ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಜನ್ಮ ದಿನವನ್ನು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಸಮ್ಮುಖ ಕೇಕ್ ಕತ್ತರಿಸಿ, ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಆಚರಿಸಿಕೊಂಡರು.
- ಗೋ ಪೂಜೆ ಸಲ್ಲಿಸಿದ ಗಾಯಿತ್ರಿ ಸಿದ್ದೇಶ್ವರ್
- - - ಕನ್ನಡಪ್ರಭ ವಾರ್ತೆ, ದಾವಣಗೆರೆ
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಜನ್ಮ ದಿನವನ್ನು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಸಮ್ಮುಖ ಕೇಕ್ ಕತ್ತರಿಸಿ, ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಆಚರಿಸಿಕೊಂಡರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಈ ಸಂದರ್ಭ ಮಾತನಾಡಿ, ಸಹೋದರಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ದೇವರು ಆರೋಗ್ಯ, ಆಯುಷ್ಯ ನೀಡಲಿ ಎಂದು ಶುಭ ಹಾರೈಸಿದರು. ಚುನಾವಣೆಯಲ್ಲಿ ಗೆಲುವು ಸಾಧಿಸುವಂತೆ ಆಶೀರ್ವದಿಸಿದರು.
ಗಾಯತ್ರಿ ಸಿದ್ದೇಶ್ವರ್ ಆವರಗೆರೆ ಬಳಿಯ ಗೋ ಶಾಲೆಗೆ ಭೇಟಿ ನೀಡಿ, ಗೋ ಮಾತೆಗೆ ಮೇವು ತಿನ್ನಿಸಿ, ಪೂಜೆ ಸಲ್ಲಿಸಿದರು. ಅನಂತರ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಾಶ್ರಮಕ್ಕೆ ಭೇಟಿ ನೀಡಿದರು. ಗವಾಯಿಗಳ ಗದ್ದುಗೆ ಪೂಜೆ ಸಲ್ಲಿಸಿ, ಅಂಧ ಮಕ್ಕಳಿಗೆ ಸಿಹಿ ವಿತರಿಸಿದರು. ಆವರಗೆರೆಯ ಜೈನ್ ದೇವಾಲಯಕ್ಕೂ ಭೇಟಿ ನೀಡಿ, ಪೂಜೆ ಸಲ್ಲಿಸಿದರು.
ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ದೂಡಾ ಮಾಜಿ ಅಧ್ಯಕ್ಷ ಯಶವಂತ ರಾವ್ ಜಾಧವ್, ಮುಖಂಡ ಜಿ.ಎಸ್. ಅನಿತ್ ಕುಮಾರ್, ಪುತ್ರಿ ಜಿ.ಎಸ್. ಅಶ್ವಿನಿ, ಗ್ಯಾರಳಿ ಶಿವು, ಗೌತಮ್ ಜೈನ್ ಇದ್ದರು.
- - - -16ಕೆಡಿವಿಜಿ41ಃ:
ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರು ಜನ್ಮ ದಿನವನ್ನು ನಗರದ ಜಿಎಂಐಟಿ ಅತಿಥಿ ಗೃಹದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಜಿ.ಎಂ. ಸಿದ್ದೇಶ್ವರ್ ಸಮ್ಮುಖ ಕೇಕ್ ಕತ್ತರಿಸಿ, ಎಲ್ಲರಿಗೂ ಸಿಹಿ ತಿನ್ನಿಸುವ ಮೂಲಕ ಆಚರಿಸಿಕೊಂಡರು. ಸಂಸದ ಡಾ. ಜಿ.ಎಂ. ಸಿದ್ದೇಶ್ವರ್ ಇತರರು ಮುಖಂಡರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.