- 20ರಂದು ರಂಭಾಪುರಿ ಶ್ರೀಗಳಿಂದ ಇಷ್ಟಲಿಂಗ ಪೂಜೆ, ಶಿವದೀಕ್ಷೆ, ಸಾಮೂಹಿಕ ವಿವಾಹ
- ಜಗದ್ಗುರು ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧರ್ಮಸಭೆ
- 21ರಂದು ಬೆಳಗ್ಗೆ ಮಹಾರಾಜ ಪೇಟೆಯಿಂದ ಗುಗ್ಗಳ, ಕೆಂಡದಾರ್ಚನೆ, ಅನ್ನ ಸಂತರ್ಪಣೆ- 22ರ ಬೆಳಗ್ಗೆ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಮೃತ್ಯುಂಜಯ, ರುದ್ರಹೋಮ
ನಗರದ ಶಾಮನೂರು ರಸ್ತೆಯ ಶ್ರೀ ಮಹಾಗಣಪತಿ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮಿಯ 25ನೇ ವರ್ಷದ ರಜತ ಮಹೋತ್ಸವ ಹಾಗೂ ಗುಗ್ಗಳದ ಕಾರ್ಯಕ್ರಮವನ್ನು ಏ.20 ರಿಂದ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ ಎಂದು ತಾವರಕೆರೆ ಶಿಲಾಮಠದ ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ನುಡಿದರು.
ಏ.20ರಂದು ಬೆಳಗ್ಗೆ 7 ಗಂಟೆಗೆ ಇಲ್ಲಿನ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಸದ್ಯೋಜಾತ ಹಿರೇಮಠದಿಂದ ಕುಂಬಾಭಿಷೇಕ ಮೆರವಣಿಗೆ ನಂತರ ಬಾಳೆಹೊನ್ನೂರು ಮಠದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿಗಳಿಂದ ಇಷ್ಟಲಿಂಗ ಪೂಜೆ, ಜಂಗಮ ವಟುಗಳಿಗೆ ಶಿವದೀಕ್ಷೆ, ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿವೆ. 11 ಗಂಟೆಗೆ ರಂಭಾಪುರಿ ಪೀಠದ ಜಗದ್ಗುರು ಡಾ.ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಧರ್ಮಸಭೆ ನಡೆಯಲಿದೆ. ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಕಾರ್ಯಕ್ರಮ ಜರುಗಲಿದೆ. ಬಿಳಿಕೆ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸಿದ್ಧಲಿಂಗ ಸ್ವಾಮೀಜಿ, ಶ್ರೀ ಅಭಿನವ ಶಿವಲಿಂಗೇಶ್ವರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು ಎಂದರು.
ಏ.21ರಂದು ಬೆಳಗ್ಗೆ 7.30ಕ್ಕೆ ಮಹಾರಾಜ ಪೇಟೆಯಿಂದ ಗುಗ್ಗಳ, ಕೆಂಡದಾರ್ಚನೆ, ಅನ್ನ ಸಂತರ್ಪಣೆ ನಡೆಯಲಿದೆ. ಏ.22ರ ಬೆಳಗ್ಗೆ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ಮೃತ್ಯುಂಜಯ, ರುದ್ರಹೋಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
- - -
ದಾವಣಗೆರೆಯಲ್ಲಿ ಗಣಪತಿ, ವೀರಭದ್ರೇಶ್ವರ ಸ್ವಾಮಿ ರಜತ ಮಹೋತ್ಸವ, ಗುಗ್ಗುಳ ಕಾರ್ಯಕ್ರಮ ಆಯೋಜಿಸಿರುವ ಕುರಿತು ಡಾ.ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.