ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಈ ರಸ್ತೆಯ ಮೂಲಕ ಸರ್ಕಾರಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜು ಮತ್ತು ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಹೆದ್ದಾರಿಯ ಎರಡೂ ಬದಿಯಲ್ಲಿ ಸಾರ್ವಜನಿಕರು, ರಸ್ತೆಯ ಬದಿಯಲ್ಲಿ ಕಸವನ್ನು ಸುರಿಯಬಾರದೆಂದು ನಾಮ ಪಲಕ ಅಳವಡಿಸಿದ್ದರೂ ಪಟ್ಟಣದಿಂದ ದಿನನಿತ್ಯ ವಾಹನದ ಮೂಲಕ ತೆರಳಿ ಕಸ ಎಸೆದು ಹೋಗುತ್ತಿದ್ದಾರೆ.
ಇದು ಮುಂದುವರಿದಲ್ಲಿ ಪಂಚಾಯಿತಿ ವತಿಯಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರಿಗೆ ಮನವಿ ಮಾಡಲಾಗುವುದು ಎಂದು ಪಂಚಾಯಿತಿ ಉಪಾಧ್ಯಕ್ಷ ನತೀಶ್ ಮಂದಣ್ಣ ತಿಳಿಸಿದ್ದಾರೆ.ಮುಂದಿನ ದಿನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದರೊಂದಿಗೆ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಮುಂದಾಗಲಾಗುವುದು ಎಂದು ಎಚ್ಚರಿಸಿದ್ದಾರೆ.