ಗಣೇಶೋತ್ಸವ ಸಾಮಾಜಿಕ ಜವಾಬ್ದಾರಿಯ ಸಂದೇಶ ಸಾರುವ ಹಬ್ಬವಾಗಬೇಕು: ಹಳೆ ವಿದ್ಯಾರ್ಥಿನಿ ರುಚಿತ್ ಸಿನ್ಹಾ

KannadaprabhaNewsNetwork |  
Published : Sep 20, 2026, 02:45 AM IST
19ಎಚ್ಎಸ್ಎನ್14 :  | Kannada Prabha

ಸಾರಾಂಶ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಂದರ್ಭದಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಪ್ಲಾಸ್ಟಿಕ್ ಬಳಕೆಯನ್ನು ತಪ್ಪಿಸುವುದು, ಹಾನಿಕಾರಕ ರಾಸಾಯನಿಕಗಳ ಬಳಕೆಯನ್ನು ತ್ಯಜಿಸುವುದು ಹಾಗೂ ನೈಸರ್ಗಿಕ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಮೂರ್ತಿಗಳ ವಿಸರ್ಜನೆಯ ಸಂದರ್ಭದಲ್ಲಿಯೂ ಜಲಮೂಲಗಳಿಗೆ ಹಾನಿಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಗಣೇಶೋತ್ಸವವು ಕೇವಲ ಸಂಭ್ರಮದ ಹಬ್ಬವಾಗಿರದೆ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಜವಾಬ್ದಾರಿಯ ಸಂದೇಶವನ್ನು ಸಾರುವ ಹಬ್ಬವಾಗಬೇಕು ಎಂದು ವಿಜಯ ಶಾಲೆಯ ಹಳೆ ವಿದ್ಯಾರ್ಥಿನಿ ರುಚಿತ್ ಸಿನ್ಹಾ ಕರೆ ನೀಡಿದರು.

ನಗರದ ವಿಜಯ ಶಾಲೆಯಲ್ಲಿ ಆಯೋಜಿಸಲಾಗಿದ್ದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ವಿದ್ಯಾಭ್ಯಾಸ ಮಾಡಿದ ಇದೇ ಶಾಲೆಯ ಗಣೇಶೋತ್ಸವದಲ್ಲಿ ಮತ್ತೆ ಭಾಗವಹಿಸುವ ಅವಕಾಶ ದೊರೆತಿರುವುದು ಸಂತಸ ಹಾಗೂ ಹೆಮ್ಮೆಯ ಸಂಗತಿ ಎಂದು ಹೇಳಿದರು.

ಗಣೇಶೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳ ಉತ್ಸಾಹವನ್ನು ಶ್ಲಾಘಿಸಿದ ಅವರು, ಹಿಂದೆ ಮನೆಮನೆಗಳಲ್ಲಿ ಆಚರಿಸಲಾಗುತ್ತಿದ್ದ ಗಣೇಶೋತ್ಸವವನ್ನು ಸ್ವಾತಂತ್ರ್ಯ ಹೋರಾಟ ಸಮಯದಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರು ಸಾರ್ವಜನಿಕ ಹಾಗೂ ಸಾಮೂಹಿಕ ಆಚರಣೆಯಾಗಿ ರೂಪಿಸುವ ಮೂಲಕ ಜನರನ್ನು ಒಗ್ಗೂಡಿಸುವ ಕಾರ್ಯ ಮಾಡಿದರು ಎಂದು ತಿಳಿಸಿದರು.

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಿಸುವ ಸಂದರ್ಭದಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯ. ಪ್ಲಾಸ್ಟಿಕ್ ಬಳಕೆಯನ್ನು ತಪ್ಪಿಸುವುದು, ಹಾನಿಕಾರಕ ರಾಸಾಯನಿಕಗಳ ಬಳಕೆಯನ್ನು ತ್ಯಜಿಸುವುದು ಹಾಗೂ ನೈಸರ್ಗಿಕ ಮಣ್ಣಿನಿಂದ ತಯಾರಿಸಿದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು. ಮೂರ್ತಿಗಳ ವಿಸರ್ಜನೆಯ ಸಂದರ್ಭದಲ್ಲಿಯೂ ಜಲಮೂಲಗಳಿಗೆ ಹಾನಿಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಮೂರನೇ ತರಗತಿಯ ವಿದ್ಯಾರ್ಥಿಗಳು ಭಜನೆ, ಹಾಡು ಹಾಗೂ ಕಿರು ನಾಟಕಗಳ ಮೂಲಕ ಪರಿಸರ ಸಂರಕ್ಷಣೆಯ ಸಂದೇಶವನ್ನು ಸಾರಿದ ಕಾರ್ಯಕ್ರಮವನ್ನು ಅವರು ಶ್ಲಾಘಿಸಿದರು. ವಿದ್ಯಾರ್ಥಿಗಳಲ್ಲಿ ಪರಿಸರ ಸ್ನೇಹಿ ಮನೋಭಾವ ಬೆಳೆಸುತ್ತಿರುವ ಶಾಲೆಯ ಪ್ರಯತ್ನವನ್ನು ಅಭಿನಂದಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕರು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಕ್ಕಿಂ ಸೂಕ್ಷ್ಮ, ಆದರೆ ಕ್ರೈಂ ಶೂನ್ಯ: ರಾಜ್ಯಪಾಲ
‘ಜಿ ರಾಮ್‌ ಜಿ’ ಅಡಿ ವಸತಿ ಯೋಜನೆ ಕೈಕೊಳ್ಳಲು ಕೇಂದ್ರ ಅವಕಾಶ: ಖಂಡ್ರೆ