ಗಾಂಧಿ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಕಾರವಾರ
ಗುರುವಾರ ನಗರಸಭೆಯ ಮಹಾತ್ಮಾ ಗಾಂಧಿ ಉದ್ಯಾನವನದಲ್ಲಿ ಆಯೋಜಿಸಿದ್ದ ಗಾಂಧಿ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮದಲ್ಲಿ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.
ಗಾಂಧೀಜಿಯವರಲ್ಲಿದ್ದ ಪ್ರಾಮಾಣಿಕತೆಯ ಗುಣವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಹಿಂಸೆಯ ಮೂಲಕ ಏನು ಬೇಕಾದರು ಸಾಧಿಸಬಹುದು ಎಂದು ಇಡೀ ಜಗತ್ತಿಗೆ ತಿಳಿಸಿದವರು ಗಾಂಧೀಜಿ ಎಂದು ಹೇಳಿದರು.ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ದೀಲಿಷ್ ಶಶಿ, ಗಾಂಧೀಜಿ ನನ್ನ ಜೀವನವೇ ನನ್ನ ಸಂದೇಶ ಎಂಬುದಕ್ಕೆ ಪೂರಕವಾಗಿ ಅವರ ತತ್ವಗಳನ್ನು ಜೀವನ ಪರ್ಯಾಂತ ತಮ್ಮ ಜೀವನದಲ್ಲಿ ಅಳವಡಿಸಿಕೊಂಡ ಸರಳ ವ್ಯಕ್ತಿತ್ವದ ನಾಯಕ. ದೇಶದ ಪ್ರತಿ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಎಲ್ಲಾ ಜಾತಿ ಧರ್ಮದವರನ್ನು ಒಗ್ಗೂಡಿಸಿ ಬ್ರಿಟಿಷರಿಂದ ಸ್ವಾತಂತ್ರ್ಯ ತಂದುಕೊಟ್ಟರು ಎಂದರು.
ನಗರಸಭೆ ಅಧ್ಯಕ್ಷ ರವಿರಾಜ ಅಂಕೋಲೇಕರ, ಗಾಂಧೀಜಿ ಅವರ ಬಗ್ಗೆ ತಿಳಿಯಬೇಕಾದ ಸಾಕಷ್ಟು ವಿಷಯಗಳಿದ್ದು, ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ಸತ್ಯ, ಅಹಿಂಸೆ ಹಾಗೂ ಆತ್ಮಬಲದ ಕುರಿತು ಪ್ರತಿಯೊಬ್ಬರೂ ತಿಳಿಯಬೇಕಿದೆ ಎಂದರು.
ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಏರ್ಪಡಿಸಿಲಾದ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗದಲ್ಲಿ ದಿಶಾ ಜೆ., ದೀಕ್ಷಾ ಮಂಜುನಾಥ ನಾಯ್ಕ, ಅಲೇಖಾ ಎಂ. ನಾಯ್ಕ, ಪದವಿ ಪೂರ್ವ ಶಿಕ್ಷಣ ವಿಭಾಗದಲ್ಲಿ ಸೃಷ್ಟಿ ಆರ್. ಪಟಗಾರ, ನಯನಾ ಕೃಷ್ಣಾ ಗೌಡ, ಸಂಜನಾ ಭಾಸ್ಕರ ನಾಯ್ಕ, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಕಿರಣ ಧುಮಾಲಿ, ಅಂಕಿತಾ ಡಿ. ದಳವಿ, ರಕ್ಷಿತಾ ಆರ್. ಗೌಡ, ವಿದ್ಯಾರ್ಥಿಗಳಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಯಿತು.
ಗಾಂಧೀ ಭಜನೆಗಳ ಕಾರ್ಯಕ್ರಮ ನಡೆಯಿತು, ನಂತರ ಎಂಜಿ ರಸ್ತೆಯಲ್ಲಿ ಶ್ರಮದಾನ ನಡೆಸಲಾಯಿತು. ಹಿರಿಯ ಆರೋಗ್ಯ ನಿರೀಕ್ಷಕರು ಯಾಕುಬ್ ಶೇಖ್ ಸ್ವಾಗತಿಸಿದರು, ನಗರಸಭೆ ವ್ಯವಸ್ಥಾಪಕ ಎನ್.ಎಂ. ಮೇಸ್ತ ವಂದಿಸಿದರು.