ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಬಿಎಲ್.ಡಿಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಆಚರಿಸಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ 122ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಜೈ ಜವಾನ್, ಜೈ ಕಿಸಾನ್ ಘೋಷವಾಕ್ಯ ದೇಶದ ಸೈನಿಕರು ಮತ್ತು ರೈತರ ಮಹತ್ವ ಸಾರುತ್ತದೆ. ಗಾಂಧೀಜಿ ಹಾಗೂ ಶಾಸ್ತ್ರಿಯವರ ಸರಳತೆ, ಪ್ರಾಮಾಣಿಕತೆ, ದೇಶಭಕ್ತಿ ಮತ್ತು ಸೇವಾ ಮನೋಭಾವವನ್ನು ಯುವಜನತೆ ಆದರ್ಶವಾಗಿಸಿಕೊಳ್ಳಬೇಕೆಂದರು.
ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ, ಸ್ಕೂಲ್ ಆಫ್ ಅಪ್ಲೈಡ್ ಸೈನ್ಸ್ ಅಂಡ್ ಟೆಕ್ನಾಲಜಿಯ ವಿದ್ಯಾರ್ಥಿನಿ ಮೇಘಾ ಕೊಲ್ಕಾರ, ಕುಲಸಚಿವ ಡಾ.ಆರ್.ವಿ.ಕುಲಕರ್ಣಿ ಮಾತನಾಡಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ. ತೇಜಸ್ವಿನಿ ವಲ್ಲಭ, ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ, ಡಾ.ಎಸ್.ವಿ.ಪಾಟೀಲ, ಡಾ.ಆನಂದ ಅಂಬಲಿ, ಡಾ.ರವಿಕುಮಾರ ಬಿರಾದಾರ, ಡಾ.ಎಂ.ಎಂ.ಪಾಟೀಲ, ಡಾ.ಆರ್.ಜಿ. ಕುಲಕರ್ಣಿ, ಸತೀಶ ಪಾಟೀಲ, ಬಿ.ಎಸ್. ಪಾಟೀಲ, ಡಾ.ಶ್ರೀಧರ ಬಗಲಿ, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.