ಗಂಗೊಳ್ಳಿ: ಬಿಲ್ಲವರ ವೇದಿಕೆಯಿಂದ ಕಲಿಕಾ ಸಾಮಗ್ರಿ ವಿತರಣೆ

KannadaprabhaNewsNetwork |  
Published : Jun 17, 2024, 01:31 AM IST
ಬುಕ್16 | Kannada Prabha

ಸಾರಾಂಶ

ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಪುಸ್ತಕಗಳನ್ನು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಬೈಂದೂರು

ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಶ್ರದ್ಧೆಯಿಂದ ಪರಿಶ್ರಮವನ್ನು ಪಡಬೇಕು. ಆಗ ಯಶಸ್ಸು ತಾನಾಗಿಯೇ ಹುಡುಕಿಕೊಂಡು ಬರುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ. ಗೋಪಾಲ ಪೂಜಾರಿ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ಪುಸ್ತಕಗಳನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅದಕ್ಕಾಗಿಯೇ ವೇದಿಕೆಯ ಶಿಕ್ಷಣಕ್ಕೆ ಉತ್ತೇಜನ ನೀಡುವ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಹಾಗಾಗಿ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಒಟ್ಟು 140 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಲ್ಲವರ ಹಿತರಕ್ಷಣ ವೇದಿಕೆ ಉಪಾಧ್ಯಕ್ಷ ಜಿ.ಕೆ. ವೆಂಕಟೇಶ ಕೊಡೇರಿ ಮನೆ ಸ್ವಾಗತಿಸಿದರು. ಅನಂತ ಪೂಜಾರಿ ಕೊಡೇರಿ ಮನೆ ಕಾರ್ಯಕ್ರಮ ನಿರ್ವಹಿಸಿದರು, ಆಕಾಶ್ ಪೂಜಾರಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!