ದೊಡ್ಡಬಳ್ಳಾಪುರ: ಇಲ್ಲಿನ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಲಯನ್ಸ್ ಸಂಸ್ಥೆ ಹಾಗೂ ವಿವಿಧ ವಿಭಾಗಗಳ ನೇತೃತ್ವದಲ್ಲಿ ಶುಕ್ರವಾರ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತ್ಯುತ್ಸವ ಕಾರ್ಯಕ್ರಮದ ಪ್ರಯುಕ್ತ ಉಭಯ ನಾಯಕರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಸರ್ವಧರ್ಮ ಪ್ರಾರ್ಥನೆ ನಡೆಸಲಾಯಿತು.
ಉಪಪ್ರಾಂಶುಪಾಲ ಡಾ.ಆರ್.ಎಂ.ಸುನಿಲ್‌ಕುಮಾರ್ ಮಾತನಾಡಿ, ಇಬ್ಬರೂ ಮಹನೀಯರು ದೇಶಕ್ಕಾಗಿ ತಮ್ಮ ಸರ್ವಸ್ವವನ್ನೂ ತ್ಯಾಗ ಮಾಡಿದ ಅಮರ ಜೀವಿಗಳಾಗಿದ್ದಾರೆ. ಅವರ ಬದುಕಿನ ಸಂದೇಶದಲ್ಲಿ ಕೆಲವನ್ನಾದರೂ ನಮ್ಮ ಬದುಕಿನಲ್ಲಿ ಪಾಲನೆ ಮಾಡುವುದು ಅಗತ್ಯ ಎಂದು ಹೇಳಿದರು.
ಶೈಕ್ಷಣಿಕ ನಿರ್ದೇಶಕ ಡಾ.ಎಂ.ಶ್ರೀನಿವಾಸರೆಡ್ಡಿ, ಮಾನವ ಸಂಪನ್ಮೂಲ ನಿರ್ದೇಶಕ ಬಾಬುರೆಡ್ಡಿ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಎನ್.ಬಿ.ಶಂಕರ್, ವಿಭಾಗ ಮುಖ್ಯಸ್ಥರಾದ ಡಾ.ಲೋಕೇಶ್ ಯಾದವ್, ಡಾ.ಬಸವರಾಜ್ ಪಾಲ್, ಪ್ರಾಧ್ಯಾಪಕ ಡಾ.ವಿಜಯಕಾರ್ತಿಕ್, ಜಾಲಪ್ಪ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ.ನರಸಿಂಹರೆಡ್ಡಿ, ದೈಹಿಕ ಶಿಕ್ಷಣ ನಿರ್ದೇಶಕ ದಾದಾಫೀರ್, ಎನ್‌ಎಸ್‌ಎಸ್ ಅಧಿಕಾರಿ ಗೋವಿಂದರಾಜು, ವ್ಯವಸ್ಥಾಪಕ ಎಸ್.ಯತಿನ್ ಮತ್ತಿತರರು ಭಾಗವಹಿಸಿದ್ದರು.2ಕೆಡಿಬಿಪಿ1- ದೊಡ್ಡಬಳ್ಳಾಪುರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು.