ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಬಾಗಲಕೋಟೆ ಶಾಸಕ ಉಮೇಶ ಮೇಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾದ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ಇತರ ಗಣ್ಯರು ಗಾಂಧಿ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಪುಷ್ಪಾರ್ಚನೆಗೈದು ನಮನ ಸಲ್ಲಿಸಿದರು.
ಗಾಂಧೀಜಿಯವರ ಸರ್ವಧರ್ಮ ಸಮಭಾವ ಹಾಗೂ ಮಾನವೀಯ ಮೌಲ್ಯಗಳ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ವಿವಿಧ ಧರ್ಮದ ಗುರುಗಳಾದ ಸ್ನೇಹಾ ಜುರಾಪೂರ ಭಗವದ್ಗೀತಾ, ಆಸೀಫ್ ಮುದಗಲ್ಲ ಕುರಾನ ಹಾಗೂ ಆನಿಸ್ ಬೈಬಲ್ ಕುರಿತು ಪಠಣ ಮಾಡಿದರು. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧೀಜಿ ಅವರ ಅಹಿಂಸೆ, ಸತ್ಯಾಗ್ರಹ ಹಾಗೂ ಸರಳ ಜೀವನದ ಆದರ್ಶಗಳನ್ನು ಸ್ಮರಿಸಲಾಯಿತು. ದೇಶದ ಅಭಿವೃದ್ದಿ, ಶಿಸ್ತು ಹಾಗೂ ಪ್ರಾಮಾಣಿಕ ಆಡಳಿತಕ್ಕೆ ಲಾಲ್ ಬಹದ್ದೂರ ಶಾಸ್ತ್ರೀ ಅವರು ನೀಡಿದ ಕೊಡುಗೆಯನ್ನು ಸಹ ಸ್ಮರಿಸಲಾಯಿತು.ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಗಾಂಧೀಜಿ ಕುರಿತು ಹೊರತಂದ ವಾರ್ತಾ ಜನಪರ ವಿಷೇಶ ಸಂಚಿಕೆಯನ್ನು ಶಾಸಕ ಉಮೇಶ ಮೇಟಿ ಸೇರಿದಂತೆ ಇತರೆ ಗಣ್ಯರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಾಮೂಹಿಕವಾಗಿ ರಘುಪತಿ ರಾಘವ ರಾಜಾರಾಮ ಗೀತೆ ಹಾಡಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಮುಖ್ಯ ಲೆಕ್ಕಾಧಿಕಾರಿ ಸಿದ್ರಾಮೇಶ್ವರ ಉಕ್ಕಲಿ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಂಟಿ ಕೃಷಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ರವೀಂದ್ರ ಹಕಾಟಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಸದಾಶಿವ ಬಡಿಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು, ಆಯುಷ ಇಲಾಖೆಯ ಜಿಲ್ಲಾ ಅಧಿಕಾರಿ ಡಾ.ಶೇಖರಯ್ಯ ಮಠ, ಜಿಲ್ಲಾ ವಾರ್ತಾಧಿಕಾರಿ ಕಸ್ತೂರಿ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.