ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಆರ್ಯ ಈಡಿಗ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಶ್ರಮಿಸಿದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ''''''''ಕೃತಜ್ಞತಾ ಸಭೆ''''''''ಯಲ್ಲಿ ಪಾಲ್ಗೊಂಡು ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಗೆದ್ದಿರಬಹುದು. ಆದರೆ, ಆಂತರಿಕವಾಗಿ ಸೋತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ಆಯ್ಕೆಗೆ ಬೆಲೆ ಕೊಡಬೇಕು. ಅವರ ಅಭಿಪ್ರಾಯವನ್ನು ಗೌರವಿಸಬೇಕು. ಆದ್ದರಿಂದ, ಈ ಸೋಲು ಮುಂದಿನ ಬದಲಾವಣೆಗೆ ಸ್ಫೂರ್ತಿ ಆಗಲಿದೆ ಎಂದರು.
ಚುನಾವಣೆಯಲ್ಲಿ 5.30 ಲಕ್ಷ ಮತ ಪಡೆಯುವ ಮೂಲಕ ಕ್ಷೇತ್ರದ ಮತದಾರರ ಹೃದಯ ಗೆದ್ದಿದ್ದೇವೆ. ಕಾಂಗ್ರೆಸ್ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶಕ್ತಿ ತುಂಬಿ ಬಡವರ ಹಸಿವು ನೀಗಿಸುತ್ತಿದೆ. ಆದರೆ, ಜನರು ಗೀತಕ್ಕ ಕೈ ಹಿಡಿಯಲಿಲ್ಲ. ಇದಕ್ಕೆ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರಮಿಸುತ್ತೇವೆ. ಬಿಜೆಪಿ ವಾಮಮಾರ್ಗ ಅನುಸರಿಸಿ ಅಧಿಕಾರಕ್ಕೆ ಬಂದಿದ್ದು ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.ಸಂಪರ್ಕಕ್ಕೆ ಸಿಕ್ಕ ಅವಕಾಶ:ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಾತನಾಡಿ, ಚುನಾವಣೆ ಪೂರ್ವ ಕ್ಷೇತ್ರದ ಎಲ್ಲಾ ಭಾಗದಲ್ಲಿ ಸಂಚರಿಸಿ, ಜನರಿಗೆ ಹತ್ತಿರ ಆಗಿದ್ದೇವೆ. ಇದು ದಣಿವಲ್ಲ. ಕ್ಷೇತ್ರದ ಜನರನ್ನು ಸಂಪರ್ಕಿಸಲು ಸಿಕ್ಕ ಅವಕಾಶ. ಇದರಿಂದ ಜನ 5.30 ಲಕ್ಷಗಳ ಮತ ನೀಡಿ, ಆಶೀರ್ವದಿಸಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲಾ ಮತದಾರರು ಹಾಗೂ ಕಾರ್ಯಕರ್ತರಿಗೆ ಧನ್ಯವಾದ ಹಾಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.
ಮಾಜಿ ಸಚಿವ ಕಿಮ್ಮನೆ ರತ್ನಾಕರ ಮಾತನಾಡಿ, ಸಾರ್ವಜನಿಕ ಜೀವನದಲ್ಲಿ ಸೋಲು-ಗೆಲುವು ಸಮನವಾಗಿ ಸ್ವೀಕರಿಸಬೇಕು. ಇಲ್ಲಿ ಸೋಲಿಗೆ ಎದೆಗುಂದಕೂಡದು. ಇದು ನನ್ನ ಅನುಭವದ ಮಾತು. ಆದ್ದರಿಂದ ಸೋಲಿಗೆ ಕಾರಣಗಳ ಕಂಡುಕೊಂಡು, ಜನ ಸಾಮಾನ್ಯರಿಗೆ ಹತ್ತಿರವಾಗಿ ಸೇವೆ ಸಲ್ಲಿಸಬೇಕು ಎಂದರು. ಈ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಸಿಕ್ಕಿರುವುದು ಕುರ್ಚಿ ಮಾತ್ರ, ಕುರ್ಚಿಯ ಕಾಲು ಬೇರೆಯವರ ಬಳಿ ಇದೆ. ಕಾಂಗ್ರೆಸ್ ಸೈದ್ಧಾಂತಿಕ ನಿಲುವು ತೆಗೆದುಕೊಂಡಿದೆ. ಇಲ್ಲಿ ಬಿಜೆಪಿ ಸಿದ್ಧಾಂತಗಳಿಂದ ದೇಶಕ್ಕೆ ಭವಿಷ್ಯ ಇಲ್ಲ. ನರೇಂದ್ರ ಮೋದಿಯವರು ಸಂವಿಧಾನಕ್ಕೆ ನಮಸ್ಕರಿಸುವುದು ನಾಟಕ ಮಾತ್ರ. ಆದ್ದರಿಂದ, ದೇಶದ ಜನರು ಎಚ್ಚರಗೊಳ್ಳಬೇಕು. ಮುಂದಿನ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಯಲ್ಲಿ ಸ್ಥಾನ ಪಡೆಯಬೇಕಿದೆ. ಇಲ್ಲವಾದರೆ, ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ಆದ್ದರಿಂದ, ಕಾರ್ಯಕರ್ತರು ಸಜ್ಜಾಗಬೇಕು ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್,ಎಸ್.ರವಿಕುಮಾರ್, ಬಲ್ಕೀಸ್ ಭಾನು, ಆರ್.ಎಂ.ಮಂಜುನಾಥ ಗೌಡ, ಎಚ್.ಸಿ.ಯೋಗೀಶ್, ನಾಗರಾಜ್ ಗೌಡ, ಎಂ.ಶ್ರೀಕಾಂತ್, ಬಿ.ಕೆ.ಮೋಹನ್, ಜಿ.ಪಲ್ಲವಿ, ಎನ್.ರಮೇಶ್,ಜಿ.ಡಿ.ಮಂಜುನಾಥ, ಎಸ್.ಕೆ.ಮರಿಯಪ್ಪ, ಚಂದ್ರಭೂಪಾಲ್, ಅನಿತಾ ಕುಮಾರಿ, ಮುಡುಬ ರಾಘವೇಂದ್ರ ಸೇರಿ ಕಾರ್ಯಕರ್ತರು ಇದ್ದರು.
ಶಕ್ತಿಧಾಮ ನಿರ್ಮಿಸುವೆ
-ಗೀತಾ, ಲೋಕಸಭೆ ಚುನಾವಣೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ
ನಗರದ ಈಡಿಗರ ಸಮುದಾಯ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಗೆ ಶ್ರಮಿಸಿದ ಚುನಾಯಿತ ಪ್ರತಿನಿಧಿಗಳು, ಮುಖಂಡರು ಕಾರ್ಯಕರ್ತರು ಹಾಗೂ ಅಭಿಮಾನಿಗಳ ಕೃತಜ್ಞತಾ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ ಭುಗಿಲೆದ್ದಿದೆ. ಸಚಿವ ಮಧು ಬಂಗಾರಪ್ಪ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಅವರ ಎದುರೇ ಕಾರ್ಯಕರ್ತರು ಆಕ್ಷೇಪಿಸಿದ್ದಾರೆ. ಬೈಂದೂರಿನಲ್ಲಿ 56 ಸಾವಿರ ಮತ ಲೀಡ್ ಬರುತ್ತದೆ. ಸಾಗರದಲ್ಲಿ 26 ಸಾವಿರ ಲೀಡ್ ಬರುತ್ತದೆ. ನಗರದಲ್ಲಿ 35 ಸಾವಿರಕ್ಕೂ ಹೆಚ್ಚು ಮತಗಳು ಬರುತ್ತದೆ ಎಂದು ಇಷ್ಟು ದೊಡ್ಡ ದೊಡ್ಡ ಭಾಷಣ ಮಾಡುತ್ತೀರಿ, ಹಾಗಾದರೆ ಮತಗಳು ಯಾಕೆ ಬೀಳಲಿಲ್ಲ ಎಂದು ಸಭೆಯಲ್ಲಿ ಕಾರ್ಯಕರ್ತ ಸಿದ್ದಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಈ ವೇಳೆ ಇತರೆ ಕಾರ್ಯಕರ್ತರು ಸಮಾಧಾನಗೊಳಿಸಿದರು.
ಪೋಟೋ: 10ಎಸ್‌ಎಂಜಿಕೆಪಿ01
ಶಿವಮೊಗ್ಗ ನಗರದ ಆರ್ಯ ಈಡಿಗ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸೋಮವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆಯಲ್ಲಿ ಶ್ರಮಿಸಿದ ಚುನಾಯಿತ ಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳಿಗೆ ''''''''ಕೃತಜ್ಞತಾ ಸಭೆ''''''''ಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.