ಕನ್ನಡಪ್ರಭ ವಾರ್ತೆ ಉಡುಪಿ
ಭಾವಿ ಪರ್ಯಾಯ ಪೀಠಾಧೀಶ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ನಡೆಯುವ ಈ ಗೀತೋತ್ಸವದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹಾಗೂ ಅಶ್ವಿನಿ ಪುನೀತ್ ರಾಜಕುಮಾರ್ ಭಾಗವಹಿಸಲಿದ್ದಾರೆ.
ಕೃಷ್ಣ ಪರಮಭಕ್ತರ ಮೂಲಕ ಒಂದು ಕೋಟಿಗೂ ಅಧಿಕ ಜನರಿಂದ ಭಗವದ್ಗೀತೆಯನ್ನು ಬರೆಸಿ ಉಡುಪಿಯ ಶ್ರೀಕೃಷ್ಣನಿಗೆ ಸಮರ್ಪಿಸುವುದು, ಜಾತಿ, ಮತ ಭೇದವಿಲ್ಲದೆ ಶ್ರೀ ಕೃಷ್ಣನ ಭಕ್ತಿಯನ್ನು, ಭಗವದ್ಗೀತೆಯನ್ನು ಜನತೆಗೆ ತಲುಪಿಸುವುದು ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.ಎರಡು ದಿನಗಳ ಈ ಗೀತೋತ್ಸವದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪುಸ್ತಕ ಮಳಿಗೆಗಳು ಇರಲಿವೆ. ಭಾನುವಾರ ನಡೆಯುವ ಸಮಾರೋಪ ಸಮಾರಂಭಕ್ಕೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕರಾದ ಉದಯ ಗರುಡಾಚಾರ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಹಲವಾರು ಗಣ್ಯರು ಭಾಗಿಯಾಗಲಿದ್ದರೆ ಎಂದು ಮಠದ ಪ್ರಕಟಣೆ ತಿಳಿಸಿದೆ.