ಗಾಂಧೀಜಿ ತತ್ವಾದರ್ಶಗಳು ಯುವಜನತೆಗೆ ದಾರಿದೀಪ

KannadaprabhaNewsNetwork |  
Published : Oct 03, 2026, 01:45 AM IST
2ಎಚ್ಎಸ್ಎನ್13 :  | Kannada Prabha

ಸಾರಾಂಶ

ಭಾರತದಲ್ಲಿ ವಿವಿಧ ಧರ್ಮಗಳ ಜನರು ಒಗ್ಗಟ್ಟಿನಿಂದ ಬಾಳಬೇಕು ಎಂಬ ಸಂದೇಶ ಮಹತ್ವದ್ದಾಗಿದೆ. ಭಾರತದಲ್ಲಿ ಶಾಂತಿ, ಅಹಿಂಸೆ ಹಾಗೂ ಸತ್ಯಾಗ್ರಹದ ಬಗ್ಗೆ ಮಾತನಾಡಿದಾಗ ಮೊದಲಿಗೆ ನೆನಪಾಗುವುದು ಮಹಾತ್ಮ ಗಾಂಧೀಜಿ. ಅಂತಹ ಮಹಾನ್ ಚೇತನವನ್ನು ಇಂದು ಸ್ಮರಿಸುತ್ತಿದ್ದೇವೆ ಎಂದರು. ಗಾಂಧೀಜಿ ಅವರನ್ನು ಕೇವಲ ರಸ್ತೆ ಅಥವಾ ವೃತ್ತಗಳಿಗೆ ಅವರ ಹೆಸರಿಡುವ ಮೂಲಕ ಸ್ಮರಿಸುವುದಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆ ಹಾಗೂ ತತ್ವಗಳನ್ನು ಅರಿತುಕೊಳ್ಳಬೇಕು. ಸತ್ಯ, ಅಹಿಂಸೆ, ಶಾಂತಿ ಮತ್ತು ಸಾಮರಸ್ಯದ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗಾಂಧೀಜಿ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಅಧಿಕಾರ ಅಥವಾ ಬಲಪ್ರಯೋಗವಿಲ್ಲದೆ ಅಹಿಂಸೆಯ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ನೀಡಿದ ಮಹಾತ್ಮ ಗಾಂಧೀಜಿ ಅವರ ತತ್ವ, ಆದರ್ಶಗಳನ್ನು ಇಂದಿನ ಯುವ ಪೀಳಿಗೆ ಪಾಲಿಸಬೇಕು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ತಾಲೂಕು ಆಡಳಿತದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ 157ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಹಿಂಸೆಯ ಮೂಲಕ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಗಾಂಧೀಜಿ ಅವರ ಜೀವನ ಚರಿತ್ರೆಯನ್ನು ಯುವಜನತೆ ಅಧ್ಯಯನ ಮಾಡಬೇಕು. ಸತ್ಯ, ಅಹಿಂಸೆ, ಸರಳತೆ ಹಾಗೂ ಸ್ವಾವಲಂಬನೆಗೆ ಅವರು ನೀಡಿದ ಮಹತ್ವವನ್ನು ಅರ್ಥಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಉಪವಿಭಾಗಾಧಿಕಾರಿ ಹುಲ್ಲುಮನೆ ತಿಮ್ಮಣ್ಣ ಮಾತನಾಡಿ, ಬಾಲ್ಯದಿಂದಲೂ ಕೇಳಿ ಬೆಳೆದಿರುವ ‘ನಾವು ಎಳೆಯರು, ನಾವು ಗೆಳೆಯರು...’ ಎಂಬ ಪದ್ಯದಲ್ಲಿ ಪ್ರತಿಪಾದಿಸಿರುವಂತೆ ಭಾರತದಲ್ಲಿ ವಿವಿಧ ಧರ್ಮಗಳ ಜನರು ಒಗ್ಗಟ್ಟಿನಿಂದ ಬಾಳಬೇಕು ಎಂಬ ಸಂದೇಶ ಮಹತ್ವದ್ದಾಗಿದೆ. ಭಾರತದಲ್ಲಿ ಶಾಂತಿ, ಅಹಿಂಸೆ ಹಾಗೂ ಸತ್ಯಾಗ್ರಹದ ಬಗ್ಗೆ ಮಾತನಾಡಿದಾಗ ಮೊದಲಿಗೆ ನೆನಪಾಗುವುದು ಮಹಾತ್ಮ ಗಾಂಧೀಜಿ. ಅಂತಹ ಮಹಾನ್ ಚೇತನವನ್ನು ಇಂದು ಸ್ಮರಿಸುತ್ತಿದ್ದೇವೆ ಎಂದರು. ಗಾಂಧೀಜಿ ಅವರನ್ನು ಕೇವಲ ರಸ್ತೆ ಅಥವಾ ವೃತ್ತಗಳಿಗೆ ಅವರ ಹೆಸರಿಡುವ ಮೂಲಕ ಸ್ಮರಿಸುವುದಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆ ಹಾಗೂ ತತ್ವಗಳನ್ನು ಅರಿತುಕೊಳ್ಳಬೇಕು. ಸತ್ಯ, ಅಹಿಂಸೆ, ಶಾಂತಿ ಮತ್ತು ಸಾಮರಸ್ಯದ ಸಂದೇಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಗಾಂಧೀಜಿ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದು ಹೇಳಿದರು

ಕಾರ್ಯಕ್ರಮದಲ್ಲಿ ತಹಸೀಲ್ದಾರ್‌ ಸುಪ್ರೀತಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಾಧರನ್, ಪುರಸಭೆ ಮುಖ್ಯಾಧಿಕಾರಿ ಮಹೇಶ್ವರಪ್ಪ, ಸಿಡಿಪಿಒ ಗೌರಿ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಳಗಾವೀಲಿ 100 ಕೋಟಿ ವೆಚ್ಚದಲ್ಲಿ ಗಾಂಧಿ ಸ್ಮಾರಕ: ಡಿಕೆ
ಇಂದು ಶೋಭಾಯಾತ್ರೆ: ಗಣಪತಿ ವಿಸರ್ಜನೆಗೆ ಲಕ್ಷಾಂತರ ಜನರ ನಿರೀಕ್ಷೆ