ಸುಂಟಿಕೊಪ್ಪ: ಗೌರಿ-ಗಣೇಶ ಮೂರ್ತಿ ವಿಸರ್ಜನೆ ಸಂಭ್ರಮ

KannadaprabhaNewsNetwork |  
Published : Sep 19, 2026, 02:30 AM IST
ಚಿತ್ರ.1: ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಂಘದ 8ನೇ ವರ್ಷದ ಗೌರಿ ಗಣೇಶೋತ್ಸವದ ಮೂರ್ತಿಗಳನ್ನು ವಿಸರ್ಜನೋತ್ಸವ ನಡೆಸುತ್ತಿರುವುದು. 2: ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ 2ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ  ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿರುವುದು. | Kannada Prabha

ಸಾರಾಂಶ

ಸುಂಟಿಕೊಪ್ಪದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ 2ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಇರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಸರ್ಜಿಸಲಾಯಿತು.

ಸುಂಟಿಕೊಪ್ಪ: ಸುಂಟಿಕೊಪ್ಪದ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ 2ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಇರಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ವಿಸರ್ಜಿಸಲಾಯಿತು. ಪಂಪ್ ಹೌಸ್ ರಸ್ತೆಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ನಗರದ ಶ್ರೀ ವಿನಾಯಕ ಮಿತ್ರ ಮಂಡಳಿ ಸಮಿತಿಯ 2ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಉತ್ಸವ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕುಳ್ಳಿರಿಸಿ ಹೆಚ್.ಡಿ.ಕೋಟೆಯ ಪಂಪ್ ಹೌಸ್ ರಸ್ತೆಯಿಂದ ಅಯ್ಯಪ್ಪ ದೇವಾಲಯದವರೆಗೆ ಅಲ್ಲಿಂದ ಮಾದಾಪುರ ರಸ್ತೆಯ ವೃಕ್ಷೋದ್ಭವ ಗಣಪತಿ ದೇವಾಲಯದವರೆಗೆ ಭವ್ಯ ಮೆರವಣೆಗೆ ನಡೆದು ಹರದೂರು ಹೊಳೆಯಲ್ಲಿ ವಿಸರ್ಜಿಸಲಾಯಿತು.

ಸುಂಟಿಕೊಪ್ಪ ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಕಾರ್ಯಕ್ರಮವು ಬುಧವಾರ ಅದ್ಧೂರಿಯಾಗಿ ನಡೆಯಿತು.

ಕೊಡಗರಹಳ್ಳಿ ವಿಘ್ನೇಶ್ವರ ಸೇವಾ ಸಂಘದ 8ನೇ ವರ್ಷದ ಗೌರಿ ಗಣೇಶೋತ್ಸವದ ವಿಸರ್ಜನೋತ್ಸವವು ಬುಧವಾರ ಸಂಜೆ ನಡೆಯಿತು.

ಪ್ರಮುಖ ಬೀದಿಯಲ್ಲಿ ವಿದ್ಯುತ್ ದೀಪ ಅಲಂಕೃತ ಭವ್ಯ ಮಂಟಪದಲ್ಲಿ ಗೌರಿ ಗಣೇಶ ಉತ್ಸವ ಮೂರ್ತಿಯ ಭವ್ಯ ಶೋಭಯಾತ್ರೆಯೊಂದಿಗೆ ನಡೆದು ರಾತ್ರಿ ಸ್ಥಳೀಯ ಕೆರೆಯಲ್ಲಿ ವಿಸರ್ಜಿಸಲಾಯಿತು.ಸೌಹಾರ್ದ ಸಾರಿದ ಮುಸ್ಲಿಂ ಕುಟುಂಬ; ಕೊಡಗರಹಳ್ಳಿಯ ಬೈತೂರಪ್ಪ ದೇವಾಲಯದ ಬಳಿಯ ಬಡಾವಣೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣೇಶ ಮೂರ್ತಿಯ ವಿಸರ್ಜನೋತ್ಸವ ಮೆರವಣಿಗೆಯ ವೇಳೆ ಸ್ಥಳೀಯ ರಫೀಕ್ ಮತ್ತು ಇಬ್ರಾಹಿಂ ಕುಟುಂಬಸ್ಥರು ಹಿಂದೂಗಳಿಗೆ ಸಿಹಿ ಮತ್ತು ತಂಪು ಪಾನೀಯ ಹಂಚಿ ಸೌಹಾರ್ದತೆ ಮೆರೆದರು.

ಮಾದಾಪುರ ರಸ್ತೆಯಲ್ಲಿರುವ ವೃಕ್ಷೋಧ್ಭವ ಶಕ್ತಿ ಮಹಾಗಣಪತಿ ದೇವಾಲಯದಲ್ಲಿ ಪ್ರತಿಷ್ಠಾಪಿಸಿದ್ದ ಗೌರಿ ಗಣೇಶ ಉತ್ಸವ ಮೂರ್ತಿಗೆ ಮಹಾಪೂಜೆ ನೆರವೇರಿಸಿ ನಂತರ ಹರದೂರು ಹೊಳೆಯಲ್ಲಿ ಸಂಜೆ ವಿಸರ್ಜಿಸಲಾಯಿತು.

ಎಮ್ಮೆಗುಂಡಿಯ ಬಾಲಗಣಪತಿ ಮಿತ್ರ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಎರಡನೇ ವರ್ಷದ ಗೌರಿ ಗಣೇಶ ಮೂರ್ತಿಯ ವಿಸರ್ಜನ ಮೆರವಣಿಗೆಯು ಎಮ್ಮೆ ಗುಂಡಿಯಿಂದ ಒಂಟಿಕೊಪ್ಪ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ನಂತರ ಹಿಂತಿರುಗಿ ಎಮ್ಮೆ ಗುಂಡಿಯ ಕೆರೆಯಲ್ಲಿ ವಿಸರ್ಜಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ: ಶಿವಶೇಖರ್
ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 77.45 ಲಕ್ಷ ರು. ಲಾಭ