ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ವತಿಯಿಂದ ಏರ್ಪಡಿಸಿದ್ದ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಪ್ರಯುಕ್ತ ಸರ್ವಧರ್ಮದ ಮುಖಂಡರ ಶಾಂತಿಸಭೆಯಲ್ಲಿ ಅವರು ಮಾತನಾಡಿ, ರಾಷ್ಟ್ರಕವಿ ತವರು ಜಿಲ್ಲೆ, ಸಜ್ಜನರ ಬೀಡು, ಶಾಂತಿ ನೆಲೆಯ ತವರೂರು ಶಿವಮೊಗ್ಗ ಜಿಲ್ಲೆಗೆ ಕೋಮು ಸೂಕ್ಷ್ಮ ಪ್ರದೇಶ ಎನ್ನುವ ಕೆಟ್ಟ ಹೆಸರು ಬಂದಿದ್ದು, ಕೆಲವು ಕಿಡಿಗೇಡಿಗಳಿಂದ ಜಿಲ್ಲೆಗೆ ಕೆಟ್ಟ ಹೆಸರು ಬಂದಿದೆ. ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ವ್ಯಕ್ತಿಗಳನ್ನು ಗುರುತಿಸಿ ಗಡಿಪಾರು ಮಾಡಲಾಗುವುದು ಎಚ್ಚರಿಕೆ ನೀಡಿದರು.
ಯುವ ಜನರಿಗೆ ಕಾನೂನು ಉಲ್ಲಂಘನೆ ಮಾಡದಂತೆ ಹಿರಿಯರು ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ನೀಡಬೇಕು. ಯಾವುದೇ ಸುದ್ದಿಗಳನ್ನು ಪ್ರಸಾರ ಮಾಡುವಾಗ ಮಾಧ್ಯಮದವರು ಅಧಿಕೃತ ಮಾಹಿತಿ ಪ್ರಸಾರ ಮಾಡುವುದು ಬೇಡ ಎಂದು ಮನವಿ ಮಾಡಿದರು.ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾತನಾಡಿ, ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳು ಒಟ್ಟಿಗೆ ಬಂದಿರುವುದರಿಂದ ಜಿಲ್ಲಾ ಪೋಲಿಸ್ ಇಲಾಖೆ ವತಿಯಿಂದ ಈಗಾಗಲೇ ಜಿಲ್ಲೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಶಾಂತಿ ಸಭೆಗಳನ್ನು ನಡೆಸಲಾಗಿದೆ. ಇಡೀ ಜಿಲ್ಲಾದ್ಯಂತ 3,500ಕ್ಕೂ ಹೆಚ್ಚು ಕಡೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಹಾಗೂ ಈದ್ ಮಿಲಾದ್ ಹಬ್ಬ ಆಚರಣೆಯೂ ಎಲ್ಲಾ ಕಡೆ ನಡೆಯುತ್ತಿರುವುರಿಂದ ಎರಡು ಸಮುದಾಯದ ಮುಖಂಡರು ಹಾಗೂ ಯುವಕರಿಗೆ ಹಬ್ಬವನ್ನು ಉತ್ತಮವಾಗಿ ಶಾಂತಿಯುತವಾಗಿ ಆಚರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಹಬ್ಬಗಳನ್ನು ತೋರಿಕೆಗಾಗಿ ಮಾಡದೆ ಶ್ರದ್ಧಾ ಭಕ್ತಿಯಿಂದ ಆಚರಿಸಬೇಕು. ಎಲ್ಲಾ ಧರ್ಮದವರಿಗೂ ಹಬ್ಬಗಳನ್ನು ಆಚರಣೆ ಮಾಡಲು ಜಿಲ್ಲಾಡಳಿತ ಅವಕಾಶವನ್ನು ನೀಡುತ್ತದೆ. ಕಾನೂನಿನ ಕೆಲವು ನಿಯಮವನ್ನು ಸರಿಯಾಗಿ ಪಾಲಿಸಿ ಆಚರಿಸುವಂತೆ ಸೂಚಿಸಲಾಗುತ್ತದೆ. ಯಾರು ಕೂಡ ನಿರ್ಭಂದ ಎಂದು ಕೊಳ್ಳಬೇಡಿ. ಹಬ್ಬಗಳ ಆಚರಣೆ ವೇಳೆ ಲಕ್ಷಾಂತರ ಜನರು ಸೇರುತ್ತಾರೆ. ಯಾರೋ ಹತ್ತು ಜನ ಕಿಡಿಗೇಡಿಗಳು ಮಾಡುವ ಕೃತ್ಯದಿಂದ ಲಕ್ಷಾಂತರ ಜನರ ನೆಮ್ಮದಿ ಹಾಳು ಮಾಡುತ್ತಾರೆ. ಅದ್ದರಿಂದ ಎರಡು ಧರ್ಮದ ಮುಖಂಡರು, ಯುವಕರು ಸಮಾಜದಲ್ಲಿ ಶಾಂತಿಯನ್ನು ಕಾಪಾಡುವಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಅದ್ದರಿಂದ ಸಮಾಜದ ಹಿರಿಯರು ಎರಡು ಹಬ್ಬಗಳ ಕುರಿತು ಯುವಕರಿಗೆ ಮಾರ್ಗದರ್ಶನ ಮಾಡಿ ಸರಿಯಾದ ರೀತಿಯಲ್ಲಿ ಹಬ್ಬಗಳನ್ನು ಮಾದರಿಯಾಗಿ ಆಚರಿಸಬೇಕಾಗಿದೆ ಎಂದು ತಿಳಿಸಿದರು.
ಈ ಹಿಂದೆ ನಡೆದಿರುವ ಘಟನೆಗಳನ್ನು ಇಟ್ಟುಕೊಂಡು ಯಾರು ಕೂಡ ಗಲಭೆಗಳನ್ನು ಸೃಷ್ಠಿಸುವ ಮತ್ತು ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು. ಮುಖಂಡರು, ನಾಯಕರಾದ ನಾವುಗಳು ನಮ್ಮ ಸಮಾಜದಲ್ಲಿನ ಯುವಕರನ್ನು ನಿಯಂತ್ರಿಸುವ ಮತ್ತು ಸರಿ ತಪ್ಪುಗಳನ್ನು ತಿದ್ದುವ ಕೆಲಸವನ್ನು ಮಾಡಬೇಕು. ಎಲ್ಲಾ ಹಬ್ಬಗಳ ಆಚರಣೆಯಲ್ಲಿ ಪ್ರೀತಿ ವಿಶ್ವಾಸ ಶಾಂತಿಯಿಂದ ಎರಡು ಧರ್ಮದವರು ಪರಸ್ಪರ ಭಾಗವಹಿಸಬೇಕು ಎಂದರು.