8 ವರ್ಷದ ಬಳಿಕ ಸೆರೆ ಸಿಕ್ಕ ಗಾಂಜಾ ಸಾಗಾಟ ಆರೋಪಿ

KannadaprabhaNewsNetwork | Published : Oct 18, 2023 1:00 AM

ಸಾರಾಂಶ

ಈ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಕೂಡ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರಿಗೂ ಸಿಗದೇ ತಪ್ಪಿಸಿಕೊಂಡು ಓಡಾಡಿಕೊಂಡಿದ್ದ ಆರೋಪಿಯನ್ನು ಸದಾಶಿವಗಡದ ರಾಜಕೇನಿಭಾಗದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಾರವಾರ:

ಗಾಂಜಾ ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಕಳೆದ 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಇಲ್ಲಿನ ನಗರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತಾಲೂಕಿನ ಸದಾಶಿವಗಡ ನಿವಾಸಿ ಪ್ರಶಾಂತ ಸದಾಶಿವ ನಾಯರ್ ಬಂಧಿತನಾಗಿದ್ದು, ಈತನ ಮೇಲೆ ನಗರ ಠಾಣೆಯಲ್ಲಿ ಅಕ್ರಮ ಗಾಂಜಾ ಸಾಗಾಟ ಪ್ರಕರಣ 2013ರಲ್ಲಿ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನದ ವಾರೆಂಟ್‌ ಕೂಡ ಜಾರಿಯಾಗಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಪೊಲೀಸರಿಗೂ ಸಿಗದೇ ತಪ್ಪಿಸಿಕೊಂಡು ಓಡಾಡಿಕೊಂಡಿದ್ದ ಆರೋಪಿಯನ್ನು ಸದಾಶಿವಗಡದ ರಾಜಕೇನಿಭಾಗದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಗರ ಠಾಣೆ ಪೊಲೀಸ್ ನಿರೀಕ್ಷಕ ರಮೇಶ ಹೂಗಾರ ಮಾರ್ಗದರ್ಶನದಲ್ಲಿ ಪಿಎಸ್ಐ ವಿಶ್ವನಾಥ ನಿಂಗೊಳ್ಳಿ ನೇತೃತ್ವದ ತಂಡದಲ್ಲಿ ಸಿಬ್ಬಂದಿ ಸೂರಜ್ ಕೊಠಾರಕರ್, ರಾಜೇಶ ನಾಯಕ, ಗಿರೀಶಯ್ಯ, ವಿಕಾಸ್ ನಾಂದ್ರೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share this article