ಗಾಯತ್ರಿ ಸಿದ್ದೇಶ್ವರರ ಸದಸ್ಯತ್ವ ಅಭಿಯಾನ ಕೇವಲ ಪ್ರಚಾರದ ಗೀಳು

KannadaprabhaNewsNetwork | Published : Nov 1, 2024 12:02 AM

ಸಾರಾಂಶ

ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನಲ್ಲಿ ಮಂಡಲದ ಅಧ್ಯಕ್ಷರ ಗಮನಕ್ಕೆ ತಾರದೇ ಗಾಯತ್ರಿ ಸಿದ್ದೇಶ್ವರ ಅವರು ಕೆಲವರೊಂದಿಗೆ ಸೇರಿ ತಾನೂ ಕೂಡ ತಾಲೂಕಿನ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸುತ್ತಿರುವುದಾಗಿ ರಾಜ್ಯ ನಾಯಕರಿಗೆ ತೋರಿಸಿಕೊಡುವ ನಾಟಕವಾಡುತ್ತಿದ್ದಾರೆ ಎಂದು ಹೊನ್ನಾಳಿ ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನಲ್ಲಿ ಮಂಡಲದ ಅಧ್ಯಕ್ಷರ ಗಮನಕ್ಕೆ ತಾರದೇ ಗಾಯತ್ರಿ ಸಿದ್ದೇಶ್ವರ ಅವರು ಕೆಲವರೊಂದಿಗೆ ಸೇರಿ ತಾನೂ ಕೂಡ ತಾಲೂಕಿನ ಸದಸ್ಯತ್ವ ಅಭಿಯಾನದಲ್ಲಿ ಭಾಗವಹಿಸುತ್ತಿರುವುದಾಗಿ ರಾಜ್ಯ ನಾಯಕರಿಗೆ ತೋರಿಸಿಕೊಡುವ ನಾಟಕವಾಡುತ್ತಿದ್ದಾರೆ ಎಂದು ಹೊನ್ನಾಳಿ ಮಂಡಲ ಅಧ್ಯಕ್ಷ ಜೆ.ಕೆ. ಸುರೇಶ್ ಹೇಳಿದರು.

ಅವರು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ಮುಂದಾಳತ್ವದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಶ್ರಮವಹಿಸಿ ಬಿಜೆಪಿ ಸದಸ್ಯತ್ವ ಅಭಿಯಾನ ಕೈಗೊಂಡಿದ್ದರಿಂದ ಇಂದು ಹೊನ್ನಾಳಿ ತಾಲೂಕು ಅಭಿಯಾನದಲ್ಲಿ ದಾವಣಗೆರೆ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಿದರು.

ಆದರೆ ಕೊನೆ ಹಂತದಲ್ಲಿ ಸೋಮವಾರ ಹೊನ್ನಾಳಿ ಮಂಡಲಕ್ಕೆ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಧರ್ಮಪತ್ನಿ ಗಾಯತ್ರಿ ಸಿದ್ದೇಶ್ವರ ಅವರು ತಾಲೂಕಿನ ಕೆಲ ಹಳ್ಳಿಗಳಿಗೆ ಭೇಟಿ ನೀಡಿ ಸದಸ್ಯತ್ವ ನೋಂದಣೆ ಅಭಿಯಾನ ನಡಸುತ್ತಿರುವ ಮೂಲಕ ಪ್ರಚಾರಗಿಟ್ಟಿಸುವ ಕೆಲಸ ಮಾಡುತ್ತಿರುವುದು ಸಮಂಜಸವಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಬಿಜೆಪಿ ಸದಸ್ಯತ್ವ ಅಭಿಯಾನದ ವಿಚಾರದಲ್ಲಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಹರಿಹರ ತಾಲೂಕಿನ ಉಸ್ತುವಾರಿ ನೀಡಲಾಗಿದೆ. ತಮಗೆ ಉಸ್ತುವಾರಿ ನೀಡಲಾಗಿರುವ ಹರಿಹರ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗದೇ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರ ಉಸ್ತುವಾರಿಯ ಹೊನ್ನಾಳಿ ತಾಲೂಕಿನಲ್ಲಿ ಸದಸ್ಯತ್ವ ನೋಂದಣಿ ಕಾರ್ಯ ಮಾಡುತ್ತಿರುವುದು ಕೇವಲ ಪ್ರಚಾರಕ್ಕಾಗಿ ಮಾತ್ರ ಎಂದು ದೂರಿದರು.

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಸೆ.2 ರಿಂದ ಸದಸ್ಯ ನೋಂದಣೆ ಕಾರ್ಯವನ್ನು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ನಿರಂತರವಾಗಿ ಹಾಗೂ ಯಶಸ್ವಿಯಾಗಿ ನಡೆಯುತ್ತಿದ್ದು, ಪ್ರತಿ ಹಳ್ಳಿಗೆ ಭೇಟಿ ನೀಡಿ ಸದಸ್ಯತ್ವ ನೋಂದಣೆಯನ್ನು ಮಾಡುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿರುವಂತೆ ರೇಣುಕಾಚಾರ್ಯ ಶ್ರಮವಹಿಸಿದ್ದಾರೆ ಎಂದು ಹೇಳಿದರು.

ಸದಸ್ಯತ್ವ ಅರಂಭದಲ್ಲಿ ರೇಣುಕಾಚಾರ್ಯ ನೇತೃತ್ವದಲ್ಲಿ ಮಂಡಲ ಸಭೆ ನಡೆಸಲಾಯಿತು. ನಂತರ ಎರಡನೇ ಹಂತದಲ್ಲಿ ಜಿ.ಪಂ. ಹಂತದಲ್ಲಿ, ಮೂರನೇ ಹಂತದಲ್ಲಿ ಬೂತ್ ಮಟ್ಟದಲ್ಲಿ ಸಭೆ ನಡೆಸಿ ಸದಸ್ಯತ್ವ ನೋಂದಣೆ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಕುಬೇಂದ್ರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರಕೆರೆ ನಾಗರಾಜ್, ತಾಲೂಕು ಪ್ರಧಾನ ಕಾರ್ಯದರ್ಶಿ ಸಿ.ಅರ್. ಶಿವಾನಂದ ಜಿ.ಪಂ. ಮಾಜಿ ಉಪಾದ್ಯಕ್ಷ ಸುರೇಂದ್ರನಾಯ್ಕ, ಇತರರು ಇದ್ದರು.

Share this article