ಇಂದು ಗಣೇಶ ವಿಸರ್ಜನೆ: ಬಿಗಿ ಬಂದೋಬಸ್ತ್‌

KannadaprabhaNewsNetwork |  
Published : Sep 22, 2026, 01:45 AM IST
ಕ್ಯಾಪ್ಷನ21ಕೆಡಿವಿಜಿ32 ದಾವಣಗೆರೆ ವಿನೋಬನಗರದ ಗಣೇಶ ಮೂರ್ತಿ........ಕ್ಯಾಪ್ಷನ21ಕೆಡಿವಿಜಿ33 ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ | Kannada Prabha

ಸಾರಾಂಶ

ದಾವಣಗೆರೆ ವಿನೋಬ ನಗರದ 2ನೇ ಮುಖ್ಯ ರಸ್ತೆಯ ಶ್ರೀ ವೀರ ವರಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ಗಣೇಶ ವಿಸರ್ಜನೆಯನ್ನು ಸೆ.22ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ.

- ಮೆರವಣಿಗೆ ವೇಳೆ ಕೆಲ ಅಂಶಗಳ ಕಡ್ಡಾಯ ಪಾಲಿಸಬೇಕು: ಜಿಲ್ಲಾ ಎಸ್‌ಪಿ ಎಚ್.ಟಿ.ಶೇಖರ್

- - -

ಕನ್ನಡಪ್ರಭ ವಾರ್ತೆ ದಾವಣಗೆರೆ ಇಲ್ಲಿನ ವಿನೋಬ ನಗರದ 2ನೇ ಮುಖ್ಯ ರಸ್ತೆಯ ಶ್ರೀ ವೀರ ವರಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ಗಣೇಶ ವಿಸರ್ಜನೆಯನ್ನು ಸೆ.22ರ ಮಂಗಳವಾರ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯಲಿದೆ.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು -ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಗಣೇಶ ಮೆರವಣಿಗೆ ಸಂದರ್ಭ ಕೆಲ ಅಂಶಗಳನ್ನು ಕಡ್ಡಾಯ ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ.ಶೇಖರ್ ಕೋರಿದ್ದಾರೆ.

ಪೊಲೀಸ್ ಬಂದೋಬಸ್ತ್:

ವಿನೋಬ ನಗರ ಗಣೇಶ ಮೆರವಣಿಗೆ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯಲ್ಲಿ ಕಾನೂನು - ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿ ಹಾಗೂ ಕೆ.ಎಸ್.ಆರ್.ಪಿ, ಡಿಎಆರ್ ತುಕಡಿಗಳು, ಹೋಮ್ ಗಾರ್ಡ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮೆರವಣಿಗೆ ಉದ್ದಕ್ಕೂ ಸಿಸಿಟಿವಿ ಅಳವಡಿಕೆ, ಮೆರವಣಿಗೆಯ ಸಂಪೂರ್ಣ ಚಿತ್ರಿಕರಣಕ್ಕೆ ವಿಡಿಯೋಗ್ರಾಫರ್‌ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ, ಮೆರವಣಿಗೆಯ ಉದ್ದಕ್ಕೂ ಡ್ರೋನ್ ಕಣ್ಗಾವಲು ಇರಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಕಾನೂನು- ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

- - -

(ಬಾಕ್ಸ್‌)

* ಕಡ್ಡಾಯ ನಿಯಮಗಳು

1. ಗಣೇಶ ಮೆರವಣಿಗೆ ಈಗಾಗಲೇ ನಿಗದಿಪಡಿಸಿದ ಮಾರ್ಗಗಳಲ್ಲಿಯೇ ಸಾಗಿ, ನಿಗದಿಪಡಿಸಿದ ಸ್ಥಳದಲ್ಲಿಯೇ ಮೆರವಣಿಗೆ ಮುಕ್ತಾಯಗೊಳಿಸಬೇಕು.

2. ಕಾನೂನು ಸುವ್ಯವಸ್ಥೆಗೆ ಧಕ್ಕೆ ಮತ್ತು ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ.

3. ಶಾಂತಿ ಸಭೆ ನಡೆಸಿ ಕಾನೂನು-ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಹಬ್ಬಗಳ ಆಚರಿಸಲು ಸೂಚಿಸಲಾಗಿದ್ದು, ಅದರಂತೆ ನಡೆದುಕೊಳ್ಳಬೇಕು.

4. ಪ್ರಚೋದನಾಕಾರಿ ಹಾಡುಗಳ ಹಾಕುವುದು, ಪೋಸ್ಟರ್‌ಗಳ ಪ್ರದರ್ಶಿಸುವುದಕ್ಕೆ ಅವಕಾಶ ಇಲ್ಲ.

5. ಸಾರ್ವಜನಿಕ/ ಜನಸಂದಣಿ ಪ್ರದೇಶಗಳಲ್ಲಿ ಸಿಡಿಮದ್ದುಗಳನ್ನು ಸಿಡಿಸಬಾರದು.

6. ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ತೊಂದರೆ ಮಾಡುವಂತಿಲ್ಲ.

7. ವಿದ್ಯುತ್ ಅವಘಡ ಆಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.

8. ಗಣೇಶ ಹಬ್ಬ ಸಂಬಂಧ ಈಗಾಗಲೇ ರೌಡಿ ಮತ್ತು ಮತೀಯ ಗೂಂಡಾಗಳ ಮೇಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಿಗಾ ಇರಿಸಲಾಗಿದೆ.

9. ಮೆರವಣಿಗೆಯಲ್ಲಿ ಕರ್ಕಶ ಶಬ್ಧ ಮಾಡುವ ಸೌಂಡ್ ಸಿಸ್ಟಂ ಮತ್ತು ಡಿಜೆ ಮ್ಯೂಸಿಕ್‌ಗಳನ್ನು ಉಪಯೋಗಿಸಬಾರದು. ನ್ಯಾಯಲಯ ಕರ್ಕಶ ಶಬ್ಧ ಮಾಡುವ ಸೌಂಡ್ ಸಿಸ್ಟಂಗಳನ್ನು ನಿಷೇಧಿಸಿದೆ.

10. ಮೆರವಣಿಗೆ ಮಾಡುವಾಗ ಸಾರ್ವಜನಿಕ ಆಸ್ತಿ, ಜೀವಹಾನಿ ಆಗದಂತೆ ಮುಂಜಾಗೃತ ಕ್ರಮ ಅನುಸರಿಸಬೇಕು.

11. ಸಾಮಾಜಿಕ ಜಾಲತಾಣಗಳಲ್ಲಿ ಕೋಮುಪ್ರಚೋದಕ ಹಾಗೂ ಧಾರ್ಮಿಕ ನಿಂದನೆ, ಸುಳ್ಳುಸುದ್ದಿ ಹರಡುವಂತಿಲ್ಲ, ಷೇರ್ ಮಾಡುವಂತಿಲ್ಲ.

12. ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೇ ಶಾಂತಿ- ಸೌಹಾರ್ದದಿಂದ ಹಬ್ಬ ಆಚರಿಸಬೇಕು.

13 ಅಹಿತಕರ ಘಟನೆಗಳು ನಡೆದರೆ ತುರ್ತು ಸಹಾಯವಾಣಿ 112ಗೆ ಕರೆ ಮಾಡುವುದು ಅಥವಾ ಸ್ಥಳೀಯ ಪೊಲೀಸ್ ಠಾಣೆ/ಪೊಲೀಸ್ ಅಧಿಕಾರಿ- ಸಿಬ್ಬಂದಿಗೆ ಮಾಹಿತಿ ನೀಡಬೇಕು.

-14. ಸಾರ್ವಜನಿಕ ಸ್ಥಳಗಳಲ್ಲಿ ಅನುಮತಿ ಪಡೆಯದೇ ಯಾವುದೇ ಬ್ಯಾನರ್- ಬಂಟಿಗ್ಸ್‌ ಹಾಕಬಾರದು.

- - -

-21ಕೆಡಿವಿಜಿ32: ದಾವಣಗೆರೆ ವಿನೋಬನಗರದ ಗಣೇಶ ಮೂರ್ತಿ.

-21ಕೆಡಿವಿಜಿ33: ಎಚ್.ಟಿ.ಶೇಖರ್, ಜಿಲ್ಲಾ ಎಸ್‌ಪಿ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಬಸ್ ಗ್ಯಾರಂಟಿ ಇಲ್ಲ.. ಖಾಸಗಿ ಬಸ್‌ಗೆ ಕಾಸಿಲ್ಲ!
ಭಾರಿ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ