ಇಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ

KannadaprabhaNewsNetwork |  
Published : Feb 27, 2024, 01:36 AM IST
26ಕೆಆರ್ ಎಂಎನ್ 5.ಜೆಪಿಜಿರಾಜ್ಯ ಸರ್ಕಾರಿ ನೌಕರರ ಸಂಘದ  ರಾಮನಗರ ಜಿಲ್ಲಾಧ್ಯಕ್ಷರಾದ ಕೆ.ಸತೀಶ್ ಅವರಿಗೆ ಜನ್ಮದಿನದ ಪ್ರಯುಕ್ತ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು. | Kannada Prabha

ಸಾರಾಂಶ

ರಾಮನಗರ: 7ನೇ ವೇತನ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27ರಂದು ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಜಿಲ್ಲೆಯ ಸರ್ಕಾರಿ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಸ್ವಯಂ ಪ್ರೇರಿತವಾಗಿ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ತಿಳಿಸಿದರು.

ನಗರದ ಜಿಲ್ಲಾ ಸರ್ಕಾರಿ ನೌಕರರ ಸಂಘದ ಕಚೇರಿಯಲ್ಲಿ ತಮ್ಮ ಜನ್ಮದಿನದ ಪ್ರಯುಕ್ತ ಸಂಘದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ಸತೀಶ್ ,ರಾಜ್ಯಸರ್ಕಾರದ ಕಣ್ತೆರೆಸಲು ನಡೆಸುತ್ತಿರುವ ಈ ಸಮ್ಮೇಳನದಲ್ಲಿ ಸರ್ಕಾರಿ ನೌಕರರು ಭಾಗಿಯಾಗುವ ಮೂಲಕ ರಾಜ್ಯಸಂಘಕ್ಕೆ ಶಕ್ತಿ ತುಂಬಬೇಕು ಎಂದರು.

ರಾಮನಗರ ಜಿಲ್ಲೆಯ ನಾಲ್ಕು ತಾಲೂಕು ಕೇಂದ್ರ ಗಳಿಂದ ಬಸ್ ವ್ಯವಸ್ಥೆ ಮತ್ತು ನೌಕರರಿಗೆ ಓ.ಓ.ಡಿ ಸೌಲಭ್ಯ ಇರಲಿದೆ. ಸುಮಾರು 75 ಕ್ಕೂ ಹೆಚ್ಚು ಸರ್ಕಾರಿ ಇಲಾಖೆಗಳಿಂದ ನೌಕರರು ಪಾಲ್ಗೊಂಡು ಸಮ್ಮೇಳನವನ್ನು ಯಶಸ್ವಿ ಮಾಡುವ ಮೂಲಕ ನಮ್ಮ ಹಕ್ಕಗಳನ್ನು ಸರ್ಕಾರದಿಂದ ಪಡೆದುಕೊಳ್ಳಲು ಸಹಕರಿಸಬೇಕೆಂದು ಕೋರಿದರು.

7ನೇ ವೇತನ ಜಾರಿ, ಎನ್‌ಪಿಎಸ್‌ನಿಂದ ಒಪಿಎಸ್ , ಮತ್ತು ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೆ ಮಾಡಿಸುವಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದ್ದು, ಸಮ್ಮೇಳನದ ಮೂಲಕ ಒತ್ತಡ ಹೇರಲಾಗುವುದು ಎಂದು ಸತೀಶ್ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಶಿವಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ಸತೀಶ್, ದರ್ಶನ್ ಮತ್ತಿತರರು ಹಾಜರಿದ್ದರು.

26ಕೆಆರ್ ಎಂಎನ್ 5.ಜೆಪಿಜಿ

ರಾಜ್ಯ ಸರ್ಕಾರಿ ನೌಕರರ ಸಂಘದ ರಾಮನಗರ ಜಿಲ್ಲಾಧ್ಯಕ್ಷ ಕೆ.ಸತೀಶ್ ಅವರಿಗೆ ಜನ್ಮದಿನದ ಪ್ರಯುಕ್ತ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...