ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು
ಸೆ.7ರಂದು ಬೆಳಿಗ್ಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿದ್ಯಾಗಣಪತಿ ಪ್ರತಿಷ್ಠಾಪನೆ ನಡೆಯಲಿದೆ. ಪ್ರತಿನಿತ್ಯ ಮಧ್ಯಾಹ್ನ, ರಾತ್ರಿ ಮಹಾಪೂಜೆ ನೆರವೇರಲಿದೆ. ರಾತ್ರಿ 8 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ನಾಡಿನ ಹೆಸರಾಂತ ಕಲಾ ತಂಡಗಳು, ಪ್ರಖ್ಯಾತ ಕಲಾವಿದರು ಭಾಗವಹಿಸಲಿದ್ದಾರೆ.
ಸೆ.20ರಂದು ಬೆಳಿಗ್ಗೆ ಗಣಪತಿ ಸನ್ನಿಧಿಯಲ್ಲಿ ಗಣಹೋಮ ನಡೆಯಲಿದೆ. ಸಂಜೆ 6 ಗಂಟೆಗೆ ಗಣೇಶೋತ್ಸವದ ಸಮಾರೋಪ ಸಮಾರಂಭ ನಡೆಯಲಿದ್ದು, ಶೃಂಗೇರಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಸಾನ್ನಿಧ್ಯ ವಹಿವಹಿಸುವರು.ಸೆ.21ರಂದು ಮಧ್ಯಾಹ್ನ 15 ಸಾವಿರಕ್ಕೂ ಅಧಿಕ ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಲಿದೆ. ಬಳಿಕ ಗಣಪತಿ ವಿಸರ್ಜನಾ ಪೂಜೆ ನೆರವೇರಲಿದ್ದು, ಮಧ್ಯಾಹ್ನ 3 ಗಂಟೆ ಬಳಿಕ ಪಟ್ಟಣದಲ್ಲಿ ವಿದ್ಯಾಗಣಪತಿ ಉತ್ಸವ ನಡೆಯಲಿದೆ. ಉತ್ಸವದಲ್ಲಿ ಚಲಿಸುವ ಆರ್ಕೆಸ್ಟ್ರಾ, ಕೀಲುಕುದುರೆ, ಗೊಂಬೆ, ಕರಗ ನೃತ್ಯ, ಚಂಡೆ, ಹಲಗೆ ವಾದನ ಸೇರಿದಂತೆ ಹಲವು ಆಕರ್ಷಣೆಗಳು ಇರಲಿದೆ. ಜೇಸಿ ವೃತ್ತದ ಬಳಿ ವಿಶೇಷ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ನಂತರ ವಿದ್ಯಾಗಣಪತಿಯನ್ನು ಭದ್ರಾನದಿಯಲ್ಲಿ ಜಲಸ್ತಂಭನ ಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.೦೪ಬಿಹೆಚ್‌ಆರ್ ೧: ಬಾಳೆಹೊನ್ನೂರು ವಿದ್ಯಾಗಣಪತಿ ಸಮಿತಿಯ ಗಣೇಶೋತ್ಸವಕ್ಕೆ ಕಲಾರಂಗ ಕ್ರೀಡಾಂಗಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್ ಪೆಂಡಾಲ್.