ನರೇಂದ್ರ ಮೋದಿ ಪ್ರಧಾನಿಯಾಗಲು ಗಾಯತ್ರಿ ಸಿದ್ದೇಶ್ವರ್‌ ಗೆಲ್ಲಬೇಕು

KannadaprabhaNewsNetwork |  
Published : Apr 17, 2024, 01:23 AM IST
ಹೊನ್ನಾಳಿ ಫೋಟೋ 16ಎಚ್.ಎಲ್.ಐ1. ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಪರವಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತಯಾಚಿಸಿದರು. | Kannada Prabha

ಸಾರಾಂಶ

ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಿ, ವಿಶ್ವಗುರುವನ್ನಾಗಿಸಲು ಪಣತೊಟ್ಟಿರುವ ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು. ಇದರಿಂದ ವಿಕಸಿತ ಭಾರತದ ಕನಸನ್ನು ನಾವು ನನಸಾಗಿ ನೋಡಬಹುದು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಮನವಿ ಮಾಡಿದ್ದಾರೆ.

- ತಿಮ್ಮೇನಹಳ್ಳಿಯಲ್ಲಿ ಮತಯಾಚಿಸಿ ರೇಣುಕಾಚಾರ್ಯ ಹೇಳಿಕೆ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ಭಾರತವನ್ನು ಆರ್ಥಿಕವಾಗಿ ಸದೃಢಗೊಳಿಸಿ, ವಿಶ್ವಗುರುವನ್ನಾಗಿಸಲು ಪಣತೊಟ್ಟಿರುವ ವಿಶ್ವಮೆಚ್ಚಿದ ನಾಯಕ ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಿಯಾಗಬೇಕು. ಇದರಿಂದ ವಿಕಸಿತ ಭಾರತದ ಕನಸನ್ನು ನಾವು ನನಸಾಗಿ ನೋಡಬಹುದು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದರು.

ತಾಲೂಕಿನ ತಿಮ್ಮೇನಹಳ್ಳಿ ಗ್ರಾಮದಲ್ಲಿ ಲೋಕಸಭಾ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ಮತ ಯಾಚಿಸಿ ಅವರು ಮಾತನಾಡಿದರು.

2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರ ವಹಿಸಿಕೊಂಡ ಬಳಿಕ ಇಡೀ ವಿಶ್ವ ಭಾರತ ನೋಡುವ ದೃಷ್ಟಿಯೇ ಬದಲಾಯಿತು. ಎರಡನೇ ಬಾರಿ ಮತ್ತೆ ಆಯ್ಕೆಯಾದಾಗ ಇಡೀ ವಿಶ್ವವೇ ಸಮಸ್ಯೆಗಳ ಪರಿಹಾರಕ್ಕೆ ಮೋದಿ ಅವರ ಬಳಿ ಬರುತ್ತಿದ್ದುದ್ದು ಭಾರತದ ಹೆಗ್ಗಳಿಕೆ. ಭಾರತ ಎಂದಾಕ್ಷಣ ಈಗ ಇಡೀ ವಿಶ್ವ ನಮ್ಮ ರಾಷ್ಟ್ರಕ್ಕೆ ಗೌರವ ನೀಡುತ್ತದೆ ಎಂದರು.

ಕಾಂಗ್ರೆಸ್ ಅಧಿಕಾರ ಅವಧಿಯಲ್ಲಿ ಅಭಿವೃದ್ಧಿ ಮರೀಚಿಕೆಯಾಗಿತ್ತು. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಕ್ಷಣ ವಿದೇಶಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದರು. ಇಂದು ಭಾರತ ಆರ್ಥಿಕವಾಗಿ 5ನೇ ಸ್ಥಾನದಲ್ಲಿದೆ. 3ನೇ ಸ್ಥಾನಕ್ಕೂ ಬರಲಿದೆ ಎಂದರು.

ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಜಿ.ಪಂ. ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ, ಮಾರುತಿ ನಾಯ್ಕ್, ಚನ್ನೇಶಯ್ಯ, ಜಗದೀಶ್ ಯಕ್ಕನಹಳ್ಳಿ, ನಾಗರಾಜ್ ಹಾಗೂ ಇತರರು ಇದ್ದರು.

- - - -16ಎಚ್ಎಲ್ಐ1:

ಹೊನ್ನಾಳಿ ತಾಲೂಕಿನ ತಿಮ್ಮೇನಹಳ್ಳಿಯಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಪರವಾಗಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತಯಾಚಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ