ಬೇಲೂರಿನಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ

KannadaprabhaNewsNetwork |  
Published : Jun 04, 2026, 01:30 AM IST
3ಎಚ್ಎಸ್ಎನ್18 : ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು  ಕೆಂಪೇಗೌಡ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ ಆಚರಿಸಲಾಯಿತು. | Kannada Prabha

ಸಾರಾಂಶ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಕೆಂಪೇಗೌಡ ಪ್ರತಿಮೆಗೆ ಹೂವಿನ ಹಾರ ಹಾಕಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸವಾಗಲಿ ಎಂದು ಅವರು ತಿಳಿಸಿದರು.

ಬೇಲೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಕೆಂಪೇಗೌಡ ಪ್ರತಿಮೆಗೆ ಹೂವಿನ ಹಾರ ಹಾಕಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ಹಾಗೂ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಯು.ಟಿ. ಕೇಶವಮೂರ್ತಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಕಜರ್ಗೆ ಅವರು ಪಕ್ಷದ ಎಲ್ಲ ನಾಯಕರನ್ನು ಒಗ್ಗೂಡಿಸಿ ಮುನ್ನಡೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ರಾಜ್ಯದಲ್ಲಿ ಜನಪರ ಆಡಳಿತ ನೀಡುವ ಉದ್ದೇಶದಿಂದ ಪಕ್ಷದ ನಾಯಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತಿದ್ದು, ಜನರ ನಿರೀಕ್ಷೆಗಳಿಗೆ ತಕ್ಕಂತೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು. ರೈತರು, ಕಾರ್ಮಿಕರು, ಮಹಿಳೆಯರು ಹಾಗೂ ಯುವಜನರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸವಾಗಲಿ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ಮುಖಂಡ ಧನಪಾಲ್ ಮಾತನಾಡಿ ಕಾಂಗ್ರೆಸ್ ಪಕ್ಷವು ಸಾಮಾನ್ಯ ಕಾರ್ಯಕರ್ತರ ಶ್ರಮ ಮತ್ತು ನಿಷ್ಠೆಯ ಮೇಲೆ ಬೆಳೆದಿರುವ ಪಕ್ಷವಾಗಿದೆ. ತಳಮಟ್ಟದ ಕಾರ್ಯಕರ್ತರಿಂದ ಹಿಡಿದು ಮುಖ್ಯಮಂತ್ರಿ ಸ್ಥಾನದವರೆಗೂ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ಪರಂಪರೆಯನ್ನು ಕಾಂಗ್ರೆಸ್ ಹೊಂದಿದೆ. ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕು ಎಂದು ಆಶಿಸಿದರು.

ಈ ವೇಳೆ ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ಬಲರಾಮೇಗೌಡ, ಕಾಂಗ್ರೆಸ್ ಪಕ್ಷದ ಮುಖಂಡರಾದ ಶಿವಕುಮಾರ್, ಕೋಳಿ ಚಂದ್ರು, ಕಾಚೀಹಳ್ಳಿ ಪ್ರದೀಪ್ ಹಾಜರಿದ್ದರುಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗು ಕಾಂಗ್ರೆಸ್ ಪಕ್ಷದ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನರಾಯಪಟ್ಟಣದಲ್ಲಿ ನಾಳೆಯಿಂದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾವಳಿ
ಎಚ್‌ಡಿಸಿಸಿ ಬ್ಯಾಂಕಿನಲ್ಲಿ ಯಾವ ನೇಮಕಾತಿಯೂ ನಡೆಯುತ್ತಿಲ್ಲ