ಗಣೇಶ ರಾಜಬೀದಿ ಉತ್ಸವ: ಸಂಚಾರ ಮಾರ್ಗದಲ್ಲಿ ಬದಲಾವಣೆ: ಡಿಸಿ ಆದೇಶ

KannadaprabhaNewsNetwork |  
Published : Sep 19, 2025, 01:00 AM IST
(ಗಂಗಾಧರ ಸ್ವಾಮಿ, ಡಿಸಿ) | Kannada Prabha

ಸಾರಾಂಶ

ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಇರುವುದರಿಂದ ಸಾರ್ವನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸೆ.20ರಂದು ಬೆಳಗೆ, 10ರಿಂದ ರಾತ್ರಿ 11 ಗಂಟೆವರೆಗೆ ಸಂಚಾರ ಮಾರ್ಗಗಳ ಬದಲಾಯಿಸಿ ದಾವಣಗೆರೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಇರುವುದರಿಂದ ಸಾರ್ವನಿಕರಿಗೆ ಮತ್ತು ವಾಹನ ಸಂಚಾರಕ್ಕೆ ತೊಂದರೆ ಆಗದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಸೆ.20ರಂದು ಬೆಳಗೆ, 10ರಿಂದ ರಾತ್ರಿ 11 ಗಂಟೆವರೆಗೆ ಸಂಚಾರ ಮಾರ್ಗಗಳ ಬದಲಾಯಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹರಿಹರ ಕಡೆಯಿಂದ ಬಾತಿ ಮೂಲಕ ಹಳೇ ಪಿ.ಬಿ. ರಸ್ತೆ ಮುಖಾಂತರ ಬರುವ ಎಲ್ಲ ಸರಕು ಲಾರಿಗಳು ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳು ಹರಿಹರ ನಗರದಿಂದಲೇ ದಾವಣಗೆರೆ ಕಡೆಗೆ ಬರುವ ಹಳೇ ಪಿ.ಬಿ. ರಸ್ತೆಗೆ ಬಾರದೇ ಹರಿಹರದಿಂದ ನೇರವಾಗಿ ಶಿವಮೊಗ್ಗ, ಬೈಪಾಸ್ ಮುಖಾಂತರ ಹೊಸ ಎನ್.ಎಚ್-48 ರಸ್ತೆ ಮೂಲಕ ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಮಾರ್ಗವಾಗಿ ಬಂದು ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೆಟ್ ಕ್ರಾಸ್ ಮುಖಾಂತರ ಎಪಿಎಂಸಿಗೆ ಹೋಗುವುದು. ಕೆ.ಎಸ್.ಆರ್.ಟಿ.ಸಿ. ಬಸ್‌ಗಳು ಮೇಲ್ಕಂಡ ಮಾರ್ಗದಲ್ಲಿ ಬಾಡಾ ಕ್ರಾಸ್ ಮುಖಾಂತರ ಅವರಗೆರೆ ಮಾರ್ಗವಾಗಿ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬಂದು, ನಂತರ ಅದೇ ಮಾರ್ಗವಾಗಿ ವಾಪಸ್‌ ಬೆಂಗಳೂರು, ಬೆಳಗಾವಿ ಕಡೆಗೆ ಹೋಗುವುದು. ಖಾಸಗಿ ಬಸ್‌ಗಳು ಮೇಲ್ಕಂಡ ಮಾರ್ಗದಲ್ಲಿ ಬಂದು ಎ.ಪಿ.ಎಂ.ಸಿ. ಮಾರ್ಕೇಟ್‌ನಲ್ಲಿ ಪಾರ್ಕಿಂಗ್ ಮಾಡುವುದು.

ಚಿತ್ರದುರ್ಗದ ಕಡೆಯಿಂದ ಬರುವ ಸರಕು ಲಾರಿಗಳು ಡಿಸಿಎಂ ಅಂಡರ್ ಪಾಸ್ ಹತ್ತಿರದ ದನದ ಮಾರ್ಕೆಟ್ ಕ್ರಾಸ್ ಮುಖಾಂತರ ಎಪಿಎಂಸಿಗೆ ಹೋಗುವುದು. ಕೆ.ಎಸ್.ಆರ್.ಟಿ.ಸಿ. ಬಸ್‌ಗಳು ಮೇಲ್ಕಂಡ ಮಾರ್ಗದಲ್ಲಿ ಎಪಿಎಂಸಿ ಹೋಗುವುದು. ಕೆಎಸ್‌ಆರ್‌ಟಿಸಿ ಬಸ್‌ಗಳು ಮೇಲ್ಕಂಡ ಮಾರ್ಗವಾಗಿ ನೂತನ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್‌ ಬೆಂಗಳೂರು, ಬೆಳಗಾವಿ ಕಡೆಗೆ ಹೋಗುವುದು. ಖಾಸಗಿ ಬಸ್‌ಗಳು ಮೇಲ್ಕಂಡ ಮಾರ್ಗದಲ್ಲಿ ಬಂದು ಎ.ಪಿ.ಎಂ.ಸಿ. ಮಾರ್ಕೆಟ್‌ನಲ್ಲಿ ಬಂದು ಪಾರ್ಕಿಂಗ್ ಮಾಡುವುದು.

ಜಿಎಂಐಟಿ ಕಾಲೇಜ್ ಹತ್ತಿರ ತಾತ್ಕಾಲಿಕ ರಸ್ತೆ ಬದಿಯಲ್ಲಿ ನಿಲ್ಲಿಸುವಂತಹ ಗೂಡ್ಸ್ ಲಾರಿಗಳು ರಸ್ತೆ ಬದಿಯಲ್ಲಿ ನಿಲ್ಲಿಸದೇ ಖಾಸಗಿ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳುವುದು. ಚನ್ನಗಿರಿ ಕಡೆಯಿಂದ ಹದಡಿ ಬ್ರಿಡ್ಜ್ ಮೂಲಕ ಬರುವ ಕೆ.ಎಸ್.ಆರ್.ಟಿ.ಸಿ. ಬಸ್‌ಗಳು ಬಾಡಾ ಕ್ರಾಸ್ ಮೂಲಕ ಆವರಗೆರೆ ಮಾರ್ಗವಾಗಿ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್ ಹೋಗುವುದು. ನಂತರ ಖಾಸಗಿ ಬಸ್‌ಗಳು ಮಾಗನೂರು ಬಸಪ್ಪ ಪೆಟ್ರೋಲ್ ಬಂಕ್ ಹತ್ತಿರದ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಚನ್ನಗಿರಿ ಕಡೆಯಿಂದ ಸರಕು ಲಾರಿಗಳು ಮೇಲ್ಕಂಡ ಮಾರ್ಗದಲ್ಲಿ ಬಂದು ಎ.ಪಿ.ಎಂ.ಸಿ. ಮಾರ್ಕೆಟ್‌ನಲ್ಲಿ ಪಾರ್ಕಿಂಗ್ ಮಾಡುವುದು.

ಜಗಳೂರು ಕಡೆಯಿಂದ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳು ಬೇತೂರು ರಸ್ತೆ ಮೂಲಕ ಆರ್.ಎಂ.ಸಿ. ಫ್ಲೈ ಓವರ್ ಸೇತುವೆ ಮುಖಾಂತರ ಬಂದು ನೂತನ ಕೆಎಸ್‌ಆರ್‌ಟಿಸಿಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್‌ ಹೋಗುವುದು. ಅನಂತರ ಜಗಳೂರು ಕಡೆಯಿಂದ ಬರುವ ಖಾಸಗಿ ಬಸ್‌ಗಳು ಜಗಳೂರು ಖಾಸಗಿ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್ ಹೋಗುವುದು. ಹಾಗೂ ಸರಕು ಲಾರಿಗಳು ವೆಂಕಟೇಶ್ವರ ಸರ್ಕಲ್, ಗಣೇಶ ಹೋಟೆಲ್ ಸರ್ಕಲ್ ಮುಖಾಂತರ ಎ.ಪಿ.ಎಂ.ಸಿ. ಮಾರ್ಕೆಟ್‌ನಲ್ಲಿ ಪಾರ್ಕಿಂಗ್ ಮಾಡುವುದು.

ಹರಪನಹಳ್ಳಿ ಕಡೆಯಿಂದ ಕಂಚಿಕೆರೆ ಬೆಂಡಿಗರೆ ಮಾರ್ಗವಾಗಿ ದಾವಣಗೆರೆ ನಗರಕ್ಕೆ ಬರುವ ಕೆಎಸ್‌ಆರ್‌ಟಿಸಿ ಬಸ್‌ಗಳು ವೆಂಕಟೇಶ್ವರ ಸರ್ಕಲ್ ಗಣೇಶ, ಹೋಟೆಲ್ ಸರ್ಕಲ್ ಮೂಲಕ ಆರ್.ಎಂ.ಸಿ. ಫ್ಲೈ ಓವರ್ ಮುಖಾಂತರ ಬಂದು ನೂತನವಾಗಿ ನಿರ್ಮಾಣಗೊಂಡಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ನಂತರ ಅದೇ ಮಾರ್ಗವಾಗಿ ವಾಪಸ್‌ ಹೋಗುವುದು. ಅನಂತರ ಹರಪನಹಳ್ಳಿ ಕಡೆಯಿಂದ ಕಂಚಿಕೆರೆ ಬೆಂಡಿಗೆರೆ ಮಾರ್ಗವಾಗಿ ದಾವಣಗೆರೆ ನಗರಕ್ಕೆ ಬರುವ ಖಾಸಗಿ ಬಸ್‌ಗಳು ಜಗಳೂರು ಖಾಸಗಿ ಬಸ್ ನಿಲ್ದಾಣಕ್ಕೆ ಬಂದು, ನಂತರ ಅದೇ ಮಾರ್ಗವಾಗಿ ವಾಪಸ್ ಹೋಗುವುದು ಹಾಗೂ ಸರಕು ಲಾರಿಗಳು ವೆಂಕಟೇಶ್ವರ ಸರ್ಕಲ್, ಗಣೇಶ ಹೋಟೆಲ್ ಸರ್ಕಲ್ ಮುಖಾಂತರ ಎಪಿಎಂಸಿ ಮಾರ್ಕೆಟ್‌ನಲ್ಲಿ ಪಾರ್ಕಿಂಗ್ ಮಾಡುವುದು.

ಸೆ.20ರಂದು ಬೆಳಗ್ಗೆ 10ರಿಂದ ರಾತ್ರಿ 11 ಗಂಟೆವರೆಗೆ ನೂತನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಬಾತಿಕೆರೆಯವರೆಗೆ ಹಳೇ ಪಿ.ಬಿ. ರಸ್ತೆಯಲ್ಲಿ ಯಾವುದೇ ಸರ್ಕಾರಿ ಮತ್ತು ಖಾಸಗಿ ಬಸ್‌ಗಳು ಹಾಗೂ ಯಾವುದೇ ರೀತಿಯ ಭಾರಿ ಮತ್ತು ಲಘು ಸರಕು ಸಾಗಣೆ ವಾಹನಗಳು ಮತ್ತು ಯಾವುದೇ ರೀತಿಯ ಭಾರಿ ಮತ್ತು ಲಘು ವಾಹನಗಳು ಸಂಚರಿಸದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

- - -

-ಪೋಟೋ: ಜಿ.ಎಂ.ಗಂಗಾಧರ ಸ್ವಾಮಿ

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ