ಗಣೇಶೋತ್ಸವ ಭಕ್ತಿ, ಸೌಹಾರ್ದತೆ, ಒಗ್ಗಟ್ಟಿನ ಮನೋಭಾವಕ್ಕೆ ಸಾಕ್ಷಿ: ಕೆ.ಎಂ.ಉದಯ್

KannadaprabhaNewsNetwork |  
Published : Sep 21, 2026, 01:45 AM IST
20ಕೆಎಂಎನ್ ಡಿ21 | Kannada Prabha

ಸಾರಾಂಶ

25 ವರ್ಷಗಳಿಂದ ಗಣೇಶೋತ್ಸವವನ್ನು ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಬಳಗದ ಸದಸ್ಯರ ಕೆಲಸ ಶ್ಲಾಘನೀಯ. ಮುಂದಿನ ದಿನಗಳಲ್ಲಿಯೂ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಒಗ್ಗಟ್ಟಿನಿಂದ ನಡೆಸುವಂತೆ ಶಾಸಕರಿಂದ ಶುಭ ಹಾರೈಕೆ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಗಣೇಶೋತ್ಸವವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಮನೋಭಾವ ಬೆಳೆಸುವ ಕಾರ್ಯಕ್ರಮವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.

ಸಮೀಪದ ಮೆಳ್ಳಹಳ್ಳಿಯ 5ನೇ ನಂಬರ್ ಗರೀಬಿ ಕಾಲೋನಿಯಲ್ಲಿ ಗಜಘರ್ಜನೆ ಗೆಳೆಯರ ಬಳಗದಿಂದ 25ನೇ ವರ್ಷದ ಗಣೇಶೋತ್ಸವದಲ್ಲಿ ಭಾಗವಹಿಸಿ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿ ಮಾತನಾಡಿದರು.

25 ವರ್ಷಗಳಿಂದ ಗಣೇಶೋತ್ಸವವನ್ನು ನಿರಂತರವಾಗಿ ಆಚರಿಸಿಕೊಂಡು ಬರುತ್ತಿರುವ ಬಳಗದ ಸದಸ್ಯರ ಕೆಲಸ ಶ್ಲಾಘನೀಯ. ಮುಂದಿನ ದಿನಗಳಲ್ಲಿಯೂ ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಒಗ್ಗಟ್ಟಿನಿಂದ ನಡೆಸುವಂತೆ ಶುಭ ಹಾರೈಸಿದರು.

ಈ ವೇಳೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನಿಂದ ಆರ್ಥಿಕ ಸಹಾಯ ನೀಡಲಾಯಿತು. ಕಾರ್ಯಕ್ರಮದಲ್ಲಿ ಮನ್ಮುಲ್ ಅಧ್ಯಕ್ಷ ಹರೀಶ್ ಬಾಬು, ನಿರ್ದೇಶಕ ಎ.ಎಸ್.ರಾಜೀವ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಗ್ರಾಪಂ ಮಾಜಿ ಅಧ್ಯಕ್ಷ ವಕ್ರತುಂಡ ವೆಂಕಟೇಶ್, ಮಾಜಿ ಸದಸ್ಯ ಪುಟ್ಟರಾಮು ಸೇರಿದಂತೆ ಬಳಗದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ವಿಜೃಂಭಣೆಯಿಂದ ಗಣೇಶಮೂರ್ತಿ ವಿಸರ್ಜನೆ

ಮಂಡ್ಯ: ಕಮಲಮಂದಿರ ಗಣೇಶೋತ್ಸವ ಸಮಿತಿಯಿಂದ ನೆಹರು ನಗರದ ಕಮಲ ಮಂದಿರದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿ ವಿಸರ್ಜನಾ ಮಹೋತ್ಸವ ಭಾನುವಾರ ಅತ್ಯಂತ ವಿಜೃಂಭಣೆಯಿಂದ ಶಾಸ್ತ್ರೋಕ್ತವಾಗಿ ನೆರವೇರಿತು.ನಿನ್ನೆಯಿಂದಲೇ ಗಣೇಶ ಪ್ರತಿಷ್ಠಾಪನಾ ಮಂಟಪದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಸಲಾಯಿತು. ಬೆಳಗ್ಗೆ ಗಣಹೊಮ ಪೂಜೆ ಹಾಗೂ ಮಹಾಮಂಗಳಾರತಿ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ನಂತರ ನೆಹರುನಗರದ ಪ್ರಮುಖ ಬೀದಿಗಳಲ್ಲಿ ಗಣೇಶ ಮೂರ್ತಿ ಸಾಂಪ್ರದಾಯಿಕ ಮೆರವಣಿಗೆ ನಡೆಯಿತು. ನಗರದ ಹೊರ ವಲಯದ ಕಾರಸವಾಡಿ ಕೆರೆಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಸರ್ಕಾರ ರೈತರಿಗೆ ಪರಿಹಾರ ಬಿಡುಗಡೆ ಮಾಡಲಿ’
10000 ಎಂಎಎಚ್‌ ಬ್ಯಾಟರಿಯ ರೆಡ್‌ಮಿ 17 ಬಿಡುಗಡೆ