ಗಾಂಧಿನಗರ ಅಂಗನವಾಡಿ ಕೇಂದ್ರ ಎಲ್‌ಕೆಜಿ ತರಗತಿ ಉದ್ಘಾಟನೆ

KannadaprabhaNewsNetwork |  
Published : Jul 22, 2025, 12:15 AM IST
ಚಿತ್ರ :  17ಎಂಡಿಕೆ3 : ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಗಾಂಧಿ ನಗರ ಅಂಗನವಾಡಿ ಕೇಂದದಲ್ಲಿ ಎಲ್‌ಕೆಜಿ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರಸ್ವತಿ ಪೂಜೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕಾಂತೂರು ಮುರ್ನಾಡು ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಟ್ಟ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ತರಗತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸರಸ್ವತಿ ಪೂಜೆ ಮತ್ತು ಸನ್ಮಾನ ಕಾರ್ಯಕ್ರಮವು ನೆರವೇರಿತು.

ಎಲ್‌ಕೆಜಿ ತರಗತಿ ದಾಖಲಾದ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಲಾಯಿತು. ಗ್ರಾಮ ಪಂಚಾಯಿತಿಯಿಂದ ಮತ್ತು ಸಮುದಾಯದ ದಾನಿಗಳಿಂದ ಅತಿ ಹೆಚ್ಚು ಕೊಡುಗೆಗಳನ್ನು ಪಡೆದುದ್ದಕ್ಕಾಗಿ ಅಂಗನವಾಡಿ ಕಾರ್ಯಕರ್ತೆ ಚೈತ್ರ ಪಿ.ಯು., ಜ್ಯೋತಿ ಹಾಗೂ ಹಾಗೂ ಉತ್ತಮ ಸಹಕಾರ ಸಲಹೆ ಮಾರ್ಗದರ್ಶನಕ್ಕಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ, ಸದಸ್ಯರಾದ ಮುಂಡಂಡ ವಿಜಯಲಕ್ಷ್ಮಿ, ಮೇಲ್ವಿಚಾರಕರು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಮೇಪಾಡಂಡ ಸವಿತಾ ಕೀರ್ತನ್ ಅವರನ್ನು ಬಾಲವಿಕಾಸ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಅನಿತಾ ಸನ್ಮಾನ ನೆರವೇರಿಸಿದರು.

ಗಾಂಧಿನಗರ ಅಂಗನವಾಡಿಗೆ ದಾನಿಗಳು ಅನೇಕ ಕೊಡುಗೆಗಳನ್ನು ವಿತರಿಸಿದರು.

ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಚಂದ್ರಮೌಳಿ ಮಾತನಾಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ರೇಖಾ, ಸದಸ್ಯರು ವಿಜಯಲಕ್ಷ್ಮಿ, ಮೀನಾಕ್ಷಿ, ಪುಷ್ಪ, ಈರಾ ಸುಬ್ಬಯ್ಯ ಶುಭ ಹಾರೈಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕುಶನ್ ರೈ ಅವರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಅಂಗನವಾಡಿ ಕೇಂದ್ರಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ಗಾಂಧಿನಗರ ಅಂಗನವಾಡಿ ಕೇಂದ್ರಕ್ಕೆ ಸ್ಥಳ ಅಗಲೀಕರಣದೊಂದಿಗೆ ಹೊಸ ಕೊಠಡಿಯನ್ನು ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆ ಪಿಯು ಚೈತ್ರ ನಿರೂಪಿಸಿದರು. ಬಾಡಗ ಅಂಗನವಾಡಿ ಕಾರ್ಯಕರ್ತೆ ಬಿ ಬಿ ಜಯಂತಿ, ವಂದಿಸಿದರು. ಶಾಸ್ತ್ರಿ ನಗರ ಅಂಗನವಾಡಿ ಕಾರ್ಯಕರ್ತೆ ಪ್ರಮೀಳಾ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆರಾದ ಗೀತಾ, ಕುಸುಮ ಮತ್ತಿತರರು ಹಾಜರಿದ್ದರು.

PREV

Recommended Stories

ಮಹಾಜನ ವರದಿ ಒಪ್ಪಿ, ಇಲ್ಲದಿದ್ರೆ ಯಥಾಸ್ಥಿತಿ ಇರಲಿ
ಸೂರಿಲ್ಲದವರಿಗೆ ಸೂರು ಒದಗಿಸುವ ಸಂಕಲ್ಪ: ವಿಜಯಾನಂದ ಕಾಶಪ್ಪನವರ