ಗಂಗಾ ಕಲ್ಯಾಣ ಯೋಜನೆ ರೈತರಿಗೆ ವರದಾನ

KannadaprabhaNewsNetwork |  
Published : Jun 23, 2025, 11:50 PM ISTUpdated : Jun 23, 2025, 11:51 PM IST
೨೩ಶಿರಾ೧: ಶಿರಾ ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಭೋವಿ ಅಭಿವೃದ್ಧಿ ನಿಗಮದಡಿ  ಗಂಗಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಶಾಸಕ ಟಿ.ಬಿ.ಜಯಚಂದ್ರ ಅವರು ಪಂಪು ಮೋಟಾರ್ ಮತ್ತು ಇತರ ಪೂರಕ ಸಾಮಗ್ರಿಗಳನ್ನು ವಿತರಣೆ ಮಾಡಿದರು. ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ತಾಲೂಕು ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಕಾಂತ್ ಸೇರಿದಂತೆ ಹಲವರು ಹಾಜರಿದ್ದರು.  | Kannada Prabha

ಸಾರಾಂಶ

ಗಂಗಾ ಕಲ್ಯಾಣ ಯೋಜನೆಯು ರೈತರಿಗೆ ವರದಾನವಾಗಿದ್ದು, ರೈತರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ ಗಂಗಾ ಕಲ್ಯಾಣ ಯೋಜನೆಯು ರೈತರಿಗೆ ವರದಾನವಾಗಿದ್ದು, ರೈತರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಿ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು. ಅವರು ನಗರದ ಶ್ರೀ ವಿವೇಕಾನಂದ ಕ್ರೀಡಾಂಗಣದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಭೋವಿ ಅಭಿವೃದ್ಧಿ ನಿಗಮದಡಿ ಗಂಗಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಿಗೆ ಮೋಟಾರ್ ಮತ್ತು ಇತರ ಪೂರಕ ಸಾಮಗ್ರಿಗಳನ್ನು ವಿತರಣೆ ಮಾಡಿ ಮಾತನಾಡಿದರು.

ರಾಜ್ಯದ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲಾ ಸಮುದಾಯದ ಅಬಿವೃದ್ಧಿಗೂ ಹೆಚ್ಚು ಒತ್ತು ನೀಡಿದ್ದು, ಈ ಬಾರಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ೪೬ ಸಾವಿರ ಕೋಟಿ ರು. ಮೀಸಲಿಟ್ಟಿದ್ದಾರೆ. ರಾಜ್ಯದಲ್ಲಿ ನಾನು ಕಾನೂನು ಸಚಿವನಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜನಾಂಗದ ಅನುಕೂಳಕ್ಕಾಗಿ ವಿಶೇಷ ಕಾನೂನು ತಂದ ಪರಿಣಾಮವಾಗಿ ಹೆಚ್ಚಿನ ಅನುದಾನ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸಿಗುತ್ತಿದೆ. ಇಂದು ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಭೋವಿ ಅಭಿವೃದ್ಧಿ ನಿಗಮದ ಒಟ್ಟು ೧೦ ಫಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಮೋಟಾರ್ ಮತ್ತು ಇತರೆ ಪರಿಕರ ನೀಡುವಂತಾಗಿದೆ. ಗಂಗಾ ಕಲ್ಯಾಣ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ಇದರ ಸದುಪಯೋಗಪಡಿಸಿಕೊಂಡು ಉತ್ತಮವ ಕೃಷಿ ಮಾಡಿ ಎಂದರು. ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮದ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ತಾಲೂಕು ಅಭಿವೃದ್ಧಿ ಅಧಿಕಾರಿ ಲಕ್ಷ್ಮೀಕಾಂತ್, ಶಿರಾ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುಳಿಗೇನಹಳ್ಳಿ ನಾಗರಾಜ್, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಮಣಿಕಂಠ, ನಗರ ಅಧ್ಯಕ್ಷ ಅಂಜನ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹೇಮಂತ್ ಗೌಡ ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!