ಸತ್ಯ,ಅಹಿಂಸೆ ತ್ಯಾಗ ಬಲಿದಾನದಿಂದ ಸ್ವಾತಂತ್ರ್ಯ ಗಳಿಸಿಕೊಟ್ಟ ಮಹಾಪುರುಷ ಗಾಂಧೀಜಿ: ಕುಮಾರ್ ಕೊಪ್ಪ

KannadaprabhaNewsNetwork |  
Published : Oct 03, 2026, 01:45 AM IST
2ಕೆಎಂಎನ್ ಡಿ12 | Kannada Prabha

ಸಾರಾಂಶ

ಅಪರೂಪದ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಧಾನಮಂತ್ರಿಯಾಗಿ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ ಯೋಜನೆಗಳನ್ನು ರೂಪಿಸಿದರು. ವಿಜ್ಞಾನ, ತಂತ್ರಜ್ಞಾನ, ಕೃಷಿ, ಸೈನಿಕ ಬಲ, ಯುದ್ಧ ಕ್ಷೇತ್ರಗಳಲ್ಲಿ ಭಾರತಕ್ಕೆ ಗರಿಮೆ, ಹಿರಿಮೆ ತಂದು ಮಾದರಿ ಪ್ರಧಾನಮಂತ್ರಿ ಎನಿಸಿಕೊಂಡ ಅಪರೂಪದ ವ್ಯಕ್ತಿತ್ವ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರದ್ದು ಎಂದು ಸ್ಮರಿಸಿದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಸತ್ಯ, ಅಹಿಂಸೆ, ತ್ಯಾಗ, ಬಲಿದಾನದಿಂದಲೂ ಸ್ವಾತಂತ್ರ್ಯ ಗಳಿಸಬಹುದು ಎಂಬುದನ್ನು ವಿಶ್ವಕ್ಕೆ ಸಾರಿದ ಮಹಾಪುರುಷ ಮಹಾತ್ಮ ಗಾಂಧೀಜಿ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕುಮಾರ್ ಕೊಪ್ಪ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಜನ್ಮದಿನ ಮತ್ತು ವಿಶ್ವ ಅಹಿಂಸಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಅಹಿಂಸೆಯ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಮಹಾತ್ಮ ಗಾಂಧೀಜಿ ಅವರ ಪಾತ್ರ ದೊಡ್ಡದು. ಅವರ ಸ್ಮರಣೆ ಅತ್ಮವಶ್ಯಕ ಎಂದರು.

ವಿಶ್ವಸಂಸ್ಥೆಯಲ್ಲಿ ಮಹಾತ್ಮಗಾಂಧಿ ಅವರ ಜನ್ಮದಿನ ಆಚರಿಸಿ ಸ್ಮರಿಸುತ್ತಾರೆ. ಈ ವಿಶ್ವನಾಯಕರ ತತ್ವ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ಜೀವನವೇ ಸಂದೇಶ ಎಂದಿರುವ ಸತ್ಯವನ್ನು ಉಳಿಸಿ ಬೆಳೆಸೋಣ ಎಂದು ಕರೆ ನೀಡಿದರು.

ಅಪರೂಪದ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಪ್ರಧಾನಮಂತ್ರಿಯಾಗಿ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮಹತ್ವದ ಯೋಜನೆಗಳನ್ನು ರೂಪಿಸಿದರು. ವಿಜ್ಞಾನ, ತಂತ್ರಜ್ಞಾನ, ಕೃಷಿ, ಸೈನಿಕ ಬಲ, ಯುದ್ಧ ಕ್ಷೇತ್ರಗಳಲ್ಲಿ ಭಾರತಕ್ಕೆ ಗರಿಮೆ, ಹಿರಿಮೆ ತಂದು ಮಾದರಿ ಪ್ರಧಾನಮಂತ್ರಿ ಎನಿಸಿಕೊಂಡ ಅಪರೂಪದ ವ್ಯಕ್ತಿತ್ವ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರದ್ದು ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳಾದ ಸಿ.ಎಂ.ದ್ಯಾವಪ್ಪ, ಕ್ರಾಂತ್ರಿಸಿಂಹ, ರವಿಗೌಡ, ಆಟೋಕೃಷ್ಣ, ವೀಣಾಶಂಕರ್, ಚನ್ನಪ್ಪ, ಚಂದ್ರಗಾಲು ವಿಜಯ್‌ಕುಮಾರ್, ಪ್ರಕಾಶ್, ಹಳವಾಡಿ ವೆಂಕಟೇಶ್, ಮಂಜುನಾಥ್, ಜ್ಯೋತಿ, ಶಕುಂತಲಾ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವೀಲಿ 100 ಕೋಟಿ ವೆಚ್ಚದಲ್ಲಿ ಗಾಂಧಿ ಸ್ಮಾರಕ: ಡಿಕೆ
ಇಂದು ಶೋಭಾಯಾತ್ರೆ: ಗಣಪತಿ ವಿಸರ್ಜನೆಗೆ ಲಕ್ಷಾಂತರ ಜನರ ನಿರೀಕ್ಷೆ