ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶಕ್ಕಾಗಿ ಅನೇಕ ಸೈನಿಕರು ತಮ್ಮ ಪ್ರಾಣತ್ಯಾಗ ಮಾಡಿ ಹುತಾತ್ಮರಾಗುತ್ತಾರೆ ಮತ್ತು ಅನೇಕ ಸಂಕಟಗಳನ್ನು ಎದುರಿಸುತ್ತಾರೆ. ಅವರ ತತ್ವಗಳಲ್ಲಿ ಸತ್ಯ ಮತ್ತು ಅಹಿಂಸೆ ಪ್ರಮುಖವಾಗಿವೆ. ಗಾಂಧೀಜಿಯವರು ಹೇಗೆ ಹುತಾತ್ಮರಾದರು ಹಾಗೂ ಅವರ ಆತ್ಮಚರಿತ್ರೆಯ ಮಹತ್ವವನ್ನು ಅರ್ಥೈಸಲು, ಅವರ ಜೀವನವನ್ನು ಅಧ್ಯಯನ ಮಾಡುವುದು ಅವಶ್ಯಕ. ಅವರ ಜೀವನದ ಮೌಲ್ಯಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ, ಸಮರ್ಪಕ ಮತ್ತು ಶ್ರೇ? ಸಮಾಜವನ್ನು ನಿರ್ಮಿಸಬಹುದು ಎಂದರು.
ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ವಿದ್ಯಾರ್ಥಿನಿಯರು ಗಾಂಧೀಜಿಯವರ ಸತ್ಯ ಮತ್ತು ಅಹಿಂಸಾ ತತ್ವಗಳನ್ನು ಪಾಲಿಸಿ ಸಮಾಜದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಮಹಾತ್ಮ ಗಾಂಧೀಜಿ ಸತ್ಯ ಮತ್ತು ಅಹಿಂಸೆಯನ್ನು ಜೀವನದ ಪ್ರಮುಖ ತತ್ವಗಳಾಗಿ ಸ್ವೀಕರಿಸಿದರು ಮತ್ತು ಅಹಿಂಸೆಯ ಮೂಲಕ ಅನ್ಯಾಯದ ವಿರುದ್ಧ ಹೋರಾಡಿದರು. ಗಾಂಧೀಜಿಯವರ ಪ್ರಭಾವದಿಂದ ಅನೇಕ ಜನರು ಪ್ರೇರಿತರಾಗಿ ಅವರ ತತ್ವಗಳನ್ನು ಅನುಸರಿಸಿದ್ದಾರೆ ಎಂದರು.ಎನ್.ಎಸ್.ಎಸ್ ಘಟಕದ ಅಧಿಕಾರಿ ಪ್ರೊ.ವಿಷ್ಣು ಶಿಂಧೆ, ಡಾ.ಕಲಾವತಿ ಕಾಂಬಳೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ಸಂಶೋಧನಾ ವಿದ್ಯಾರ್ಥಿನಿಯರು, ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಮತ್ತಿತರರು ಉಪಸ್ಥಿತರಿದ್ದರು. ವಿವಿಯ ಎನ್.ಎಸ್.ಎಸ್ ಕೋಶದ ಸಂಯೋಜನಾಧಿಕಾರಿ ಪ್ರೊ.ಅಶೋಕ್‌ಕುಮಾರ್ ಸುರಪುರ ಸ್ವಾಗತಿಸಿದರು. ವಿದ್ಯಾರ್ಥಿನಿ ಸಂತೋಷಿ ಮಾತಾ ನಿರೂಪಿಸಿದರು. ಗಾಂಧಿ ಅಧ್ಯಯನ ಕೇಂದ್ರದ ಸಂಯೋಜಕ ಡಾ.ಅಮರನಾಥ ಪ್ರಜಾಪತಿ ವಂದಿಸಿದರು.