ಗಾಂಧೀ ಬದುಕೇ ನಮಗೆ ದಾರಿದೀಪ: ಎಡೀಸಿ ಚಂದ್ರಯ್ಯ

KannadaprabhaNewsNetwork |  
Published : Oct 06, 2025, 01:00 AM IST
2ಕೆಆರ್ ಎಂಎನ್ 1.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121ನೇ ಜಯಂತಿ ಆಚರಿಸಲಾಯಿತು. | Kannada Prabha

ಸಾರಾಂಶ

ರಾಮನಗರ: ಸರಳವಾಗಿ ಬದುಕಿದ, ಬೇರೊಬ್ಬರಿಗೆ ನೋವು ಕೊಡದಂತೆ ಜೀವನ ನಡೆಸಿದ ಮಹಾತ್ಮ ಗಾಂಧೀಜಿ ಅವರ ಬದುಕು ನಮಗೆ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

ರಾಮನಗರ: ಸರಳವಾಗಿ ಬದುಕಿದ, ಬೇರೊಬ್ಬರಿಗೆ ನೋವು ಕೊಡದಂತೆ ಜೀವನ ನಡೆಸಿದ ಮಹಾತ್ಮ ಗಾಂಧೀಜಿ ಅವರ ಬದುಕು ನಮಗೆ ದಾರಿದೀಪ ಎಂದು ಅಪರ ಜಿಲ್ಲಾಧಿಕಾರಿ ಆರ್.ಚಂದ್ರಯ್ಯ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧೀಜಿ 156ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ 121ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ನಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ ಯೋಚಿಸುತ್ತೇವೆ. ಆದರೆ, ಮಹಾತ್ಮ ಗಾಂಧೀಜಿ ಅವರು ದೇಶದ ಬಗ್ಗೆ, ದೇಶವನ್ನು ಪರಕೀಯರ ದಾಸ್ಯದಿಂದ ವಿಮೋಚಿಸುವ ಬಗ್ಗೆ ಚಿಂತಿಸಿ ಅಹಿಂಸೆ ಸತ್ಯಾಗ್ರಹಗಳ ಮೂಲಕ ಹೋರಾಡಿದ ಮಹಾನುಭಾವರು ಎಂದರು.

ಮಹಾತ್ಮರ ಜನ್ಮ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವೆಂದು ಆಚರಿಸಲಾಗುತ್ತಿದೆ. ಅಂತಹವರ ಬಗ್ಗೆ ಹೊಸದಾಗಿ ಹೇಳುವಂತಹ ಯಾವುದೇ ವಿಚಾರಗಳಿಲ್ಲ. ಶಿಕ್ಷಣದ ಆರಂಭದಿಂದಲೂ ಅವರ ಜೀವನ ಚರಿತ್ರೆಗಳ ಕುರಿತು ಪಠ್ಯ ಪುಸ್ತಕಗಳಲ್ಲಿವೆ. ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ರಾಷ್ಟ್ರಕ್ಕೆ ನೀಡಿದ ಕೊಡುಗೆಗಳಲ್ಲಿ ನಾವು ಶೇ. 5ರಷ್ಟನ್ನಾದರೂ ದೇಶಕ್ಕೆ ನೀಡಲು ಸಿದ್ಧರಾಗಬೇಕು ಎಂದು ಕರೆ ನೀಡಿದರು.

ಚನ್ನಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಧ್ಯಾಪಕ ಉಮೇಶ್ ಮಾತನಾಡಿ, ಮೋಹನ್ ದಾಸ್ ಕರಮಚಂದ್ ಗಾಂಧಿ ಅವರು ಭಾರತ ಭವಿಷ್ಯದ ಭೂಪಟದಲ್ಲಿ ಅಳಿಸಲಾಗದ ಹೆಜ್ಜೆ ಗುರುತು, ಪ್ರಜ್ವಲಿಸುವ ಸೂರ್ಯ ಎಂದು ಬಣ್ಣಿಸಿದರು.

ಇದೇ ವೇಳೆ ಗಾಂಧಿ ಜಯಂತಿ ಅಂಗವಾಗಿ ಪ್ರೌಢಶಾಲಾ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ಗಣ್ಯರು ವಿತರಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮಂಜುನಾಥ್, ಆರೋಗ್ಯ ಇಲಾಖೆಯ ಡಾ. ಕುಮಾರ್ ಸೇರಿದಂತೆ ಹಲವು ಗಣ್ಯರು ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ವಿದುಷಿ ಎಸ್.ಎನ್. ರಮಣಿ, ವಿದ್ವಾನ್ ಎಸ್.ಎನ್. ಶ್ರೀನಿವಾಸ ಪ್ರಸನ್ನ, ಪ್ರಣವ, ವಿದ್ಯ, ಜಯಲಕ್ಷ್ಮೀ ಹಾಗೂ ಜಗದೀಶ್ ಅವರ ತಂಡ ಸರ್ವಧರ್ಮ ಪ್ರಾರ್ಥನೆ ಮಾಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಚ್.ಜಿ.ರವಿರಾಜ್ , ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಾಕ್ಸ್ ................

ಪ್ರೌಢಶಾಲಾ ವಿಭಾಗ :

ಮಾಗಡಿ ತಾಲೂಕಿನ ಸಂಕೀಘಟ್ಟದ ಸರ್ಕಾರಿ ಪ್ರೌಢಶಾಲೆಯ ಎಸ್.ಎಲ್.ಯಶಸ್ವಿನಿ ಪ್ರಥಮ ಸ್ಥಾನ, ಮಾಗಡಿ ಟೌನಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಚ್.ಎನ್.ವಿದ್ಯಾಶ್ರೀ ದ್ವಿತೀಯ, ರಾಮನಗರ ಟೌನಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹೇಮಶ್ರೀ ತೃತೀಯ ಸ್ಥಾನ ಪಡೆದಿದ್ದಾರೆ.

ಪದವಿ ಪೂರ್ವ ವಿಭಾಗ :

ಚನ್ನಪಟ್ಟಣ ತಾಲೂಕಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎಸ್.ಲಿಖಿತ ಪ್ರಥಮ ಸ್ಥಾನ, ಹಾರೋಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಲೇಖನಗಂಗ ದ್ವಿತೀಯ ಸ್ಥಾನ, ಬಿಡದಿಯ ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನ ತೃತೀಯ ಸ್ಥಾನ ಪಡೆದು ಕೊಂಡಿದ್ದಾರೆ.

ಪದವಿ/ಸ್ನಾತಕೋತ್ತರ ಪದವಿ ವಿಭಾಗ:

ರಾಮನಗರದ ಗೌಸಿಯಾ ಇಂಜಿನಿಯರಿಂಗ್ ಕಾಲೇಜಿನ ಎಚ್.ಕೆ.ದೇವಿಕಾ ಪ್ರಥಮ ಸ್ಥಾನ, ರಾಮನಗರದ ಗೌಸಿಯಾ ಇಂಜಿನಿಯರಿಂಗ್ ಕಾಲೇಜಿನ ವರ್ಷಿತಾ ದ್ವಿತೀಯ ಸ್ಥಾನ ಹಾಗೂ ರಾಮನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿಶ್ರುತ ತೃತೀಯ ಸ್ಥಾನ ಗಳಿಸಿದ್ದಾರೆ.

2ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 121ನೇ ಜಯಂತಿ ಆಚರಿಸಲಾಯಿತು.

PREV

Recommended Stories

ಪಿಎಸ್‌ಐ 545 ಹುದ್ದೆಗಳ ನೇಮಕ ಆದೇಶಕ್ಕೆ ಕೆಎಟಿ ತಾತ್ಕಾಲಿಕ ತಡೆ
ಕನ್ನಡಿಗ ಪಾಟೀಲ್‌ಗೆ ಅಮೆರಿಕ ಎಐ ಕಂಪನಿಯ ಉನ್ನತ ಹುದ್ದೆ