ಕಸದ ರಾಶಿಗೆ ಬೆಂಕಿ: ಸುಟ್ಟುಹೋದ ಟ್ರಾನ್ಸ್‌ಫಾರ್ಮರ್‌

KannadaprabhaNewsNetwork |  
Published : Mar 28, 2024, 12:50 AM IST
ಪೋಟೊ೨೭ಸಿಪಿಟಿ೧: ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಸಿಬ್ಬಂದಿಗಳು. | Kannada Prabha

ಸಾರಾಂಶ

ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ.

ಚನ್ನಪಟ್ಟಣ: ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ ಪರಿಣಾಮ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗೆಲ್ಲಾ ಹರಡಿ ಟ್ರಾನ್ಸ್‌ಫಾರ್ಮರ್ ಸುಟ್ಟುಹೋಗಿರುವ ಘಟನೆ ಪಟ್ಟಣದ ಕೋಟೆಯ 11ನೇ ವಾರ್ಡ್‌ನಲ್ಲಿ ಸಂಭವಿಸಿದೆ. ಮಂಗಳವಾರ ರಾತ್ರಿ ದುರ್ಘಟನೆ ಸಂಭವಿಸಿದೆ. ರಸ್ತೆಯ ಬದಿಯ ಖಾಲಿ ಜಾಗದಲ್ಲಿ ಹಾಕಿದ್ದ ಕಸದ ರಾಶಿಗೆ ಯಾರೋ ಕಿಡಿಗೇಡಿಗಳು ಬೆಂಕಿ ಹೊತ್ತಿಸಿದ್ದು, ಅದು ಸುತ್ತಮುತ್ತ ವ್ಯಾಪಿಸಿದೆ. ಇದನ್ನು ಕಂಡ ಸ್ಥಳೀಯರು ಅಗ್ನಶಾಮಕದಳಕ್ಕೆ ಕರೆಮಾಡಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂ ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಘಟನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲವಾದರೂ ಸ್ಥಳದಲ್ಲಿದ್ದ ಟ್ರಾನ್ಸ್‌ಫಾರ್ಮರ್ ಸುಟ್ಟುಹೋದ ಕಾರಣ ನಗರದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕೆಲಕಾಲ ವ್ಯತ್ಯಯವಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎರಡು ಪೋಲಿಯೊ ಹನಿ ಮಕ್ಕಳಿಗೆ ಜೀವಾಮೃತ: ಶಾಸಕ ಪ್ರಸಾದ್ ಅಬ್ಬಯ್ಯ
₹22267 ಕೋಟಿ ವೆಚ್ಚದಲ್ಲಿ 16.75 ಕಿ.ಮೀ ಸುರಂಗ ರಸ್ತೆ ನಿರ್ಮಿಸಲು ಅದಾನಿ ಗ್ರೂಪ್ ಬಿಡ್‌ ಸಲ್ಲಿಕೆ