ಶಾಸಕ ಮಾನೆ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ

KannadaprabhaNewsNetwork |  
Published : Oct 04, 2025, 12:00 AM IST
ಫೋಟೊ: 3ಎಚ್‌ಎನ್‌ಎಲ್1 | Kannada Prabha

ಸಾರಾಂಶ

ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.

ಹಾನಗಲ್ಲ: ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು. ಉಭಯ ಮಹಾನ್ ಚೇತನಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹನುಮಂತಪ್ಪ ಮರಗಡಿ, ಮಂಜು ಗೊರಣ್ಣನವರ ಮಾತನಾಡಿ, ಮಹಾತ್ಮಾ ಗಾಂಧಿ ನೇತೃತ್ವದಲ್ಲಿ ಅನೇಕ ಮಹನೀಯರು ನಡೆಸಿದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಮಹನೀಯರ ತ್ಯಾಗ ಬಲಿದಾನವನ್ನು ನಾವೆಲ್ಲರೂ ಸದಾ ಸ್ಮರಿಸುವ ಅಗತ್ಯವಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶ ಕಂಡ ಪ್ರಾಮಾಣಿಕ ಪ್ರಧಾನಿಗಳಲ್ಲಿ ಒಬ್ಬರು. ಮಹನೀಯರ ಆದರ್ಶ ಅಳವಡಿಸಿಕೊಂಡು ಮುನ್ನಡೆಯುವ ಸಂಕಲ್ಪ ಗೈಯ್ಯಬೇಕಿದೆ. ಜಯಂತಿ ಆಚರಣೆಯ ಸಂದರ್ಭದಲ್ಲಿ ಸ್ಮರಿಸಿಕೊಳ್ಳುವುದಷ್ಟೇ ಅಲ್ಲ ಅವರ ತತ್ವಾದರ್ಶಗಳನ್ನು ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದರು. ಕೆಪಿಸಿಸಿ ಸದಸ್ಯ ಖ್ವಾಜಾಮೊಹಿದ್ದೀನ್ ಜಮಾದಾರ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಮಾಜಿ ಉಪಾಧ್ಯಕ್ಷ ಮಹೇಶ ಪವಾಡಿ, ಮುಖಂಡರಾದ ರವೀಂದ್ರ ದೇಶಪಾಂಡೆ, ದುದ್ದು ಅಕ್ಕಿವಳ್ಳಿ, ಶಿವು ತಳವಾರ, ಗೌಸ್ ತಾಂಡೂರ, ನಾಗರಾಜ ಆರೇರ, ಬಸನಗೌಡ ಪಾಟೀಲ, ಸುರೇಶ ನಾಗಣ್ಣನವರ, ರಾಜೂ ಗಾಡಿಗೇರ, ವಿನಾಯಕ ಬಂಕನಾಳ, ಪ್ರವೀಣ ಹಿರೇಮಠ, ಶಿವು ಭದ್ರಾವತಿ, ಲಿಂಗರಾಜ ಮಡಿವಾಳರ, ಮೇಕಾಜಿ ಕಲಾಲ ಈ ಸಂದರ್ಭದಲ್ಲಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ