ಕನ್ನಡಪ್ರಭ ವಾರ್ತೆ ವಿಜಯಪುರ
ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮೆರಾ, ಬಾಡಿ ಕ್ಯಾಮೆರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಬೇಕು. ಪರೀಕ್ಷೆ ಶುರುವಾಗುವ ಅರ್ಧಗಂಟೆಯ ಮುಂಚೆ ಜಾಮರ್ ಆನ್ ಮಾಡುವುದು, ಪರೀಕ್ಷಾ ಮುಗಿದ ಅರ್ಧ ಗಂಟೆಯ ನಂತರ ಬಂದ್ ಮಾಡುವುದು. ಎಲ್ಲಾ ಸಿಸಿಟಿವಿ ಕ್ಯಾಮರಾಗಳ ವೀಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಮರ್ಪಕ ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಿದರು.
ಪ್ರತಿ ಅಭ್ಯರ್ಥಿಯ ಮಧ್ಯೆ ೨ಮೀಟರ್ ಅಂತರವಿರಬೇಕು. ವಿಶೇಷಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗಳಿಗೆ ತೆರಳಲು ವೀಲ್‌ಚೇರ. ಇಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆ ಕಡ್ಡಾಯವಾಗಿ ನೀಡಬೇಕು. ಮಹಿಳೆಯರಿಗೆ ಮಹಿಳಾ ಸಿಬ್ಬಂದಿಯೇ ತಪಾಸಣೆ ನಡೆಸಬೇಕು. ವ್ಯವಸ್ಥಿತ ಪರೀಕ್ಷೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಪರೀಕ್ಷಾ ದಿನದಂದು ಪೋಲಿಸ್ ಇಲಾಖೆಯಿಂದ ಎಲ್ಲ ರೀತಿಯ ಸಹಾಯ ಸಹಕಾರಿ ನೀಡುವುದಾಗಿ ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನಿರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.