರಗತಿಯ ಕನ್ನಡ ಭಾಷಾ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ತಾಲ್ಲೂಕು ಕಸಾಪ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರು ನಮಗೆ ಕೇವಲ ಸ್ವಾತಂತ್ರ್ಯವನ್ನಷ್ಟೆ ತಂದು ಕೊಡಲಿಲ್ಲ ಅಂದಿನ ಸಮಾಜದಲ್ಲಿ ಇದ್ದ ಅಸ್ಪೃಶ್ಯತೆ, ಜಾತಿಪದ್ದತಿ, ವಿದೇಶಿ ವ್ಯಾಮೋಹ, ಲಿಂಗ ಅಸಮಾನತೆಯನ್ನು ತೊಡೆದು ಹಾಕುವಂತಹ ಆಂದೋಲನಗಳನ್ನು ಮಾಡಿ ಎಲ್ಲರೂ ಒಳಗೊಳ್ಳುವಂತಹ ಸಮಾಜವನ್ನು ನಮಗೆ ಬಿಟ್ಟು ಹೋಗಿದ್ದಾರೆ ಎಂದರು. ಸಭೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಪೂರ್ಣ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಂಕ್ಷಿಪ್ತ ಕನ್ನಡ ನಿಘಂಟುಗಳನ್ನು ಕೊಡುಗೆಯಾಗಿ ನೀಡಲಾಯಿತು. ಮುಖಂಡ ಅಂಗರೇಕನಹಳ್ಳಿ ರವಿಕುಮಾರ್, ತಾಲ್ಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಹಾಗೂ ಸಾಹಿತಿ ಪಾ.ಮು. ಚಲಪತಿಗೌಡ, ಮತ್ತಿತರರು ಇದ್ದರು. ಸಿಕೆಬಿ-8 ಚಿಕ್ಕಬಳ್ಳಾಪುರ ನಗರದಲ್ಲಿ ತಾಲೂಕು ಕಸಾಪ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಡಾ.ಕೋಡಿರಂಗಪ್ಪ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ