ಕನ್ನಡಪ್ರಭವಾರ್ತೆ ತುರುವೇಕೆರೆ
ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ರವರ ಕಚೇರಿಯಲ್ಲಿ ನಡೆದ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹದಂತಹ ಜನಪರ ಹೋರಾಟದ ತತ್ವಗಳು ಬ್ರಿಟಿಷರನ್ನೇ ತಲ್ಲಣಗೊಳಿಸಿದವು. ದೇಶದಲ್ಲಿ ವಿಭಿನ್ನ ಸಂಸ್ಕೃತಿ, ಭಾಷೆ, ಧರ್ಮಗಳಿದ್ದರೂ ಸಹ ಗಾಂಧೀಜಿಯವರು ಎಲ್ಲರ ಐಕ್ಯತೆಯನ್ನು ಬಯಸಿದವರು ಎಂದರು.
ಈ ಸಂಧರ್ಭದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ನಂಜುಂಡಪ್ಪ, ಗೋಣಿತುಮಕೂರು ಕಾಂತರಾಜು, ಪಟ್ಟಣ ಪಂಚಾಯ್ತಿ ಸದಸ್ಯ ಯಜಮಾನ್ ಮಹೇಶ್, ಶಶಿಶೇಖರ್, ಗುರುದತ್, ಮಹಾಲಿಂಗಪ್ಪ, ಜಾಫರ್, ನೂರುಲ್ಲಾ, ಅಫ್ಜಲ್, ಅಕ್ಕಳಸಂದ್ರ ಪ್ರಕಾಶ್, ಪಟ್ಟಣ ಪಂಚಾಯ್ತಿ ನಾಮಿನಿ ಸದಸ್ಯ ಶ್ರೀನಿವಾಸ್ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.