ಕನ್ನಡಪ್ರಭ ವಾರ್ತೆ ಕುಂದಾಪುರ
ಡಿ.22ರಂದು ಶಾಲೆಯ ಸಭಾಂಗಣದಲ್ಲಿ ಕ್ರಿಸ್ಮಸ್ ಆಚರಣೆ ಹಿನ್ನೆಲೆಯಲ್ಲಿ 7 ನಿಮಿಷಗಳ ಕಾಲ ನಡೆದ ನೃತ್ಯ ರೂಪಕವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ನೃತ್ಯ ರೂಪಕದಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂದು ಹಿಂದೂಪರ ಸಂಘಟನೆಗಳು ಆರೋಪಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, ಶಾಲಾ ಆಡಳಿತ ಮಂಡಳಿ ಕೂಡಲೇ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.* ಏನಿದು ನೃತ್ಯರೂಪಕ ?
ಪ್ರೌಢಶಾಲೆಯಲ್ಲಿ ಕ್ರಿಸ್ಮಸ್ ಹಿನ್ನೆಲೆ ನಡೆದ ನೃತ್ಯ ರೂಪಕ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ. ಈಗ ವಿರೋಧ ವ್ಯಕ್ತವಾದ ಮೇಲೆ, ವಿದ್ಯಾರ್ಥಿಗಳ ಮನೆಗೆ ಕರೆ ಮಾಡಿ ಬಿಳಿ ಶಾಲು ತರಲು ಹೇಳಿದ್ದೇವೆ ಎಂದು ಹೇಳುವಂತೆ ಒತ್ತಾಯಿಸುತ್ತಿದ್ದಾರೆ. ನಾವು ಕರೆ ಮಾಡಿದರೆ ಕರೆ ಸ್ವೀಕರಿಸುತ್ತಿಲ್ಲ. ಶಾಲಾಡಳಿತ ಮಂಡಳಿಯ ಈ ವರ್ತನೆ ಸಹಿಸಲ್ಲ. ಆಡಳಿತ ಮಂಡಳಿ ಕೂಡಲೇ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಕೈಗೆತ್ತಿಕೊಳ್ಳುತ್ತೇವೆ.