ಗಾಂಧೀಜಿ ಜೀವನ ಆದರ್ಶ ಇಂದಿಗೂ ಪ್ರಸ್ತುತ: ಕೆ.ಬಿ.ಸಂತೋಷ್

KannadaprabhaNewsNetwork |  
Published : Nov 07, 2025, 02:15 AM IST
ಹಾರನಹಳ್ಳಿ ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರೌಢಶಾಲೆ ಸಭಾಂಗಣದಲ್ಲಿ ನಡೆದ ಗಾಂಧಿ ಚಿಂತನೆ ಕುರಿತು ಜಾಗೃತಿ, ಸಂವಾದ, ಭಾಷಣ ಸ್ಪರ್ಧೆ ಕಾರ್ಯಕ್ರಮವನ್ನು ಕೆ.ಬಿ.ಸಂತೋಷ್ ಉದ್ಘಾಟಿಸಿದರು. | Kannada Prabha

ಸಾರಾಂಶ

ಮಹಾತ್ಮ ಗಾಂಧೀಜಿ ಅವರ ಸರ್ವೋದಯ ತತ್ವಶಾಸ್ತ್ರ ಮತ್ತು ಅದರ ತತ್ವಗಳು ಇಂದಿಗೂ ಪ್ರಸ್ತುತ ಎಂದು ಹಾರನಹಳ್ಳಿಯ ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆಯ ಕಾಲೇಜಿನ ಪ್ರಾಂಶುಪಾಲ ಕೆ.ಬಿ.ಸಂತೋಷ್ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಹಾತ್ಮ ಗಾಂಧೀಜಿ ಅವರ ಸರ್ವೋದಯ ತತ್ವಶಾಸ್ತ್ರ ಮತ್ತು ಅದರ ತತ್ವಗಳು ಇಂದಿಗೂ ಪ್ರಸ್ತುತ ಎಂದು ಹಾರನಹಳ್ಳಿಯ ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆಯ ಕಾಲೇಜಿನ ಪ್ರಾಂಶುಪಾಲ ಕೆ.ಬಿ.ಸಂತೋಷ್ ಹೇಳಿದರು.

ಮಹಾತ್ಮ ಗಾಂಧೀಜಿ ಅವರ ಮಾಸ ಪ್ರಯುಕ್ತ ರಾಜ್ಯ ಸರ್ವೋದಯ ಮಂಡಳಿಯಿಂದ ಹಾರನಹಳ್ಳಿ ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆಯ ಪ್ರೌಢಶಾಲೆ ಸಭಾಂಗಣದಲ್ಲಿ ಆಯೋಜಿಸಿದ್ದ ಗಾಂಧಿ ಚಿಂತನೆ ಕುರಿತು ಜಾಗೃತಿ, ಸಂವಾದ, ಭಾಷಣ ಸ್ಪರ್ಧೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಾಂಧೀಜಿ ಅವರ ಸರಳತೆ, ಉನ್ನತ ನೈತಿಕ ಆದರ್ಶಗಳು, ಅವರ ವಿನಮ್ರತೆ, ಸಮಗ್ರತೆ ಮತ್ತು ದೂರದೃಷ್ಟಿಯ ನಾಯಕತ್ವಕ್ಕೆ ಹೆಸರುವಾಸಿಯಾಗಿದ್ದು, ಅವರ ಪರಂಪರೆ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ ಎಂದು ತಿಳಿಸಿದರು.

ರಾಜ್ಯ ಸರ್ವೋದಯ ಮಂಡಳಿ ರಾಜ್ಯಾಧ್ಯಕ್ಷ ಡಾ.ಎಚ್.ಎಸ್.ಸುರೇಶ್ ಮಾತನಾಡಿ, ಸರ್ವೋದಯ ಎಂದರೆ ಎಲ್ಲರ ಪ್ರಗತಿ. ಸ್ವನಿರ್ಣಯ ಮತ್ತು ಸಮಾನತೆಯನ್ನು ಭಾರತದ ಎಲ್ಲ ಸಮಾಜದ ಎಲ್ಲ ಸ್ಥರವನ್ನು ತಲುಪುವಂತೆ ಮಾಡುವ ಧ್ಯೇಯ ಹೊಂದಿರುವ ಸಂಸ್ಥೆಯಾಗಿದೆ ಎಂದು ತಿಳಿಸಿದರು.

ಜಿಲ್ಲಾ ಸರ್ವೋದಯ ಮಂಡಳಿ ಅಧ್ಯಕ್ಷ ಮನೋಹರ್ ಮಾತನಾಡಿ, ಜಿಲ್ಲೆಯಲ್ಲಿ ನಮ್ಮ ಸರ್ವೋದಯ ಮಂಡಳಿಯಿಂದ ಗಾಂಧಿ ತತ್ವದ ಸರ್ವೋದಯ ಪ್ರೇರಿತ ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸರ್ವೋದಯ ಮಂಡಳಿಯ ತತ್ವ ಆದರ್ಶವನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಸರ್ವೋದಯ ಮಂಡಳಿ ಜಿಲ್ಲಾ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಸರೋಜ.ಬಿ.ಎಸ್, ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ನಾಗರಾಜಪ್ಪ ಮಾತನಾಡಿದರು.

ಗ್ರಾಮಾಂತರ ವಿದ್ಯಾಭಿವೃದ್ಧಿ ಸಂಸ್ಥೆ ಖಜಾಂಚಿ ಸುರೇಶ್ ಶೆಟ್ಟಿ, ನಿರ್ದೇಶಕರಾದ ಬಸವರಾಜಪ್ಪ, ಕೃಷ್ಣಮೂರ್ತಿ, ನಾಗೇಶ್ವರಪ್ಪ, ಜ್ಞಾನೇಶ್ವರ್, ವಿಜಯಲಕ್ಷ್ಮೀ, ಕಾಳಿಮುತ್ತು, ಸೀನ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮಕ್ಕಳಿಗೆ ಸ್ಫರ್ಧೆಗಳನ್ನು ಏರ್ಪಡಿಸಿ ಬಹುಮಾನಗಳನ್ನು ವಿತರಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರಿನಲ್ಲಿ ಕಾಳು ಹಾಕಿ ಕಲಬೆರಿಕೆ ಪತ್ತೆ ಮಾಡಿ
ಭಾಷಣ ಮಾಡಿಕೊಂಡು ಹೋದವನಲ್ಲ, ಪಕ್ಷದ ಎಲ್ಲಾ ಕೆಲ್ಸ ಮಾಡಿದ್ದೇನೆ: ಡಿಕೆಶಿ