ಸಿರಿಧಾನ್ಯಗಳಿಂದ ಆರೋಗ್ಯ ಸದೃಢ: ರುದ್ರೇಶಪ್ಪ
ಸಿರಿಧಾನ್ಯ ಕುರಿತು ಜಾಗೃತಿ ಮೂಡಿಸುವುದಕ್ಕಾಗಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ಜಾಗೃತಿ ನಡಿಗೆಗೆ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಹಾಗೂ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆಯ ಚಾಲನೆ ನೀಡಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಮಾತನಾಡಿ, ಸಿರಿಧಾನ್ಯದಿಂದ ಆರೋಗ್ಯ ಸದೃಢ್ಯವಾಗುತ್ತದೆ. ಈ ದಿಸೆಯಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಾಗಿದೆ ಎಂದರು. ಸಿರಿಧಾನ್ಯ ಬೆಳೆದ ರೈತರಿಗೆ ರೈತ ಸಿರಿ ಯೋಜನೆ ಮೂಲಕ ರೈತರಿಗೆ ₹೧೦ ಸಾವಿರ ನಗದನ್ನು ರೈತರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಜಮೆ ಮಾಡಲಾಗುತ್ತದೆ. ಜೊತೆಗೆ ಸಿರಿಧಾನ್ಯ ಕ್ಷೇತ್ರವನ್ನು ಹೆಚ್ಚು ಮಾಡಬೇಕು ಎಂದು ಮನವಿ ಮಾಡಿದರು.ಈಶ್ವರಿಯ ವಿಶ್ವವಿದ್ಯಾಲಯದ ಬಿ.ಕೆ. ಯೋಗಿನಿ ಮಾತನಾಡಿ, ನಮ್ಮ ಆಹಾರ ಪದ್ದತಿಯಲ್ಲಿ ಸಿರಿಧಾನ್ಯಕ್ಕೆ ಹೆಚ್ಚಿನ ಪ್ರಾಮುಖ್ಯತೆಯಿದೆ. ಆಹಾರ ಪದ್ದತಿಯಲ್ಲಿ ಅವುಗಳನ್ನು ಹೆಚ್ಚು ಬಳಕೆ ಮಾಡುವುದರಿಂದ ಆರೋಗ್ಯ ಸದೃಢವಾಗಲಿದೆ. ಆರೋಗ್ಯ ಕಾಪಾಡಿಕೊಳ್ಳುವ ಜೊತೆಗೆ ಆಧ್ಯಾತ್ಮ ಮಾಡುವುದರಿಂದ ನಮ್ಮ ಮನಸ್ಸಿನ ಏಕಾಗ್ರತೆಯೂ ಸದೃಢವಾಗಲಿದೆ ಎಂದರು.