ಯಲ್ಲಾಪುರ: ಖಚಿತ ಮಾಹಿತಿಯ ಮೇರೆಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ವಶಕ್ಕೆ ಪಡೆದು ಆರೋಪಿಗಳಿಂದ 1.84 ಕೆಜಿ ಗಾಂಜಾವನ್ನು ಹಾಗೂ ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಹೊನ್ನಾವರ: ತಾಲೂಕಿನ ಹಡಿನಬಾಳ ಮಕ್ಕಿ ವಿಷ್ಣುಮೂರ್ತಿ ದೇವಸ್ಥಾನದ ಕ್ರಾಸ್ ಹತ್ತಿರ ಆಟೋ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.ಆಟೋ ಚಾಲಕ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಉಪ್ಪೋಣಿ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದಾಗ ಅಡ್ಡಬಂದ ಹಂದಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಆಟೋ ಪಲ್ಟಿಯಾಗಿದೆ.ಲಿಯಾಕತ್ ಖಾನ್ ಎಂಬವರು ತೀವ್ರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನವಾರ ಮೃತಪಟ್ಟಿದ್ದಾರೆ. ಅಲ್ಲದೇ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪಂಪ್‌ಸೆಟ್ ಬೋರ್ಡ್ ಕಳ್ಳತನ: ಪ್ರಕರಣ ದಾಖಲು
ಶಿರಸಿ: ತಾಲೂಕಿನ ಬನವಾಸಿ ಸಮೀಪದ ಕಡಗೋಡ ಗ್ರಾಮದಲ್ಲಿ ಅಳವಡಿಸಿದ್ದ ಪಂಪ್‌ಸೆಟ್ ಬೋರ್ಡ್ ಕಳ್ಳತನ ಮಾಡಿದ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಗೋಡ ಗ್ರಾಮದ ೧ ಎಕರೆ ಜಮೀನಿನಲ್ಲಿ ಜೋಳ ಮತ್ತು ಭತ್ತದ ಬೆಳೆಗೆ ನೀರು ಪೂರೈಕೆಗೆ ಬೋರ್‌ವೆಲ್ ಕೊರೆಯಿಸಿ, ಅಂದಾಜು ₹೧೦ ಸಾವಿರ ಸೂರಜ್ ಕಂಪನಿಯ ಪಂಪ್‌ಸೆಟ್ ಬೋರ್ಡ್ ಅಳವಡಿಸಲಾಗಿದೆ. ಇದನ್ನು ಯಾರೋ ಕಳ್ಳರು ಕಳ್ಳತನ ಮಾಡಿದ್ದಾರೆಂದು ಕಲಿಕ್ ಇಸ್ಮಾಯಿಲ್ ಸಾಬ್ ಕಲೆಗಾರ ಬನವಾಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.