ಕನ್ನಡಪ್ರಭ ವಾರ್ತೆ ಮಳವಳ್ಳಿ
ಗಗನಚುಕ್ಕಿ ಜಲಪಾತೋತ್ಸವಕ್ಕೆ ಸಾರ್ವಜನಿಕರು ಬಂದು ಹೋಗಲು ಕೆಎಸ್‌ಆರ್‌ಟಿಸಿ ವತಿಯಿಂದ ವಿಶೇಷ ಬಸ್ ರೂಟ್ ಗಳ ವ್ಯವಸ್ಥೆ ಮಾಡಲಾಗಿದೆ. ರೊಟ್ಟಿಕಟ್ಟೆಯಿಂದ ಕಾರ್ಯಕ್ರಮ ನಡೆಯುವ ಸ್ಥಳಗಳವರೆಗೆ ಸಾರ್ವಜನಿಕರಿಗೆ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಎರಡು ದಿನಗಳ ಜಲಪಾತೋತ್ಸವಕ್ಕೆ ವಿಶೇಷ ದೀಪಾಲಂಕಾರ ಹಾಗೂ ಲೇಜರ್ ಶೋ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಉಪಾಹಾರ ಹಾಗೂ ಊಟದ ವ್ಯವಸ್ಥೆ ಜೊತೆಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.ಗಗನಚುಕ್ಕಿ ಜಲಪಾತ ಸಮೀಪ ಐಲ್ಯಾಂಡ್ ಪ್ರದೇಶದಲ್ಲಿದ್ದು, ಇಲ್ಲಿ ಸುತ್ತ ವಾಕಿಂಗ್ ಪಾಥ್ ನಿರ್ಮಿಸಲು ಟನಲ್ ಅಕ್ವೇರಿಯಂ ಸೇರಿದಂತೆ ಜಲ ಕ್ರೀಡೆ ಸಹ ನಡೆಸಲು ಅವಕಾಶವಿದೆ. ಈ ಯೋಜನೆಗೆ ಅನುಮತಿ ನೀಡುವಂತೆ ಜಲಪಾತೋತ್ಸವದಲ್ಲಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ವಿವರಿಸಿದರು.
ಜಲಪಾತವನ್ನು ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಲು, ಪ್ರವಾಸಿಗರು ವೀಕ್ಷಿಸಲು ದೊಡ್ಡದಾದ ಮೆಟ್ಟಿಲು ಹಾಗೂ ಆವರಣ ನಿರ್ಮಾಣವಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರು ಹಾಗೂ ಶಾಲಾ ಕಾಲೇಜಿನವರು ವಿಶೇಷ ಬೆಳದಿಂಗಳ ಕಾರ್ಯಕ್ರಮ ಹಮ್ಮಿಕೊಳ್ಳಲು ಅವಕಾಶ ನೀಡಲಾಗುವುದು ಎಂದರು.
ಈ ವೇಳೆ ಪ್ರಭಾರ ತಹಸೀಲ್ದಾರ್ ಬಿ.ವಿ.ಕುಮಾರ್, ಚೆಸ್ಕಾಂ ಎಂಜಿನಿಯರ್ ಪ್ರೇಮ್‌ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಧರ್, ಗ್ಯಾರಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷ ಚಿಕ್ಕಲಿಂಗಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊಡ್ಯಯ್ಯ, ಸಿ.ಪಿ ರಾಜು ಸೇರಿದಂತೆ ಇತರರು ಇದ್ದರು.