- ಶಾಲಾ-ಕಾಲೇಜು ಹಂತದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ: ಅಪರ ಡಿಸಿ ಶೀಲವಂತ - - -
ನಗರದ ಅಪರ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಶಾಲಾ-ಕಾಲೇಜು ಹಂತದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅಧ್ಯಕ್ಷತೆಯಲ್ಲಿ ಸಚಿವ ಕೆ.ಎಸ್.ಬಸವಂತಪ್ಪ, ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ, ವಿಧಾನಸಭಾ, ವಿಧಾನ ಪರಿಷತ್ ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಅಧಿಕಾರಿಗಳು ಸಮಾರಂಭದಲ್ಲಿ ಭಾಗವಹಿಸುವರು ಎಂದು ಹೇಳಿದರು.ಹೈಸ್ಕೂಲ್ ಮಕ್ಕಳಿಗೆ 700ರಂದ 800 ಪದಗಳಿಗೆ ಮೀರದಂತೆ ಗಾಂಧೀಜಿಯವರ ಸತ್ಯ ಶೋಧನೆ ಜೀವನ-ಆಧುನಿಕ ಸಂದರ್ಭ ಅಥವಾ ನಾನು ಕಂಡ ಮಹಾತ್ಮ ಗಾಂಧೀಜಿಯವರ ತತ್ವ ಸಿದ್ಧಾಂತಗಳು ಅಥವಾ ಗಾಂಧೀಜಿಯವರ ಜೀವನ ಶೈಲಿಯಿಂದ ಕಲಿಯುವ ಐದು ಪಾಠಗಳು ಈ ಮೂರು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ವಿಜೇತರ ಪಟ್ಟಿಯನ್ನು ಕಳುಹಿಸಬೇಕು ಎಂದು ಸೂಚಿಸಿದರು.
ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದಲ್ಲಿ 1400ರಿಂದ 1500 ಪದ ಮೀರದಂತೆ ನೈತಿಕ ರಾಜಕಾರಣ-ಗಾಂಧೀಜಿಯ ತತ್ವಗಳ ಇಂದಿನ ಪ್ರಾಸಂಗಿಕತೆ ಅಥವಾ ಸತ್ಯಾಗ್ರಹ- ಇಂದಿನ ಕಾಲದ ಅವಶ್ಯಕತೆ ಅಥವಾ ಗಾಂಧೀಜಿ ಶಿಕ್ಷಣ ತತ್ವ- ನೈತಿಕತೆ, ಕೌಶಲ್ಯ, ಸೇವಾಭಾವ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಿ ಸಂಬಂಧಿಸಿದ ಪ್ರಥಮ ದರ್ಜೆ ಕಾಲೇಜಿನ ನೋಡಲ್ ಅಧಿಕಾರಿಗಳ ಮೂಲಕ ವಿಜೇತರ ಪಟ್ಟಿಯನ್ನು ಜಿಲ್ಲಾಡಳಿತಕ್ಕೆ ಕಳಿಸಿಕೊಡುವಂತೆ ಸೂಚನೆ ನೀಡಿದರು.
ಜಿಪಂ ಉಪ ಕಾರ್ಯದರ್ಶಿ ಮಮತಾ ಹೊಸಗೌಡರ್, ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸಿದ್ದಲಿಂಗೇಶ, ಜಿಲ್ಲಾ ಹಿಂದುಳಿದ ಕಲ್ಯಾಣಾಧಿಕಾರಿ ರೇಣುಕಾದೇವಿ, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕ ರವಿಚಂದ್ರ, ಪಿಯು ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪಳನಿವೇಲು, ಶಾಲಾ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಸಿದ್ದಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ವಿಶಾಲಾಕ್ಷಿ, ಇತರರು ಇದ್ದರು.
-31ಕೆಡಿವಿಜಿ8, 9, 10: