ಚಿತ್ರದುರ್ಗ: ವಿಧಾನ ಪರಿಷತ್‍ನಲ್ಲಿನ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಚಲವಾದಿ ನಾರಾಯಣಸ್ವಾಮಿಯವರಿಗೆ ಅಭಿನಂದನೆ ಸಲ್ಲಿಸುವ ಪ್ರಯುಕ್ತ ಬಿಜೆಪಿ ಜಿಲ್ಲಾಧ್ಯಕ್ಷ ಎ ಮುರಳಿ ನೇತೃತ್ವದಲ್ಲಿ ಚಿತ್ರದುರ್ಗದ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರಾಧ್ಯಕ್ಷ ನವೀನ್ ಚಾಲುಕ್ಯ, ಜಿಲ್ಲಾ ಎಸ್ ಸಿ,ಮೋರ್ಚದ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಬಿಜೆಪಿ ಜಿಲ್ಲಾ ವಕ್ತಾರ ಬೇಂದ್ರೆ ನಾಗರಾಜ್, ದಗ್ಗೆ ಶಿವಪ್ರಕಾಶ್, ಚಲುವಾದಿ ತಿಪ್ಪೇಸ್ವಾಮಿ, ಅರುಣ್, ಕವಿತಾ, ಭಾರತಿ, ಬಸಮ್ಮ, ನಗರಸಭಾ ಸದಸ್ಯರಾದ ಹರೀಶ್, ಶಂಭು, ಕಿರಣ್, ಪ್ರಭು ಸಿಂಧುತನಯ ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಸಿಹಿ ವಿತರಿಸಲಾಯಿತು.
ಫೋಟೋ: 25ಸಿಟಿಡಿ6