ದಾಬಸ್‍ಪೇಟೆ: ಉತ್ತಮ ಆಡಳಿತ ನೀಡುವ ಗ್ರಾಪಂಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ನೀಡುವ ಗಾಂಧಿಗ್ರಾಮ ಪುರಸ್ಕಾರಕ್ಕೆ 2ನೇ ಬಾರಿ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಪಂ ಅಧ್ಯಕ್ಷೆ ಮಮತಾ ಹಾಗೂ ಪಿಡಿಒ ಗೀತಾಮಣಿ ಅವರಿಗೆ ಸಿಎಂ ಹಾಗೂ ಡಿಸಿಎಂ ಪುರಸ್ಕಾರ ನೀಡಿ ಗೌರವಿಸಿದರು.
ಪಿಡಿಒ ಗೀತಾಮಣಿ ಮಾತನಾಡಿ, ಪಂಚಾಯತಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಮುಖ್ಯ ಗುರಿ. ರಾಜ್ಯ ಸರ್ಕಾರ ನೀಡುವ ಗಾಂಧಿಗ್ರಾಮ ಪುರಸ್ಕಾರವನ್ನು ಸತತ 2ನೇ ಬಾರಿಗೆ ನನ್ನ ಅವಧಿಯಲ್ಲೇ ಲಭಿಸಿರುವುದು ಸಂತಸದ ಸಂಗತಿ. ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ. ಸ್ಥಳೀಯ ಚುನಾಯಿತ ಸದಸ್ಯರ ಸಹಕಾರದಿಂದ ಮತ್ತಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡು, ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.ಅಧ್ಯಕ್ಷೆ ಮಮತಾ ಮಾತನಾಡಿ, ಗ್ರಾಪಂ ವ್ಯಾಪ್ತಿಯಲ್ಲಿನ ಜನಪರ ಅಭಿವೃದ್ಧಿ ಕಾಯಗಳನ್ನು ಗುರುತಿಸಿ, ಪ್ರಶಸ್ತಿ ನೀಡಿರುವುದು ಸಂತೋಷ ತಂದಿದೆ. ಪಿಡಿಒ ಉತ್ತಮ ಆಡಳಿತ ವೈಖರಿಯಿಂದ ಗ್ರಾಮಗಳಿಗೆ ಸಿಗಬೇಕಾದ ಎಲ್ಲಾ ಮೂಲಸೌಕರ್ಯಗಳು ಸಿಗುವಂತಾಗಿದೆ. ಸರ್ಕಾರಿ ಶಾಲೆ ಹಾಗೂ ಅಂಗನವಾಡಿಗಳ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದರು.
ಕಳಲುಘಟ್ಟ ಗ್ರಾಪಂನ ಪಿಡಿಒ ಮತ್ತು ಅಧ್ಯಕ್ಷರು ಮತ್ತು ಸದಸ್ಯರಿಗೆ ಶಾಸಕ ಎನ್.ಶ್ರೀನಿವಾಸ್, ಇಒ ಬಿಂದು, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗೇಶ್, ಕಳಲುಘಟ್ಟ ಗ್ರಾಪಂ ಎಲ್ಲಾ ಮುಖಂಡರು ಹಾಗೂ ಸಾರ್ವಜನಿಕರು, ಶಾಲಾ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದರು.ಪೋಟೋ 5 :
ಕಳಲುಘಟ್ಟ ಗ್ರಾಪಂ ಪಿಡಿಒ ಗೀತಾಮಣಿ, ಅಧ್ಯಕ್ಷೆ ಮಮತಾ ಅವರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ಶ್ರೀನಿವಾಸ್ ಗಾಂಧಿ ಗ್ರಾಮ ಪುರಸ್ಕಾರ, ಸ್ಮರಣಿಕೆ ಹಾಗೂ ಪ್ರೋತ್ಸಾಹಧನ ನೀಡಿ ಗೌರವಿಸಿದರು.