ಗ್ಯಾರಂಟಿ ಯೋಜನೆಯ ಸಮಸ್ಯೆ ಗಂಭೀರವಾಗಿ ಬಗೆಹರಿಸಿ: ಕೊಡವೂರು

KannadaprabhaNewsNetwork |  
Published : Oct 30, 2026, 03:00 AM IST
27ಗ್ಯಾರಂಟಿ | Kannada Prabha

ಸಾರಾಂಶ

ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಬೇಕು. ಅನುಷ್ಠಾನದಲ್ಲಿ ಸಮಸ್ಯೆಗಳಾದರೇ ಅದನ್ನು ಗಂಭೀರವಾಗಿ ಪರಿಗಣಿಸಬೇಕು, ಈ ಯೋಜನೆಗಳಿಂದ ಅರ್ಹರು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಉಡುಪಿ: ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಯಥಾವತ್ತಾಗಿ ಅನುಷ್ಠಾನ ಮಾಡಬೇಕು. ಅನುಷ್ಠಾನದಲ್ಲಿ ಸಮಸ್ಯೆಗಳಾದರೇ ಅದನ್ನು ಗಂಭೀರವಾಗಿ ಪರಿಗಣಿಸಬೇಕು, ಈ ಯೋಜನೆಗಳಿಂದ ಅರ್ಹರು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಬೈಂದೂರುನಲ್ಲಿ ಕೆಲವು ಬಸ್‌ಗಳು ನಿಲ್ದಾಣವನ್ನು ಪ್ರವೇಶಿಸದೇ ಹೆದ್ದಾರಿಯಲ್ಲಿಯೇ ಪ್ರಯಾಣಿಕರನ್ನು ಇಳಿಸುತಿದ್ದಾರೆ, ಇದರಿಂದ ನಿಲ್ದಾಣಗಳಲ್ಲಿ ಕಾಯುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಎಲ್ಲಾ ಬಸ್‌ಗಳು ನಿಲ್ದಾಣಕ್ಕೆ ಹೋಗಲೇಬೇಕು ಎಂದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 3,32,021 ಫಲಾನುಭವಿಗಳಿದ್ದು, 10,667 ಕುಟುಂಬಗಳು ಸರ್ವೇ ಕಾರ್ಯ ಬಾಕಿ ಇದೆ, ಇದನ್ನು ಅ. 31 ರೊಳಗಾಗಿ ಪೂರ್ಣಗೊಳಿಸಬೇಕು ಎಂದರು.ಜಿಲ್ಲೆಯಲ್ಲಿ ನ. 24 ರಂದು ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶವನ್ನು ಆಯೋಜಿಸಲು ತೀರ್ಮಾನಿಸಿದ್ದು, ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾರಂಟಿ ಫಲಾನುಭವಿಗಳು ಭಾಗವಹಿಸುವಂತೆ ಮಾಡಬೇಕು ಸಮಿತಿಯ ಸದಸ್ಯರಿಗೆ ತಿಳಿಸಿದರು.

ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಸತೀಶ್ ಹಾಗೂ ಸಂತೋಷ್ ಕುಲಾಲ್, ತಾಲೂಕು ಸಮಿತಿಗಳ ಅಧ್ಯಕ್ಷರಾದ ಡಾ.ಸುನೀತಾ ಶೆಟ್ಟಿ, ನವೀನ್ ಚಂದ್ರ ಅಡ್ವೆ, ಮೋಹನ್ ಪೂಜಾರಿ, ಅಜಿತ್ ಹೆಗ್ಡೆ ಹಾಗೂ ಶಂಕರ ಶೇರಿಗಾರ್, ಜಿಪಂ ಮುಖ್ಯ ಯೋಜನಾಧಿಕಾರಿ ಡಾ. ಉದಯಕುಮಾರ್ ಶೆಟ್ಟಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸೆಪ್ಟಂಬರ್‌ವರೆಗೆ 4.74 ಮಹಿಳಾ ಪ್ರಯಾಣಿಕರ 194.32 ಕೋಟಿ ರು. ಪ್ರಯಾಣ ವೆಚ್ಚವನ್ನು ಭರಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ 2,13,236 ಮಹಿಳೆಯರಿಗೆ ಪ್ರತೀ ಮಾಹೆ 2 ಸಾವಿರ ರು.ಗಳಂತೆ 1451.36 ಕೋಟಿ ರು. ಪಾವತಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,32,021 ಕುಟುಂಬಗಳು ಉಚಿತ ವಿದ್ಯುತ್ ಬಿಲ್ 788.02 ಕೋಟಿ ರು.ಗಳನ್ನು ಭರಿಸಲಾಗಿದೆ. ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಯಡಿ 8,24,049 ಫಲಾನುಭವಿಗಳಿಗೆ ತಲಾ 5 ಕೆ.ಜಿ ಆಹಾರ ಧಾನ್ಯದ ಬದಲಾಗಿ 427.36 ಕೋಟಿ ರೂ. ಪಾವತಿಸಲಾಗಿದೆ ಹಾಗೂ ಯುವನಿಧಿ ಯೋಜನೆಯಡಿ 5401 ಅಭ್ಯರ್ಥಿಗಳಲ್ಲಿ 5016 ಫಲಾನುಭವಿಗಳಿಗೆ 13.67 ಕೋಟಿ ರು. ನೇರ ನಗದನ್ನು ವರ್ಗಾಯಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು