ಹೊನ್ನಾಳಿ: ಪಟ್ಟಣದ ಶ್ರೀ ಹಳದಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಹಿಂದೂ ಮಹಾಸಭಾ ಗೌರಿ- ಗಣೇಶ ಸೇವಾ ಸಮಿತಿ ವತಿಯಿಂದ ಗಣೇಶ ಚರ್ತುರ್ಥಿಯಂದು ಪ್ರತಿಷ್ಠಾಪಿಸಲಾಗಿದ್ದ ಗೌರಿ- ಗಣೇಶ ಮೂರ್ತಿಗಳನ್ನು ಭಾನುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಕಲಾ ಮೇಳಗಳೊಂದಿಗೆ ಅದ್ಧೂರಿ ಹಾಗೂ ಶಾಂತಿಯುತವಾಗಿ ಮೆರವಣಿಗೆ ನಡೆಸಿ, ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
ಮೆರವಣಿಗೆ ವೇಳೆ ಭಕ್ತರು ಹಣ್ಣು, ಕಾಯಿ, ಹೂವುಗಳನ್ನು ನೀಡಿ ಗೌರಿ-ಗಣೇಶನಿಗೆ ಪೂಜೆ ಸಲ್ಲಿಸಿದರು. ಪೊಲೀಸ್ ಇನ್‌ಸ್ಪೆಕ್ಟರ್ ಸುನೀಲ್ ಕುಮಾರ್ ಹಾಗೂ ನ್ಯಾಮತಿ ಸಿಪಿಐ ರವಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಭಾನುವಾರ ಮೆರವಣಿಗೆ ಬಳಿಕ ರಾತ್ರಿ 9.30ರ ಸುಮಾರಿಗೆ ಶಾಸ್ತ್ರೋಕ್ತವಾಗಿ ಗೌರಿ-ಗಣೇಶ ಮೂರ್ತಿಗಳಿಗೆ ಪೂಜೆ ಸಲ್ಲಿಸಿ, ತುಂಗಭದ್ರಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು.
- - --15ಎಚ್.ಎಲ್.ಐ2: