ಬ್ಯಾಡಗಿ ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವ

KannadaprabhaNewsNetwork |  
Published : Sep 16, 2026, 02:15 AM IST
ಬ್ಯಾಡಗಿ ಪಟ್ಟಣದಲ್ಲಿ ಗಣೇಶೋತ್ಸವ ಅದ್ಧೂರಿಯಾಗಿ ನೇರವೇರಿತು | Kannada Prabha

ಸಾರಾಂಶ

ಬ್ಯಾಡಗಿ ತಾಲೂಕಿನಾದ್ಯಂತ ಮೋದಕ ಪ್ರಿಯ ಏಕದಂತ, ಗಜಾನನ, ಗೌರಿ-ಗಣೇಶ ಹಬ್ಬವನ್ನು ಸೋಮವಾರ ಸಂಭ್ರಮ, ಸಡಗರ, ವಿಜೃಂಭಣೆ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಬ್ಯಾಡಗಿ: ತಾಲೂಕಿನಾದ್ಯಂತ ಮೋದಕ ಪ್ರಿಯ ಏಕದಂತ, ಗಜಾನನ, ಗೌರಿ-ಗಣೇಶ ಹಬ್ಬವನ್ನು ಸೋಮವಾರ ಸಂಭ್ರಮ, ಸಡಗರ, ವಿಜೃಂಭಣೆ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.

ಸೋಮವಾರ ಗಣೇಶನನ್ನು ಪ್ರತಿಷ್ಠಾಪಿಸುವ ಮೂಲಕ ವಿವಿಧ ಬಡಾವಣೆಗಳು, ಮನೆಗಳು, ಸಾರ್ವಜನಿಕ ಸ್ಥಳಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು. ಬೆಳಗ್ಗೆಯಿಂದಲೇ ಭಕ್ತರು ಗಣೇಶ ಮೂರ್ತಿಗಳನ್ನು ಮನೆಗಳಿಗೆ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ಸ್ಥಳಗಳಿಗೆ ಕೊಂಡೊಯ್ದು ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಿದರು.ಗ್ರಾಮೀಣ ಭಾಗದಲ್ಲೂ ಸಂಭ್ರಮ:ಪ್ರತಿಯೊಬ್ಬರೂ ಪ್ರೀತಿಯಿಂದ ಆಚರಿಸುವ ಹಬ್ಬಗಳಲ್ಲಿ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಗ್ರಾಮೀಣ ಭಾಗದಲ್ಲಿಯೂ ಹಬ್ಬದ ಸಂಭ್ರಮ ಮನೆಮಾಡಿತ್ತು. ವಿವಿಧ ಗ್ರಾಮಗಳಲ್ಲಿ ಯುವಕರು ಹಾಗೂ ಸಾರ್ವಜನಿಕರು ಗಣೇಶ ಮೂರ್ತಿಗಳನ್ನು ಬ್ಯಾಂಡ್-ಬಾಜಾ, ವಾದ್ಯಮೇಳ ಹಾಗೂ ಮೆರವಣಿಗೆಯೊಂದಿಗೆ ಅದ್ಧೂರಿಯಾಗಿ ಕರೆತಂದು ಪ್ರತಿಷ್ಠಾಪಿಸಿದರು. ತಾಲೂಕಿನ ಮೋಟೆಬೆನ್ನೂರು, ಬಿಸಲಹಳ್ಳಿ, ಚಿಕ್ಕಬಾಸೂರ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಗಣೇಶ ಮೂರ್ತಿಗಳ ಮೆರವಣಿಗೆಯಲ್ಲಿ ಯುವಕರು, ಮಕ್ಕಳು, ಮಹಿಳೆಯರು ಸೇರಿದಂತೆ ವಿವಿಧ ವಯೋಮಾನದವರು ಪಾಲ್ಗೊಂಡು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು. ಕೆಲವೆಡೆ ಪಟಾಕಿ ಸಿಡಿಸಿ, ಸಾಂಪ್ರ ದಾಯಿಕ ವಾದ್ಯಗಳೊಂದಿಗೆ ಗಣೇಶನನ್ನು ಸ್ವಾಗತಿಸಲಾಯಿತು.ಪಟ್ಟಣದ ವಾರ್ಡಗಳಲ್ಲಿ ಅದ್ಧೂರಿ ಆಚರಣೆ:

ಬ್ಯಾಡಗಿ ಪಟ್ಟಣದ ವಿವಿಧ ವಾರ್ಡಗಳಲ್ಲಿಯೂ ಗಣೇಶೋತ್ಸವದ ಸಂಭ್ರಮ ಕಳೆಗಟ್ಟಿತ್ತು. ಸಾರ್ವಜನಿಕ ಗಣೇಶೋತ್ಸವ ಸಮಿತಿಗಳ ವತಿಯಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಪೂಜೆ, ಭಜನೆ, ಪ್ರಸಾದ ವಿತರಣೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಮೆರವಣಿಗೆಯಲ್ಲಿ ಯುವಕರು ಸಾಂಪ್ರದಾಯಿಕ ಉಡುಗೆ-ತೊಡುಗೆ ಧರಿಸಿ, ವಿವಿಧ ವಾದ್ಯಗಳೊಂದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು. ಡೊಳ್ಳು, ತಾಳ-ವಾದ್ಯಗಳ ಸದ್ದು ಹಾಗೂ ಭಕ್ತಿಗೀತೆಗಳ ನಡುವೆ ಸಾಗಿದ ಗಣೇಶ ಮೂರ್ತಿಗಳ ಮೆರವಣಿಗೆ ಸಾರ್ವಜನಿಕರ ಗಮನ ಸೆಳೆಯಿತು.ಮನೆಮನೆಗೂ ಗಣೇಶನ ಆರಾಧನೆ:ಗಣೇಶ ಚತುರ್ಥಿಯ ಅಂಗವಾಗಿ ಮನೆಗಳಲ್ಲಿಯೂ ವಿಶೇಷ ಪೂಜೆ ಸಲ್ಲಿಸಲಾಯಿತು. ಕುಟುಂಬದ ಸದಸ್ಯರು ಒಟ್ಟಾಗಿ ಗಣೇಶನಿಗೆ ಪೂಜೆ ಸಲ್ಲಿಸಿ, ಮೋದಕ ಸೇರಿದಂತೆ ವಿವಿಧ ನೈವೇದ್ಯಗಳನ್ನು ಅರ್ಪಿಸಿದರು. ಮಕ್ಕಳು ಹೊಸ ಬಟ್ಟೆ ಧರಿಸಿ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡರೆ, ಮಹಿಳೆಯರು ಮನೆಗಳನ್ನು ಸಿಂಗಾರಿಸಿ ಗಣೇಶನ ಆರಾಧನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ ಜಿಲ್ಲಾ ಪಂಚಾಯತ್ ಮಹಿಳಾ ಕಬಡ್ಡಿ ತಂಡಕ್ಕೆ ದ್ವಿತೀಯ ಸ್ಥಾನ
ಸಂಭ್ರಮದ ವೀರಭದ್ರೇಶ್ವರ ಜಯಂತಿ ಆಚರಣೆ